Breaking News

Daily Archives: ಸೆಪ್ಟೆಂಬರ್ 5, 2022

ಮಳೆಹಾನಿ ಪ್ರದೇಶಕ್ಕೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭೇಟಿ, ಪರಿಶೀಲನೆ!

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ ರಸ್ತೆಯ …

Read More »

ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.   ಮಾಣಿಕವಾಡಿ, ಕೊಣ್ಣೂರ …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ*: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಬೆಳಗಾವಿ | ರಾಜ್ಯದ ಗಮನಸೆಳೆದ ಯಳ್ಳೂರ ಗ್ರಾಮ; ಈ ಊರಲಿದ್ದಾರೆ 425 ಶಿಕ್ಷಕರು

ಬೆಳಗಾವಿ: ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಹೆಚ್ಚಿನವರು ಉನ್ನತ ಶಿಕ್ಷಣ ಪಡೆದು, ಶಿಕ್ಷಕ ಮತ್ತು ಉಪನ್ಯಾಸಕ ವೃತ್ತಿ ಆಯ್ಕೆ ಮಾಡಿಕೊಳ್ಳುತ್ತಿದ್ದು, ಪ್ರಸ್ತುತ 425 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. 400 ಮಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ.   ಸುಮಾರು 19 ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ, ಐದಕ್ಕಿಂತಲೂ ಹೆಚ್ಚು ಜನ ಶಿಕ್ಷಕರನ್ನು ಹೊಂದಿದ ಹಲವು ಕುಟುಂಬಗಳಿವೆ. ಬಬನ್‌ ಕಾನ್ಶಿಡೆ ಅವರ ಕುಟುಂಬವೊಂದರಲ್ಲೇ 12 ಮಂದಿ ಶಿಕ್ಷಕರಿದ್ದಾರೆ. ಈ ಪೈಕಿ 6 ಮಂದಿ …

Read More »

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಬೆಂಗಳೂರು : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ.   ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಆದರೆ. ಉಚಿತ ಅಕ್ಕಿ ಸೌಲಭ್ಯ ಈ …

Read More »

ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ ?

ಬೆಂಗಳೂರು, ಸೆ.4 (www.bengaluruwire.com) : ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ( KSNDMC) ವು ತಿಳಿಸಿದೆ.   ಬಿಬಿಎಂಪಿ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯೊಂದಿಗೆ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಕೇಂದ್ರವು …

Read More »

ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆ ಬಗ್ಗೆ ಹೀಗಿದೆ ಪತ್ನಿ ವೀಣಾ ಕಾಶಪ್ಪನವರ್ ಪ್ರತಿಕ್ರಿಯೆ

ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿ ವೀಣಾ ಕಾಶಪ್ಪನವರ್ ಪ್ರತಿಕ್ರಿಯೆ ನೀಡಿದ್ದಾರೆ. ಹುನಗುಂದ ಕ್ಷೇತ್ರದಲ್ಲಿ ವೈಯಕ್ತಿಕ ವಿಚಾರ ಹರಿದಾಡುತ್ತಿದೆ. ನಾನು ಆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ. ಸಂಪೂರ್ಣ ಮಾಹಿತಿ ಕಲೆ ಹಾಕಿದ ಮೇಲೆ ಸುದ್ದಿಗೋಷ್ಠಿ ನಡೆಸುತ್ತೇನೆ. ಇದರ ಬಗ್ಗೆ ಸಂಬಂಧಿಸಿದವರನ್ನೇ ಕೇಳಬೇಕು ಎಂದು ಹೇಳಿದ್ದಾರೆ. ವಿಜಯಾನಂದ ಕಾಶಪ್ಪನವರ್ ಹೆಸರು ಪ್ರಸ್ತಾಪಿಸದೆ ಪ್ರತಿಕ್ರಿಯೆ ನೀಡಿ, ಮಾಧ್ಯಮದಲ್ಲಿ ಮಗುವಿನ ಬರ್ತ್ ಸರ್ಟಿಫಿಕೇಟ್ ತೋರಿಸಲಾಗಿದೆ. ಮಾಧ್ಯಮದಲ್ಲಿ …

Read More »

SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್‌ ಶಾಕ್‌’: ‘ಉಚಿತ ವಿದ್ಯುತ್ ಯೋಜನೆ’ ಆದೇಶ ವಾಪಸ್ಸು

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ.   ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ …

Read More »

ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ. ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ …

Read More »

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್‌ಐ ನೇಮಕಾತಿ’ಗೆ ಅರ್ಜಿ

ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ( PSI Recruitment Scam ) ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ( PSI Recruitment 2022 ) ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ.   ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, …

Read More »