Breaking News

Monthly Archives: ಜುಲೈ 2022

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »

CBSE 10th Result 2022: ಇಂದು ಸಿಬಿಎಸ್‌ಇ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( Central Board of Secondary Education- CBSE ), ಸಿಬಿಎಸ್‌ಇ 10 ನೇ ಫಲಿತಾಂಶವನ್ನು ( CBSE 10th Result 2022 ) ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಸಿಬಿಎಸ್‌ಇ 10 ನೇ ಫಲಿತಾಂಶ 2022 ಜುಲೈ 4, 2022 ರ ಇಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಒಮ್ಮೆ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ – cbse.gov.in …

Read More »

ಕರ್ನಾಟಕದ ಸಿನಿ ಶೆಟ್ಟಿಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ!

ಮುಂಬೈ (ಮಹಾರಾಷ್ಟ್ರ): ಭಾನುವಾರ ಇಲ್ಲಿ ನಡೆದ ವಿಎಲ್‌ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಪ್ರಶಸ್ತಿ ಗೆದ್ದರು. ಒಟ್ಟು 31 ಫೈನಲಿಸ್ಟ್‌ಗಳನ್ನು ಹಿಂದಿಕ್ಕಿದ ಅವರು ಅದ್ಭುತ ಸ್ಥಾನಮಾನ ಪಡೆದರು. ರಾಜಸ್ಥಾನದ ರೂಬಲ್ ಶೇಖಾವತ್ ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದರೆ, ಉತ್ತರ ಪ್ರದೇಶದ ಶಿಂತಾ ಚೌಹಾನ್ ಎರಡನೇ ರನ್ನರ್ ಅಪ್ ಗೌರವಕ್ಕೆ ಪಾತ್ರರಾದರು. ಪ್ರತಿ ಬಾರಿಯಂತೆ ಈ ವರ್ಷದ …

Read More »

ಬೆಂಗಳೂರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. : ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ಗಳು, ಅರಮನೆಯಂಥ ಬಂಗಲೆಗಳ ಮೇಲೆ ಬುಲ್ಡೋಜರ್‌ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ …

Read More »

ಏಕನಾಥ್​ ಶಿಂದೆಗೆ ಇಂದು ‘ಬಹುಮತ’ ಪರೀಕ್ಷೆ;

ಮುಂಬೈ (ಮಹಾರಾಷ್ಟ್ರ): ಉದ್ಧವ್​ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯ ಬೆಂಬಲದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುವ ಏಕನಾಥ್​ ಶಿಂದೆ ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸುವರು. ನಿನ್ನೆಯಿಂದ ಆರಂಭವಾಗಿರುವ ವಿಶೇಷ ಅಧಿವೇಶನದ ಮೊದಲ ದಿನ ಸ್ಪೀಕರ್​ ಆಯ್ಕೆಯಲ್ಲಿ ಗೆದ್ದಿದ್ದ ಶಿಂದೆ ಇಂದಿನ ಪರೀಕ್ಷೆಯಲ್ಲೂ ಸಲೀಸಾಗಿ ಜಯಿಸಲಿದ್ದಾರೆ. ವಿಶ್ವಾಸಮತವನ್ನು ಗೆಲ್ಲಲು ಬಿಜೆಪಿ ಮತ್ತು ಶಿವಸೇನೆ ಬಂಡಾಯ ಶಾಸಕರು ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಏಕನಾಥ್​ ಶಿಂದೆ ಸರ್ಕಾರಕ್ಕೆ ಅಗತ್ಯ ಬಹುಮತ ಇರುವ ಕಾರಣ ಇಂದಿನ ವಿಶ್ವಾಸಮತ …

Read More »

ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ಯಶವಂತ್ ಸಿನ್ಹಾ

ಬೆಂಗಳೂರು : ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ (ದ್ರೌಪದಿ ಮುರ್ಮು) ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ.ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಭಾನುವಾರ ಹೇಳಿಕೆ ನೀಡಿದ್ದಾರೆ.   ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ …

Read More »

ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಿರಲಿದೆ: ಅಮಿತ್ ಶಾ

ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಭಾರತೀಯ ಜನತಾ ಪಕ್ಷದ ಯುಗವಾಗಿರಲಿದೆ. ಅಲ್ಲದೆ ಭಾರತವು ಈ ಸಮಯದಲ್ಲಿ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹೈದರಾಬಾದ್ ನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಟುಂಬದ ರಾಜಕೀಯ, ಜಾತಿವಾದ ಮತ್ತು ತುಷ್ಟೀಕರಣದ ರಾಜಕೀಯಗಳು “ಮಹಾನ್ ಪಾಪಗಳು” ಮತ್ತು ವರ್ಷಗಳಿಂದ ದೇಶವು ಅನುಭವಿಸುತ್ತಿರುವ ನೋವುಗಳ ಹಿಂದಿನ ಕಾರಣ ಎಂದು ಶಾ ಹೇಳಿದರು. …

Read More »

ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯಸ್ವಂತ ಮಗಳ ಮೇಲೆರಗಿದ ತಂದೆ; ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ…!

ಕುಂದಾನಗರಿ ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳ ಮೇಲೆಯೇ ತಂದೆಯೊಬ್ಬ ೫ ವರ್ಷದ ಮಗಳ ಕೆನ್ನೆ ಹಾಗೂ ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ತಂದೆ ಕಾಕಾತಿ ಪಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ …

Read More »

ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.

ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ. ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್‌ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು …

Read More »

ರಜೆಯೂ ಇಲ್ಲ, ಭತ್ಯೆಯೂ ಸಿಗ್ತಿಲ್ಲ!; ಪೊಲೀಸ್ ಕಾನ್​ಸ್ಟೇಬಲ್​ಗಳಿಗೆ ಗೋಳು, ಠಾಣಾಧಿಕಾರಿಗೆ ಇಕ್ಕಟ್ಟು..

ಬೆಂಗಳೂರು :ವರಿಷ್ಠಾಧಿಕಾರಿಗಳ ಆದೇಶ ಒಂದೆಡೆ…, ಹಿರಿಯ ಅಧಿಕಾರಿಗಳ ಒತ್ತಡ ಇನ್ನೊಂದೆಡೆ. ಆದರೆ, ನಲುಗುತ್ತಿರುವವರು ಮಾತ್ರ ಕಾನ್​ಸ್ಟೇಬಲ್​ಗಳು…. ಆರಕ್ಷಕರಿಗೆ ದಿನದ ಹದಿಮೂರು ತಾಸು ಕೆಲಸ ಮಾಡಿದರೂ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ರಜೆಯೂ ಇಲ್ಲ; ಕೆಲಸ ಮಾಡಿದರೆ ಭತ್ಯೆಯೂ ದೊರೆಯದ ಅತಂತ್ರ ಸ್ಥಿತಿ ಅವರದ್ದಾಗಿದೆ. ಹೀಗಾಗಿ ಕಡ್ಡಾಯವಾಗಿ ವಾರದ ರಜೆ ಹಾಗೂ ರಜೆ ಬದಲಿಗೆ ಭತ್ಯೆ ಕೊಡುವ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ‘ಕಳ್ಳಾಟ’ ಆಡುತ್ತಿರುವ ಆರೋಪ ಕೇಳಿಬಂದಿದೆ. ಕಡ್ಡಾಯವಾಗಿ ವಾರದ ರಜೆ ಕೊಡಬೇಕು …

Read More »