Breaking News

Monthly Archives: ಆಗಷ್ಟ್ 2022

ನಂದು ಇನ್ನೊಂದು ವಿಡಿಯೋ ಇದೆ; ಅದ್ಯಾವಾಗ ಬಿಡ್ತಾನೋ ಗೊತ್ತಿಲ್ಲ-ಸೋನು ಗೌಡ

ಟಿಕ್​ ಟಾಕ್​ ಹಾಗೂ ರೀಲ್ಸ್​ ಮೂಲಕ ಫೇಮಸ್​ ಆಗಿರೋ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಈಗ ಬಿಗ್​ ಬಾಸ್​ (Bigg Boss) ರಿಯಾಲಿಟಿ ಶೋನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ (Bigg Boss House) ಸ್ಪರ್ಧಿಗಳು ತಮ್ಮ ಖಾಸಗಿ ಬದುಕಿನ ಅನೇಕ ವಿವರಗಳನ್ನು ತೆರೆದಿಡುತ್ತಿದ್ದಾರೆ. ಸೋನು ಶ್ರೀನಿವಾಸ್​​ ಗೌಡ ಅವರ ಖಾಸಗಿ ವಿಡಿಯೋ (Sonu Srinivas Gowda Viral Video) ಲೀಕ್​ ಆಗಿತ್ತು ಎಂಬುದು …

Read More »

ಎಲ್ಲಾ ನಿಯಮ ಗಾಳಿಗೆ ತೂರಿ ರಾಷ್ಟ್ರ ಧ್ವಜ ತಯಾರಿಕೆಗೆ ಅವಮಾನ ಮಾಡಲಾಗುತ್ತಿದೆ

ದೇಶಕ್ಕೆ ಈಗ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆದ್ರೆ ಕೇಂದ್ರ ಸರ್ಕಾರದ ಒಂದು ನಿರ್ಧಾರ ಖಾದಿ ಪ್ರೇಮಿಗಳು ಖಾದಿ ಗ್ರಾಮೋದ್ಯೋಗ ಸಂಸ್ಥೆಗಳ ಪಾಲಿಗೆ ಕಂಟಕವಾಗಿದೆ. ಹರಘರ ತಿರಂಗ ಹೆಸರಿನಲ್ಲಿ ರಾಷ್ಟ್ರ ಧ್ವಜಕ್ಕೆ ಇರುವ ಗೌರವ ಕಡಿಮೆ ಮಾಡಲು ಹೊರಟ್ಟಿರುವದು ಖಾದಿ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ದೇಶಕ್ಕೆ ಗೌರವ ಸಿಗುವದು ಆ ರಾಷ್ಟ್ರದ ರಾಷ್ಟ್ರ ಧ್ಬಜದಿಂದ.ಅಂತ ಒಂದು ರಾಷ್ಟ್ರ ಧ್ವಜ ತಯಾರಾಗುವದು ಹುಬ್ಬಳ್ಳಿಯ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ …

Read More »

ಗೋಡೆ ಕುಸಿದು ನಾಲ್ವರಿಗೆ ಗಂಭೀರ ಗಾಯ

ರಾಯಬಾಗ ತಾಲೂಕಿನ ಸೌಂದತ್ತಿವಾಡಿಯಲ್ಲಿ ಮೊಹರಂ ಹಬ್ಬದ ನಿಮಿತ್ಯ ಕುಂಡಲಿ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಗೋಡೆ ಕುಸಿದು ನಾಲ್ವರಿಗೆ ಗಂಭೀರ ಗಾಯವಾಗಿದೆ. ನಿರಂತರವಾಗಿ ಬೀಳುತ್ತಿರುವ ಅತಿಯಾದ ಮಳೆಯಿಂದ ಗೋಡೆ ಕುಸಿದು ಬಿದ್ದಿದೆ. ಅನೇಕ ಮಹಿಳೆಯರು ದೇವರಿಗೆ ಪೂಜೆ ಸಲ್ಲಿಸುವಾಗ ಈ ಘಟನೆ ನಡೆದಿದ್ದು ಮಂಗಲ ಹಿರೇಗೌಡ, ಶ್ರೀದೇವಿ ತಂಗಡೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ರಕ್ತಸ್ರಾವವಾಗಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ …

Read More »

ಬಳ್ಳಾರಿ ನಾಲಾಗೆ ಡಿಸಿ ನಿತೇಶ್ ಪಾಟೀಲ್ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದ ಜಿಲ್ಲಾಧಿಕಾರಿಗಳು

ಬೆಳಗಾವಿಯಲ್ಲಿ ಭಾರಿ ಮಳೆ ಹಿನ್ನೆಲೆ ಬಳ್ಳಾರಿ ನಾಲಾದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಮಳೆ ನಿಂತ ಮೇಲೆ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಭರವಸೆ ಕೊಟ್ಟಿದ್ದಾರೆ. ಹೌದು ಭಾರಿ ಮಳೆಯಿಂದ ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಡಿಯೂರಪ್ಪ ಮಾರ್ಗದಲ್ಲಿರುವ ಬಳ್ಳಾರಿ ನಾಲಾಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ …

Read More »

ಪಾಟೀಲ್ ಗಲ್ಲಿಯಲ್ಲಿ ಮಳೆ ನೀರು ಮನೆಯೊಳಕ್ಕೆ ನುಗ್ಗಿ ಅವಾಂತರ

ಬೆಳಗಾವಿಯ ಪಾಟೀಲ್‍ಗಲ್ಲಿಯಲ್ಲಿ ಒಳಚರಂಡಿ ಬ್ಲಾಕ್ ಆಗಿರುವ ಕಾರಣ ಮಳೆಯ ನೀರು ಹರಿದು ಹೋಗದೇ ಅಕ್ಕಪಕ್ಕದ ಮನೆಗಳಿಗೆ ನುಗ್ಗಿ ಇಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಬೇಕೆಂದು ಪಾಟೀಲ್ ಗಲ್ಲಿಯ ನಿವಾಸಿ ಮನವಿ ಮಾಡಿದ್ದಾರೆ. ಹೌದು ಬೆಳಗಾವಿ ನಗರದ ಪಾಟೀಲ್‍ಗಲ್ಲಿಯ ಮನೆ ನಂ 561/62 ರಲ್ಲಿ ಚಿರಾಗ್ ಪೊರ್‍ವಾಲ್ ರವರಿಗೆ ಸೇರಿದ ಮನೆಯಿದೆ. ಇಲ್ಲಿ ಒಳಚರಂಡಿಯಿಲ್ಲದ ಕಾರಣ ನಗರದಲ್ಲಿ ವಿಪರೀತವಾಗಿ ಮಳೆ ಸುರಿದರೆ ನೀರು ಸರಾಗವಾಗಿ ಹರಿದು …

Read More »

ದರೋಡೆ ಮಾಡ್ತಿದ್ದ ಮಂಕಿ ಕ್ಯಾಪ್ ಕಳ್ಳರನ್ನು ಬಂಧಿಸಿದ ಪೊಲೀಸರು

ವಿಜಯಪುರ :ಜಿಲ್ಲೆಯ ಹೆದ್ದಾರಿಗಳಲ್ಲಿ ಮಂಕಿ ಕ್ಯಾಪ್​​ ಧರಿಸಿ ದರೋಡೆ ಮಾಡ್ತಿದ್ದ ಕುಖ್ಯಾತರನ್ನು ಗಾಂಧಿಚೌಕ್​ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಗರ ಬಸ್ ನಿಲ್ದಾಣ ಬಳಿಯ ನಯೇರಾ ಪೆಟ್ರೋಲ್ ಪಂಪ್ ಬಳಿ ದರೋಡೆ ಯತ್ನ ನಡೆಯುತ್ತಿರೋ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಬಿರಸೂಲ ಜಿಲಾನಿ ಕೋರವಾರ, ಅವಿನಾಶ ರಮೇಶ ಬಾಗಡೆ, ಅಲ್ತಾಫ್ ಕುತುಬುದ್ದೀನ್ ಐನಾಪುರ, ಮತೀನ ಖಲೀಲ‌ಅಹ್ಮದ್ ಖಾಜಿ, ಸಮೀರ ಅಬ್ದುಲ್ ರಜಾಕ್ ಯರಗಲ್ ಎಂಬುವರನ್ನು ಬಂಧಿಸಲಾಗಿದೆ. ಸರ್ಫರಾಜ್ ಎಂಬಾತ ಪರಾರಿಯಾಗಿದ್ದಾನೆ. …

Read More »

ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.

ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.   ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …

Read More »

ಮಳೆಗೆ ಮನೆ ಗೋಡೆ‌ ಕುಸಿತ: ತಾಯಿ ಸಾವು, ಮಗ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿತ ಉಂಟಾಗಿ ಮನೆಯಲ್ಲಿದ್ದ ತಾಯಿ ಸಾವನ್ನಪ್ಪಿ, ಮಗ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ‌ ಕಾವಗೊಂಡನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸುಜಾತ(60) ಮೃತಪಟ್ಟಿದ್ದು, ಇವರ ಮಗ ಕೃಷ್ಣಮೂರ್ತಿ(40) ಅವರ ಕಾಲಿಗೆ ಗಾಯವಾಗಿದ್ದು,ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9:30 ರ ಹೊತ್ತಿಗೆ ಟಿವಿ ನೋಡುತ್ತಿರುವಾಗ ಏಕಾಏಕಿ ಮನೆಯ ಗೋಡೆ ಕುಸಿತವಾಗಿ ಇವರ ಮೇಲೆ ಬಿದ್ದಿದೆ. ಸ್ಥಳಕ್ಕೆ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ …

Read More »

ಬೆಳಗಾವಿ: ಭಾರಿ ಮಳೆಗೆ ನಾಲ್ಕು ಸೇತುವೆಗಳು ಮುಳುಗಡೆ, ಸಂಚಾರ್ ಬಂದ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೆಳಹಂತದ ನಾಲ್ಕು ಸೇತುವೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೇತುವೆ ಎರಡು ಬದಿಗೆ ಪೊಲೀಸರು ಬ್ಯಾರಿಕೇಡ್ ಹಾಕಿ ಜನರ ಓಡಾಟವನ್ನು ಬಂದ್ ಮಾಡಿದ್ದಾರೆ. ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಗೆ ಕಟ್ಟಲಾದ ಕಾರದಗಾ-ಭೋಜ್, ವೇದಗಂಗಾ ನದಿಯಿಂದ ಭೋಜವಾಡಿ ಕುನ್ನೂರ-ಸಿದ್ನಾಳ ಅಕ್ಕೋಳ ಸೇತುವೆ ಹಾಗೂ ಜತ್ರಾಟ-ಭೀಮಶಿ‌ ಸೇತುವೆಗಳು ಜಲಾವೃತವಾಗಿವೆ. ಸದ್ಯ ಮಹಾರಾಷ್ಟ್ರ ಘಟ್ಟ ಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕೃಷ್ಣಾ …

Read More »

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್‌. ರಮೇಶ್‌ ಕುಮಾರ್‌, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ರಮೇಶ್‌ ಕುಮಾರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ …

Read More »