Breaking News

Daily Archives: ಆಗಷ್ಟ್ 23, 2022

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ಅಭಿನಂದನೆ ಸಲ್ಲಿಸುತ್ತೇನೆ: ಯತ್ನಾಳ್

ವಿಜಯಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ’ ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ.   ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ …

Read More »

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ.? ಕೆಲವರಿಗೆ ಕೊಕ್, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಕಂತಿನ ಸಂಪುಟ ಸರ್ಜರಿ ಶೀಘ್ರದಲ್ಲೇ ನಡೆಯಲಿದೆ. ಖಾಲಿ ಇರುವ 5 ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಇದೇ ವೇಳೆ ಕೆಲವರಿಗೆ ಕೊಕ್ ನೀಡಿ ಮತ್ತೆ ಕೆಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತನೆ ನಡೆದಿದೆ. ಪ್ರಮುಖವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನಪ್ರಿಯ ಮಂತ್ರಿ ಮಂಡಲ ರಚಿಸಲು ಪಕ್ಷದ …

Read More »

KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಗ್ರೂಪ್ ಎ ಹುದ್ದೆ …

Read More »

ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ

ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವುಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ. ಮಾಧ್ಯಮಗಳಲ್ಲಿ ವರದಿಯಾದ ವರದಿಗಳನ್ನು ಉಲ್ಲೇಖಿಸಿ, ಫಾರ್ಮ್ -6 ಬಿ ಯಲ್ಲಿ ಆಧಾರ್ ಸಲ್ಲಿಸುವುದು …

Read More »

ದೇವರುಗಳು ಮೇಲ್ಜಾತಿಯವರಲ್ಲ, ಶಿವನೂ ಪರಿಶಿಷ್ಟನೇ: ಜೆಎನ್‌ಯು ಕುಲಪತಿ ಶಾಂತಿಶ್ರೀ

ನವದೆಹಲಿ: ಮಾನವಶಾಸ್ತ್ರದ ಪ್ರಕಾರ ದೇವರುಗಳು ಮೇಲ್ಜಾತಿಗೆ ಸೇರಿದವರಲ್ಲ. ಶಿವನೂ ಕೂಡ ಪರಿಶಿಷ್ಟ ಜಾತಿ ಅಥವಾ ಬುಡಕಟ್ಟಿನವನಾಗಿರಬಹುದು ಎಂದು ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು)ನ ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್‌ ಅವರು ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.   ಡಾ. ಬಿ ಆರ್ ಅಂಬೇಡ್ಕರ್ ಉಪನ್ಯಾಸ ಸರಣಿಯ ಅಂಗವಾಗಿ ಆಯೋಜಿಸಿದ್ದ ‘ಲಿಂಗ ನ್ಯಾಯದ ಕುರಿತು ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳು: ಏಕರೂಪ ನಾಗರಿಕ ಸಂಹಿತೆಯ ವಿಶ್ಲೇಷಣೆ’ ಎಂಬ ವಿಷಯದ ಕುರಿತು ಅವರು …

Read More »