ವಿಜಯಪುರ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಉರುಳುತ್ತವೆ ಎಂದಿರುವ ಸಂಸದ ಜಗ್ಗೇಶ ಹೇಳಿಕೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕೆ ಸಮರ್ಥಿಸಿದ್ದಾರೆ. ಮಾಧ್ಯಮಗಳ ಮಟ್ಟಿಗೆ ಅದು ವಿವಾದಾತ್ಮಕ ಇರಬಹುದು, ಆದರೆ ವಾಸ್ತವ ಹಾಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಬುಧವಾರ ನಗರದಲ್ಲಿ ವಿಜಯಪುರ ನಗರದ ಗಾಂಧಿಚೌಕ್ ಬಳಿ ಪಾಲಿಕೆಯ ವಲಯ ಕಚೇರಿಗೆ ಚಾಲನೆ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಪ್ಪು …
Read More »Monthly Archives: ಆಗಷ್ಟ್ 2022
ಬೆಳಿಗ್ಗೆ ಯಿಂದ ಹುಡುಕಿದರೂ ಸಿಗದ ಚಿರತೆ..
ಬೆಳಗಾವಿ: ಇಲ್ಲಿನ ಗಾಲ್ಫ್ ಮೈದಾನಕ್ಕೆ ನುಗ್ಗಿದ ಚಿರತೆ ಸೆರೆಗಾಗಿ ಆನೆಗಳಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಕ್ರೇಬೈಲ್ ಶಿಬಿರದಿಂದ ನಗರ ತಲುಪಿರುವ ಅರ್ಜುನ(20) ಮತ್ತು ಆಲೆ(14) ಬೆಳಗ್ಗೆ ವಿಶ್ರಾಂತಿ ಪಡೆದವು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಕಾರ್ಯಾಚರಣೆ ಆರಂಭವಾಯಿತು. ಮೈದಾನದ ಸುತ್ತಲೂ ಬಲೆ ಅಳವಡಿಸಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಕ್ರಮ ವಹಿಸಲಾಗಿದೆ. ಆ.5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಚಿರತೆ …
Read More »ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು
ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ …
Read More »ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ವಿಧೇಯಕ-2022ರ ಸೆಕ್ಷನ್ 121 ಹಾಗೂ ಸೆಕ್ಷನ್ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ …
Read More »ಪ್ರಶ್ನೆಪತ್ರಿಕೆ ಸೋರಿಕೆ ಮಾಡದೇ ಒಎಂಆರ್ ಶೀಟ್ ತಿದ್ದಲು ಸಂಚು!; ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ
ಬೆಂಗಳೂರು :ಪೊಲೀಸ್ ಸಬ್ಇನ್ಸ್ಪೆಕ್ಟರ್ 545 ಹುದ್ದೆಗಳ ನೇಮಕಾತಿ ವೇಳೆ ಕೇಂದ್ರ ಸ್ಥಾನದಿಂದಲೇ ಪ್ರಶ್ನೆಪತ್ರಿಕೆ ಲೀಕ್ ಮಾಡಲು ಪ್ಲಾಯನ್ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಭಯದಿಂದ ಪ್ಲಾಯನ್-ಬಿ ಒಎಂಆರ್ ಶೀಟ್ ತಿದ್ದುವುದನ್ನು ಫೈನಲ್ ಮಾಡಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಹಿಂದಿನ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ನಡುವೆಯೇ ಪ್ಲ್ಯಾನ್-ಎ ಮತ್ತು ಬಿ ಬಗ್ಗೆ ರಹಸ್ಯ ಚರ್ಚೆ ನಡೆದಿತ್ತು. ಆನಂತರ ಉಳಿದವರನ್ನು ಅವರ ಕೆಲಸಕ್ಕೆ ತಕ್ಕಂತೆ ಕಮಿಷನ್ …
Read More »2024ರ ಲೋಕಸಭಾ ಚುನಾವಣೆ: ನರೇಂದ್ರ ಮೋದಿ Vs ಯಾರು?
2024ರ ಲೋಕಸಭಾ ಚುನಾವಣೆಗೆ 2 ವರ್ಷಗಳಷ್ಟೇ ಬಾಕಿ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಸ್ಪರ್ಧಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕಡಿದುಕೊಂಡ ಬಳಿಕ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹೆಸರೇ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇದನ್ನು ಆರ್‌ಜೆಡಿಯ ತೇಜಸ್ವಿ ಯಾದವ್ ಈಚೆಗೆ ಅನುಮೋದಿಸಿದ್ದರು. ಇನ್ನು, ದೆಹಲಿ ಸಿಎಂ ಕೇಜ್ರಿವಾಲ್ ಮುಂದಿನ ಪಿಎಂಬ ಅಭ್ಯರ್ಥಿ ಎಂದು ಅಲ್ಲಿನ ಉಪಮುಖ್ಯಮಂತ್ರಿ ಸಿಸೊಡಿಯಾ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. …
Read More »ಬಿಪಿಎಲ್ ಕುಟುಂಬಗಳಿಗೆ ಬಿಗ್ ಶಾಕ್: ‘ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಕಡಿತ ಸಾಧ್ಯತೆ
ಬೆಂಗಳೂರು: ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟಂಬರ್ ವರೆಗೆ ವಿತರಿಸಲಾಗುವುದು. ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಬಡವರಿಗೆ ಆಹಾರ ಭದ್ರತೆ …
Read More »ಹೆಚ್ಚು ಸಾಲ’ದಲ್ಲಿ ಅದಾನಿ ಸಮೂಹ: ಕ್ರೆಡಿಟ್‌ಸೈಟ್ಸ್ ಎಚ್ಚರಿಕೆ
ನವದೆಹಲಿ: ದೇಶದ ಅತ್ಯಂತ ಶ್ರೀಮಂತ, ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹವು ‘ಹೆಚ್ಚು ಸಾಲದಲ್ಲಿದೆ’ ಎಂದು ಫಿಚ್ ಸಮೂಹದ ಅಂಗಸಂಸ್ಥೆ ಕ್ರೆಡಿಟ್‌ಸೈಟ್ಸ್ ವರದಿ ಹೇಳಿದೆ. ಸಮೂಹವು ಹಾಲಿ ಹಾಗೂ ಹೊಸ ವಹಿವಾಟುಗಳಿಗೆ ಹೂಡಿಕೆ ಮಾಡಲು ಸಾಲವನ್ನು ಮುಖ್ಯವಾಗಿ ಬಳಸುತ್ತಿದೆ ಎಂದು ಕೂಡ ವರದಿಯಲ್ಲಿ ಹೇಳಲಾಗಿದೆ. ‘ಹೆಚ್ಚು ಮಹತ್ವಾಕಾಂಕ್ಷೆಯ, ಸಾಲದ ಹಣದಲ್ಲಿ ನಡೆಯುವ ಬೆಳವಣಿಗೆ ಯೋಜನೆಗಳು ಕಾಲಕ್ರಮೇಣ ಭಾರಿ ಸಾಲದ ಸುಳಿಗೆ ಸಿಲುಕಬಹುದು. ಅತ್ಯಂತ ನಕಾರಾತ್ಮಕ ಸಂದರ್ಭದಲ್ಲಿ ಮಾತ್ರ …
Read More »ರಾಜ್ಯದ ವಿವಿಧೆಡೆ ಎರಡು ದಿನ ಮಳೆ
ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …
Read More »10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, 2016 ರಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟಪಡಿಸಿದ್ದು, ಈ ಕುರಿತು …
Read More »
Laxmi News 24×7