ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದಿರುವುದನ್ನು ಒಪ್ಪಲಾಗದು.ಅದೇ ರೀತಿ ಸಿದ್ದರಾಮಯ್ಯ ಅವರು ಸಾರ್ವಕರ್ ಅವರ ಬಗ್ಗೆ ನೀಡಿದ ಹೇಳಿಕೆಯೂ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಖಂಡಿಸಿದ್ದಾರೆ. ನಾನು ಕೂಡ ತೀವ್ರವಾಗಿ ಖಂಡಿಸುತ್ತೇನೆ. ವೈಚಾರಿಕ ಭಿನ್ನಾಭಿಪ್ರಾಯ ಏನೇ …
Read More »Monthly Archives: ಆಗಷ್ಟ್ 2022
ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ‍್ಯಾಲಿ …
Read More »ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್
ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸುಳ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …
Read More »ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ಶುಕ್ರವಾರ (ಆಗಸ್ಟ್ 19) ಬೆಳಗ್ಗೆ ದಾಳಿ ನಡೆಸಿದೆ. ತಮ್ಮ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿರುವುದಾಗಿ ಟ್ವೀಟ್ ಮಾಡಿರುವ ಡಿಸಿಎಂ ಸಿಸೋಡಿಯಾ, ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವ ಮೂಲಕ ಶೀಘ್ರವೇ ಸತ್ಯ ಹೊರಬರಲಿದೆ ಎಂದು ತಿಳಿಸಿದ್ದಾರೆ. “ನಾವು ಸಿಬಿಐ ಅನ್ನು ಸ್ವಾಗತಿಸುತ್ತೇವೆ. ಶೀಘ್ರವಾಗಿ ಸತ್ಯ ಹೊರಬರಲು ನಾವು ಎಲ್ಲಾ ರೀತಿಯಿಂದಲೂ …
Read More »ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ
ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …
Read More »ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು : ”ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ …
Read More »ಕಾರ್ ಹೊಂದಿದವರ 12584 ಸೇರಿ 3.30 ಲಕ್ಷ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ರದ್ದು
ಬೆಂಗಳೂರು: ಐಷಾರಾಮಿ ಕಾರ್ ಹೊಂದಿದವರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಪತ್ತೆಯಾಗಿದ್ದು 12,584 ಕಾರ್ ಮಾಲೀಕರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. 21,679 ಅಂತ್ಯೋದಯ, 3,08,345 ಬಿಪಿಎಲ್ ಪಡಿತರ ಚೀಟಿ ಸೇರಿದಂತೆ ಸುಮಾರು 3.30 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು, ಕೆಲವು ಪಡಿತರ ಚೀಟಿಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿ ಕೊಡಲಾಗಿದೆ. ರಾಜ್ಯದಲ್ಲಿ ಕಾರ್ ಹೊಂದಿದವರು ಕೂಡ ಪಡಿತರ ಚೀಟಿ ಪಡೆದುಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಸಾರಿಗೆ ಇಲಾಖೆಯ ಸಹಕಾರ …
Read More »ಮುಸ್ಲಿಂ ಮನೆಯಲ್ಲಿ ಸ್ವರೂಪನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ: ಎಲ್ಲರಿಂದಲೂ ಮೆಚ್ಚುಗೆ
ಗದಗ: ಜಿಲ್ಲೆಯಲ್ಲಿ ಹುಡ್ಕೋ ಕಾಲೋನಿಯ ಸಿಕಂದರ್ ಬಡೆಖಾನ್ ಕುಟುಂಬಸ್ಥರಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪೂಜೆ ನೆರೆವೇರಿಸಿದೆ. ಈ ವೇಳೆ ಸ್ವರೂಪಾನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಕ್ಯಾರಕೊಪ್ಪದ ಓಂಕಾರ ಆಶ್ರಮದ ಸ್ವರೂಪನಂದ ಸ್ವಾಮೀಜಿಯವರ ಪಾದಪೂಜೆ ಮಾಡಿ ಎಲ್ಲರ ಗಮನ ಸೆಳೆದಿದೆ. ನಿವೃತ್ತ ಪ್ರಾಧ್ಯಾಪಕರಾದ ಸಿಕಂದರ್ ಅವರು ಸ್ವರೂಪನಂದ ಶ್ರೀಗಳ ಭಕ್ತರಾಗಿದ್ದಾರೆ. ಪಾದಪೂಜೆಯ ಮೂಲಕ ಸ್ವಾಮೀಜಿಯವರು ಬಡೆಖಾನ್ ಮನೆಯಲ್ಲಿಯೇ ಪ್ರಸಾದ ಸ್ವೀಕರಿಸಿದ್ದಾರೆ.ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಪ್ರೇರಕವಾದ ಈ …
Read More »ಸಿದ್ದರಾಮಯ್ಯ ಏಲ್ಲಿ ಬೇಕಾದ್ರು ಹೋಗಲಿ, ಮೊಟ್ಟೆ ಎಸೆಯಬೇಡಿ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ, ಆಗಸ್ಟ್ 19: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದರೂ ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವ ಕ್ರಮ …
Read More »ರೈಲ್ವೆ ಪೊಲೀಸರಿಗೆ ಶೋಲ್ಡರ್ ಲೈಟ್: ರಾಜ್ಯದಲ್ಲಿ ಪ್ರಥಮ ಬಾರಿಗೆ ಜಾರಿ
ಬೆಂಗಳೂರು: ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಅನುವಾಗುವಂತೆ ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ ಪರಿಚಯಿಸಲಾಗಿದೆ. ರಾತ್ರಿ ವೇಳೆ ರೈಲ್ವೆ ಪೊಲೀಸರು ರೈಲು ಗಸ್ತು, ರೈಲು ಹಳಿಗಳ ಗಸ್ತು ಮಾಡುತ್ತಾರೆ. ನಿಗದಿತ ಮಾರ್ಗದಲ್ಲಿ ರೈಲು ಹಳಿಗಳ ಮೇಲೆ ನಡೆದು ಹೋಗುವ ಸಂದರ್ಭದಲ್ಲಿ ಕತ್ತಲೆ ಇರುತ್ತದೆ. ಕೆಲವು ಬಾರಿ ರೈಲ್ವೆ ಹಳಿಗಳ ಮೇಲೆ …
Read More »
Laxmi News 24×7