ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …
Read More »Daily Archives: ಸೆಪ್ಟೆಂಬರ್ 7, 2022
ನನಗೆ ಬಯ್ಯಲಾದರೂ ದೊಡ್ಡಪ್ಪ ಬರಲಿ ಎಂದು ಕಾಯುತ್ತಿದ್ದೇನೆ: ಉಮೇಶ್ ಕತ್ತಿ ಸಹೋದರ ಪುತ್ರ ಪೃಥ್ವಿ ಕಣ್ಣೀರು
ಆಹಾರ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಈ ಸಾವು ಕುಟುಂಬಸ್ಥರನ್ನು ಮಾತ್ರವಲ್ಲದೆ ರಾಜ್ಯದ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿದೆ. ರಾತ್ರಿಯವರೆಗೆ ಲವಲವಿಕೆಯಿಂದ ಇದ್ದ ಉಮೇಶ್ ಕತ್ತಿ ಮರುಕ್ಷಣವೇ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಉಮೇಶ್ ಕತ್ತಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದ್ದು, ಊರಿನ ಜನತೆ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಬಂದ್ ಆಚರಿಸುತ್ತಿದ್ದಾರೆ. …
Read More »ಉಮೇಶ್ ಕತ್ತಿ ನಿಧನ : ಹುಕ್ಕೇರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯೋದು ಡೌಟ್..?
ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು. ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ …
Read More »ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ …
Read More »ಉಮೇಶ ಕತ್ತಿ ನಿಧನ: ಸ್ವಯಂ ಪ್ರೇರಿತ ಬಂದ್, ಮೃತದೇಹ ಒಯ್ಯಲು ಅಲಂಕೃತ ಸೇನಾ ವಾಹನ
ಬೆಳಗಾವಿ: ಉಮೇಶ ಕತ್ತಿ ಅವರ ಮೃತದೇಹವನ್ನು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಾದ, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲಂಕೃತ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ತಯಾರಿ ನಡೆದಿದೆ. ಮೈನಸ್ 4 (-4) ಸೆಂಟಿಗ್ರೇಡ್ ಉಷ್ಣಾಂಶದ ಪೆಟ್ಟಿಗೆಯನ್ನು ಈ ಸೇನಾ ವಾಹನದಲ್ಲಿ ಈಗಾಗಲೇ ಇಡಲಾಗಿದೆ. ಮೂರು ಕ್ವಿಂಟಲ್ ಹೂವುಗಳಿಂದ ವಾಹನವನ್ನು ಅಲಂಕಾರ ಮಾಡಲಾಗಿದೆ. ಸಂಚರಿಸುವ ಮಾರ್ಗ: ಸಾಂಬ್ರಾ …
Read More »ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ
ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು. ‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು. ‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು …
Read More »ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ಸ್ಥಳ ತಲುಪಲಿದೆ. ಈಗಾಗಲೇ ಅಪಾರ ಸಂಖ್ಯೆಯಲ್ಲಿ ಜನರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಹೆದ್ದಾರಿ ಆಸುಪಾಸಿನಲ್ಲಿ ಅಪಾರ ಸಂಖ್ಯೆಯ ವಾಹನಗಳು ಕಿಲೋಮೀಟರ್ ವರೆಗೆ ಸಾಲಾಗಿ ನಿಂತಿವೆ. ಹೃದಯಾಘಾತದಿಂದ ನಿಧನ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. …
Read More »2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 150 ಸ್ಥಾನಗಳಲ್ಲಿ ಗೆಲುವು: ಎಂ.ಬಿ ಪಾಟೀಲ್
ವಿಜಯನಗರ, ಸೆಪ್ಟೆಂಬರ್ 6: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ” ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಹೇಳಿದರು. ಹೊಸಪೇಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಜೆಪಿ ದುರಾಡಳಿತಕ್ಕೆ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಈ ಸಲ ಶೇ 50ಕ್ಕೂ ಹೆಚ್ಚು ಲಿಂಗಾಯತರ ಮತಗಳು ಕಾಂಗ್ರೆಸ್‌ಗೆ ಬೀಳಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. …
Read More »‘ಈಡಿ’ಯಿಂದ ದೇಶದಾದ್ಯಂತ ೩೦ ಕಡೆಗಳಲ್ಲಿ ದಾಳಿ !
ದೆಹಲಿಯಲ್ಲಿನ ಆಪ ಸರಕಾರದಿಂದ ನಡೆದ ಮದ್ಯ ಧೋರೆಣೆಯ ಹಗರಣದ ಪ್ರಕರಣ ನವದೆಹಲಿ – ದೆಹಲಿಯಲ್ಲಿನ ಆಪ ಸರಕಾರದ ಮದ್ಯ ಧೋರಣೆಯಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ‘ಈಡಿ’ಯು (ಜ್ಯಾರಿ ನಿರ್ದೇಶನಾಲಯವು) ‘ಎನ್.ಸಿ. ಆರ್’ನೊಂದಿಗೆ ‘ರಾಷ್ಟ್ರೀಯ ರಾಜಧಾನಿ ಕ್ಷೇತ್ರದೊಂದಿಗೆ) ದೇಶದಾದ್ಯಂತ ದಾಳಿ ಆರಂಭಿಸಿದೆ. ದೇಶದಲ್ಲಿ ೩೦ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಇದರಲ್ಲಿ ದೆಹಲಿಯೊಂದಿಗೆ ಗುರುಗ್ರಾಮ, ಚಂಡೀಗಡ, ಲಕ್ಷ್ಮಣಪುರಿ, ಮುಂಬೈ, ಭಾಗ್ಯನಗರ, ಹಾಗೆಯೇ ಬೆಂಗಳೂರು ನಗರದಲ್ಲಿ ದಾಳಿ ನಡೆಯುತ್ತಿದೆ. ದೆಹಲಿಯ ಉಪಮುಖ್ಯಮಂತ್ರಿ …
Read More »2022 ಇಂದು ನೀಟ್ ಪರೀಕ್ಷೆ ಫಲಿತಾಂಶ,
ಬೆಂಗಳೂರು: ಬುಧವಾರ(ಸೆ.7) ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ(NEET UG 2022) ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇಲ್ಲಿ ಲಾಗಿನ್ ಆಗಿ ತಮ್ಮ ರಿಸಲ್ಟ್ ಪರಿಶೀಲಿಸಬಹುದು. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು …
Read More »
Laxmi News 24×7