Breaking News

Daily Archives: ಸೆಪ್ಟೆಂಬರ್ 4, 2022

ರಾಯಬಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ಹದಿನೈದು ಕುರಿಗಳು ಸ್ಥಳದಲ್ಲೇ ಸಾವು…!

ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ …

Read More »

ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು

  ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ   ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …

Read More »

ಒಂದೇ ಕುಟುಂಬದ ಮೂವರ ಸಾವು: ಪತ್ನಿ, ಮಗನ ಕುತ್ತಿಗೆ ಹಿಸುಕಿ ಕೊಂದು ಆತ್ಮಹತ್ಯೆ

ಬೆಂಗಳೂರು: ಕೋಣನಕುಂಟೆ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಸಾವು ಹೇಗಾಯಿತೆಂಬ ಪ್ರಾಥಮಿಕ ಮಾಹಿತಿಯನ್ನು ಕಲೆಹಾಕಿದ್ದಾರೆ. ‘ಚುಂಚನಕಟ್ಟೆ ಎಸ್‌ಬಿಐ ಲೇಔಟ್ ನಿವಾಸಿ ಮಹೇಶ್ ಕುಮಾರ್ (44), ಪತ್ನಿ ಜ್ಯೋತಿ (29) ಹಾಗೂ ಮಗ ನಂದೀಶ್ ಗೌಡ (9) ಅವರ ಮೃತದೇಹಗಳು ಆಗಸ್ಟ್ 18ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೂವರ ಸಾವು ನಿಗೂಢವಾಗಿತ್ತು. ತನಿಖೆ ಕೈಗೊಂಡಾಗ ಕೊಲೆ ನಡೆದಿರುವುದು ಗೊತ್ತಾಗಿದೆ’ ಎಂದು ಪೊಲೀಸ್ ಮೂಲಗಳು …

Read More »

ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಸೇರಿ ಹಲವರ ವಿರುದ್ಧ FIR ದಾಖಲಿಸಲು ಸೂಚಿಸಿದ ನ್ಯಾಯಾಲಯ

ಬೆಂಗಳೂರು, ಸೆ.3:ವೇತನ ನೀಡದೆ ವಂಚನೆ ಸೇರಿದಂತೆ ಇನ್ನಿತರೆ ಆರೋಪಗಳ ಸಂಬಂಧ ಪವರ್ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಸೇರಿ ಹಲವರ ವಿರುದ್ಧ ಎಫ್‍ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿದೆ ಎಂದು ವರದಿಯಾಗಿದೆ. ದೂರುದಾರ ಶಶಿಧರ್ ಎಂಬುವರ ಅರ್ಜಿ ವಿಚಾರಣೆ ನಡೆಸಿದ ನಗರದ 3ನೆ ಎಸಿಎಂಎಂ ವಿಶೇಷ ನ್ಯಾಯಾಲಯ ಇಲ್ಲಿನ ಯಶವಂತಪುರ ಠಾಣಾಧಿಕಾರಿಗೆ ಎಫ್‍ಐಆರ್ ದಾಖಲಿಸಲು ಸೂಚಿಸಿದೆ ಎಂದು ತಿಳಿದುಬಂದಿದೆ.   ಪವರ್ ಸುದ್ದಿ ವಾಹಿನಿ ಸಂಸ್ಥೆ, ವ್ಯವಸ್ಥಾಕ ನಿರ್ದೇಶಕ …

Read More »

ವಿಜಯಪುರ: ಭಕ್ತರ ಭಾರ ತಾಳಲಾರದೇ ನೆಲಕ್ಕುರುಳಿದ ಗಣೇಶ ಮಂಟಪ: ಹಲವರಿಗೆ ಗಾಯ

ವಿಜಯಪುರ: ಗಣಪತಿ ದರ್ಶನಕ್ಕೆಂದು ಹರಿದುಬಂದ ಭಕ್ತರ ಭಾರ ತಾಳಲಾರದೇ ಸಾರ್ವಜನಿಕ ಗಣೇಶ ಮಂಟಪವೊಂದು ಕುಸಿದು ಬಿದ್ದಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಇಲ್ಲಿನ ವಿವೇಕಾನಂದ ವೃತ್ತದಲ್ಲಿ ಗೋಪುರ ಆಕಾರ ಹಾಗೂ ಸ್ವರ್ಣ ವರ್ಣದ ದೇವಾಲಯದ ಮಾದರಿಯಲ್ಲಿ ಈ ಗಣೇಶ ಮಂಟಪವನ್ನು ನಿರ್ಮಿಸಲಾಗಿತ್ತು. ಇಲ್ಲಿಗೆ ಜನ ಸಾಗರವೇ ಹರಿದುಬಂದ ಪರಿಣಾಮ ಭಾರ ತಾಳದೇ ನೆಲಕ್ಕುರುಳಿದೆ. ಪರಿಣಾಮ ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಘಟನೆ …

Read More »

10 ಪ್ರಭಾವಿಗಳ ಸೆಳೆಯಲು ಬಿಜೆಪಿ ತಂತ್ರ; 150 ಟಾರ್ಗೆಟ್‌ ಗುರಿ ಮುಟ್ಟಲು ಕಾರ್ಯತಂತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ ಹೋದ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಹತ್ತು ಮಂದಿ ಶಾಸಕರ ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ.   ಇತ್ತೀಚೆಗೆ ದಿಲ್ಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರು ಬಿಜೆಪಿಗೆ ಬರಲು ಉತ್ಸುಕರಾಗಿರುವವರ ಬಗ್ಗೆ ಮಾಹಿತಿ ನೀಡಿದ್ದರು. ಮಂಗಳೂರಿನಲ್ಲಿ ಮೋದಿ ಅವರು ಭಾಗವಹಿಸಿದ್ದ ಕೋರ್‌ ಕಮಿಟಿಯಲ್ಲೂ ವಿಷಯ ಪ್ರಸ್ತಾವವಾಗಿದ್ದು, ಬಿಜೆಪಿ ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ಸ್ವಸಾಮರ್ಥ್ಯ ಹಾಗೂ ವರ್ಚಸ್ಸು ಹೊಂದಿದ್ದರೆ ಸೇರಿಸಿಕೊಳ್ಳಬಹುದು ಎಂಬ ಅಭಿ ಪ್ರಾಯ …

Read More »

CET RANK’ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ …

Read More »

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ.? ಬಯಲಾಗುತ್ತಾ ಅಸಲಿ ಸತ್ಯ.?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. …

Read More »