Breaking News

Daily Archives: ಆಗಷ್ಟ್ 18, 2022

ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ : ಕೋಡಿಮಠದ ಶ್ರೀ

ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು.   ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ …

Read More »

ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭಾಶಯಗಳು, ಜನ್ಮಾ ಶ್ಟ ಮಿ ಬಗ್ಗೆ ಒಂದು ಮಾಹಿತಿ

ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ೧. ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ೨. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ೩. …

Read More »

ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ : ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು …

Read More »

15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ …

Read More »

ಬೆಳಗಾವಿ ನೂತನ ಆರ್‌ಸಿ ಕೆ.ಪಿ.ಮೋಹನ್‌ರಾಜ್

ಬೆಳಗಾವಿಯ ನೂತನ ಪ್ರಾದೇಶಿಕ ಆಯುಕ್ತರಾಗಿ ಕೆ.ಪಿ.ಮೋಹನ್‍ರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರ ಸ್ಥಾನಕ್ಕೆ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಕೆ.ಪಿ.ಮೋಹನ್‍ರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಗುರುವಾರ ಕೆ.ಪಿ.ಮೋಹನ್‍ರಾಜ್ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಉತ್ತರ ಶಾಸಕ ಅನಿಲ್ ಬೆನಕೆ ನೂತನ ಪ್ರಾದೇಶಿಕ ಆಯುಕ್ತರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು.

Read More »