ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಈಗಾಗಲೇ 5G ತರಂಗಾಂತರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ 7,864 ಕೋಟಿ ರೂಪಾಯಿ ವ್ಯಯಿಸಿ ಹೆಚ್ಚಿನ ಸ್ಪೆಕ್ಟ್ರಮ್ ಖರೀದಿಸಿದೆ. ಇದರ ಬೆನ್ನಲ್ಲೇ ಇಂದು ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ನ 45ನೇ ವಾರ್ಷಿಕ ಸಭೆಯ ಉದ್ದೇಶಿಸಿ ಮಾತನಾಡಿರುವ ಮುಖೇಶ್ ಅಂಬಾನಿ, ಗ್ರಾಹಕರಿಗೆ ದೀಪಾವಳಿ ಗಿಫ್ಟ್ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗದ 5ಜಿ ರೋಲ್ಔಟ್ಗೆ ಸಿದ್ಧಗೊಂಡಿದೆ. ದೀಪಾವಳಿ ಹೊತ್ತಿಗೆ ದೆಹಲಿ, ಮುಂಬೈ, ಚೆನ್ನೈ …
Read More »Monthly Archives: ಆಗಷ್ಟ್ 2022
ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ …
Read More »ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!
ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ. ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …
Read More »ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು.:
ಹುಬ್ಬಳ್ಳಿ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿದ್ದು, ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದೇವೆ. ಪೊಕ್ಸೊ …
Read More »ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು
ಚಿತ್ರದುರ್ಗ: ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು. ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮಠದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದರು. ಈ ನೆಲದ ಕಾನೂನು ಎಲ್ಲರಿಗೂ ಒಂದೇ , ಕಾನೂನನ್ನು ಗೌರವಿಸೋಣ ಎಂದ …
Read More »25 ದಿನವಾದರೂ ಸಿಗದ ಚಿರತೆ
ಬೆಳಗಾವಿ ಗಾಲ್ಫ್ ಮೈದಾನದಲ್ಲಿ 25ನೇ ದಿನವೂ ಚಿರತೆಯ ಕಾರ್ಯಾಚರಣೆ ಮುಂದುವರಿದಿದೆ. ಗಾಲ್ಫ್ ಮೈದಾನದ ಉತ್ತರ ಧಿಕ್ಕಿನ ನೀರಿನ ಹೊಂಡದ ಬಳಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಹೆಜ್ಜೆ ಗುರುತು ಜಾಡು ಹಿಡಿದು ಶೋಧ ಕಾರ್ಯವನ್ನು ಸಿಸಿಎಫ ಮಂಜುನಾಥ ಚವ್ಹಾಣ, ಡಿಎಫ್ಓ ಡಾ.ಅಂಥೋನಿ, ಎಸಿಎಫ್ ಮಲ್ಲಿನಾಥ ಕುಸನಾಳ ನೇತೃತ್ವದ ತಂಡದಿಂದ ಮಾಡಲಾಗುತ್ತಿದೆ. ಇನ್ನು ಹೆಜ್ಜೆ ಗುರುತು ಪತ್ತೆ ಸ್ಥಳಕ್ಕೆ ಅರವಳಿಕೆ ತಜ್ಞರು ಬಂದಿದ್ದು. ಹನುಮಾನ್, ಜಾಧವ ನಗರ ಸಂಪರ್ಕಿಸುವ ಡಬಲ್ ರಸ್ತೆ …
Read More »ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ: ಉಮೇಶ ಕತ್ತಿ
ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು …
Read More »ನಟ, ಸಂಸದ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು, ಗಮನ ಹರಿಸುವಂತೆ ಅಧಿಕಾರಿಗಳಿಗೆ ಮನವಿ
ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ. ತುಮಕೂರಿನ ಮಾಯಸಂದ್ರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದ ನೀರು ನಮ್ಮ ಮನೆಗೆ ನುಗ್ಗಿದ್ದರಿಂದ 20 ದಿನಗಳಿಂದ ನನ್ನ ಪತ್ನಿ ನಿದ್ದೆ ಮಾಡಿಲ್ಲ~ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ನಟ ಜಗ್ಗೇಶ್ ದೂರಿದ್ದಾರೆ. ಈ ಕುರಿತು TNIE …
Read More »ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್ ಹೇಗಿತ್ತು?: ವಿಡಿಯೋ
Hardik Pandya: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಮಿಂಚಿದರೆ, ಬ್ಯಾಟಿಂಗ್ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು. ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು. What a win for our #TeamIndia in this nail biting match against arch rivals!! Congratulations for a flying start in Asia cup. #INDvsPAK …
Read More »ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನಂದ ಪಾಟೀಲ ಸಾವು
ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಪಟ್ಟು. ವಿದ್ಯುತ್ ಲೈನ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮೆನ್ ಸಹಾಯಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದಲ್ಲಿ ಘಟನೆ ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಲೈನ್ ಮನ್ …
Read More »
Laxmi News 24×7