ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ …
Read More »Monthly Archives: ಆಗಷ್ಟ್ 2022
ಉಮೇಶ ಕತ್ತಿ ಮಂತ್ರಿಯಾಗಲು ಲಾಯಕ್ಕಲ್ಲ:ಸಿದ್ದರಾಮಯ್ಯ
ರಾಜ್ಯ ಸರ್ಕಾರದ ವೀಕೆಂಡ್ ಕಫ್ರ್ಯೂಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಲಸಿಕೆ ನೀಡಲಿ, ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ. ನನ್ನ ಪ್ರಕಾರ ವೀಕೆಂಡ್ ಕಫ್ರ್ಯೂ ಬೇಕಿಲ್ಲ ಎಂದರು. ಮಾಸ್ಕ್ ಹಾಕಲ್ಲ ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಉಮೇಶ ಕತ್ತಿ ಸಚಿವರಾಗಿರಲು ಲಾಯಕ್ಕಾ, ಸರ್ಕಾರ ನಡೆಸಲು ಲಾಯಕ್ಕ..? ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ …
Read More »ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು …
Read More »ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ
ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷವೂ ವರುಣನ ಆರ್ಭಟ ಜೋರಾಗಿದ್ದು. ಕಳೆದ ಜೂನ್ ಒಂದರಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 990 ಮನೆಗಳು, ಒಂದು ಸಾವಿರ ಕಿ.ಮೀ ರಸ್ತೆ ಹಾಗೂ 18 ಸೇತುವೆಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಹೌದು ಮಹಾರಾಷ್ಟ್ರ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಹಳೆ ಮನೆಗಳು ಕುಸಿಯುತ್ತಿವೆ. ಬೆಳಗಾವಿಯ ಕಾಮತ್ ಗಲ್ಲಿಯ ಅನಿಲ್ ಬಡಮಂಜಿ ಹಾಗೂ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ನಬಿಸಾಬ್ …
Read More »ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಸ್ವಾತಂತ್ರ್ಯ ಯೋಧರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
“ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ)” ಚಳವಳಿಯಲ್ಲಿ ಭಾಗವಹಿಸಿದ್ದ ಇಬ್ಬರು ಸ್ವಾತಂತ್ರ್ಯ ಯೋಧರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಂಗಳವಾರ ಸನ್ಮಾನಿಸಿ, ಗೌರವಿಸಿದರು. ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಅವರನ್ನು ಜಿಲ್ಲಾಡಳಿತದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿದರು. ಹಿರಿಯ ಸ್ವಾತಂತ್ರ್ಯ ಯೋಧರಾದ ಇಲ್ಲಿನ ಅನಗೋಳದ ರಾಣಿ ಚೆನ್ನಮ್ಮ ನಗರದ ರಾಜೇಂದ್ರ ಧರ್ಮಪ್ಪಾ ಕಲಘಟಗಿ ಹಾಗೂ ಕುವೆಂಪು ನಗರದ ವಿಠ್ಠಲ ಯಾಳಗಿ ಅವರನ್ನು …
Read More »ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದ ಕಾಂಗ್ರೆಸ್
ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರವಾಗಿ ಮತ್ತೆ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾಲೆಳೆದಿದೆ. ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ …
Read More »ಅಭಿನವ ಕಾಡಸಿದ್ದೇಶ್ವರ ಸ್ವಾಮಿಜಿ ಕಾರು ಅಪಘಾತ
ಬಾಗಲಕೋಟೆ: ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಸ್ವಾಮೀಜಿ ಅವರ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಕಾರು ಚಾಲಕ ಸೇರಿದಂತೆ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ …
Read More »ಬೆಳಗಾವಿ: ಈ 22 ಶಾಲೆಗಳಿಗೆ ಬುಧವಾರವೂ ರಜೆ: B.E.O.ರವಿ ಭಜಂತ್ರಿ
ಬೆಳಗಾವಿ – ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಜಾಧವ ನಗರದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಸಿಕ್ಕದ ಕಾರಣ ಸುತ್ತಲಿನ 22 ಶಾಲೆಗಳಿಗೆ ರಜೆ ನೀಡಲಾಗಿದೆ. ಕಳೆದ ರಾತ್ರಿ ಗಾಲ್ಫ್ ಮೈದ0ಾನದಲ್ಲಿ ಕ್ಯಾಮರಾದಲ್ಲಿ ಸೆೆರೆಸಿಕ್ಕ ಚಿರತೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಮುಂದುವರಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ಮತ್ತು ನಗರ ಬಿಇಒ ರವಿ ಭಜಂತ್ರಿ ತಿಳಿಸಿದ್ದಾರೆ. …
Read More »ಕರುನಾಡ ವೀರ ರಾಣಿಯರು ದಾಸ್ಯಮುಕ್ತಿಗಾಗಿ ಹೋರಾಡಿದ ಧೀರೋದಾತ್ತ ಪರಂಪರೆ
ಕರುನಾಡಿನ, ಕಿತ್ತೂರು ಮತ್ತು ಉಳ್ಳಾಲದ ರಾಣಿಯರಿಬ್ಬರೂ ಆಳಿದ್ದು ಸಣ್ಣ ಸಣ್ಣ ಪ್ರಾಂತ್ಯಗಳೇ. ಆದರೆ, ಚೆನ್ನಮ್ಮ ಮತ್ತು ಅಬ್ಬಕ್ಕನ ಹೋರಾಟ ಮುಂದೆ ದೇಶ ದಾಸ್ಯದಿಂದ ಮುಕ್ತಿ ಹೊಂದಲು ಪ್ರೇರಣೆಯಾಯ್ತು. ಬ್ರಿಟಿಷರ ವಿರುದ್ಧ ಸಿಡಿದೆದ್ದ ದೇಶದ ಮೊದಲ ವೀರ ನಾರಿ ಚೆನ್ನಮ್ಮ, ಸ್ವಾತಂತ್ರ್ಯ-ಸ್ವಾಭಿಮಾನದ ಪ್ರತಿರೂಪ. ಕಾಕತಿಯ ದೇಸಾಯಿ ದೂಳಪ್ಪಗೌಡ-ಪದ್ಮಾವತಿಯವರ ಏಕಮಾತ್ರ ಪುತ್ರಿ. 1782ರಲ್ಲಿ ಪಟ್ಟಕ್ಕೇರಿದ್ದ ಕಿತ್ತೂರಿನ ಮಲ್ಲಸರ್ಜನ, ಚೆನ್ನಮ್ಮ ಅವರ ಕೈಹಿಡಿದರು. 1816ರಲ್ಲಿ ಮಲ್ಲಸರ್ಜನ ಕಾಲವಾದ ತರುವಾಯ, ಹಿರಿಯ ದೇಸಾಯಿಣಿ ರುದ್ರಮ್ಮರ ಮಗ …
Read More »ಹೆಸರಿಗೆ ಮಾತ್ರ ಹಾಲಿನ ವ್ಯಾಪಾರ, ಆದ್ರೆ ಮಾಡೋದು ಬೇರೆನೇ ಕೆಲಸ
ಇವರೆಲ್ಲಾ ಮಾಡುತ್ತಿದ್ದದ್ದು ಹಾಲಿನ ವ್ಯಾಪಾರ (Milk Business). ಆದ್ರೆ ಒಳಗೆ ನಡೀತಾ ಇದ್ದಿದ್ದು ಮಾತ್ರ ಬೇರೆನೇ ಕೆಲಸ. ಹೌದು, ಹುಬ್ಬಳ್ಳಿಯಲ್ಲಿ ನಕಲಿ ನೋಟು (Fake Note) ಚಲಾವಣೆ ಗ್ಯಾಂಗ್ನ್ನು (Gang) ಪೊಲೀಸರು ಭೇದಿಸಿದ್ದಾರೆ. ಈ ಕೇಸ್ನಲ್ಲಿ ತಗ್ಲಾಕೊಂಡ ವ್ಯಕ್ತಿಯ ಹಿನ್ನೆಲೆ ಕೇಳಿದ್ರೆ ಇನ್ನೂ ಶಾಕ್ ಆಗ್ತೀರಾ. ಯಾಕೆಂದರೆ ಆತ ಸ್ಥಳೀಯ ಬಿಜೆಪಿ ಮುಖಂಡ (BJP Leader). ಹೊರಗೆ ಈತ ಸೇರಿ ಉಳಿದ ಆರೋಪಿಗಳು (Accused) ನಡೆಸ್ತಿದ್ದದ್ದು ಹಾಲಿನ ವ್ಯಾಪಾರ. ಆದರೆ …
Read More »
Laxmi News 24×7