Breaking News

Daily Archives: ಸೆಪ್ಟೆಂಬರ್ 11, 2022

ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು. ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ …

Read More »

ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತಕ್ಕೀಡಾಗಿ ಸಾವು..

ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್​ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನಾಥ ಶವವಾಗಿ ಪತ್ತೆಯಾಗಿದ್ದರು. ಇದೀಗ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಪ್ರಕರಣ ನಡೆದಿದೆ.   ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ (70) ಸಾವಿಗೀಡಾದವರು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ‌ ಇಂದು ನಡೆದ ಬಿಜೆಪಿ ಜನಸ್ಪಂದನ ಸಮಾವೇಶಕ್ಕೆ ತೆರಳಿದ್ದು, ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದಾರೆ.

Read More »

ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ!

ಬೆಳಗಾವಿ :ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ! ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ‘ಸ್ವಾವಲಂಬಿ’ ವೆಬ್​ಸೈಟ್ ವರದಾನವಾಗಿದೆ. ಈ ವೆಬ್​ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು. …

Read More »

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ.

ಬೆಂಗಳೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು. ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು …

Read More »

ಜನರ ಕಷ್ಟಕ್ಕೆ ಸ್ಪಂದಿಸುವುದು ಜನಸ್ಪಂದನ, ಕಾರ್ಯಕ್ರಮ ಮಾಡುವುದಲ್ಲ: ಸಿದ್ದರಾಮಯ್ಯ ಟೀಕೆ

ಬಾಗಲಕೋಟೆ, ಸೆಪ್ಟೆಂಬರ್ 10: ಜನಸ್ಪಂದನ ಅಂದರೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು, ರಾಜ್ಯ ಸರಕಾರ ಜನರ ಕಷ್ಟ ಸುಖಗಳಿಗೆ ನೆರವಾಗುತ್ತಿದ್ದಾರಾ? ಮಳೆ ಬಂದು ಹಲವು ಕಡೆ ಪ್ರವಾಹ ಉಂಟಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳು ಹಾಳಾಗಿವೆ, ಮನೆಗಳು ಕುಸಿದಿವೆ, ರೈತರ ಜಮೀನು ಹಾಳಾಗಿವೆ ಅವರಿಗೆ ಪರಿಹಾರ ಕೊಡದೇ ಯಾವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.   ಜಿಲ್ಲೆಯಲ್ಲಿ ಪ್ರವಾಹದ ಸಮೀಕ್ಷೆಗೆ ಆಗಮಿಸಿದ್ದ ಮಾಜಿ ಸಿಎಂ ಮಾಧ್ಯಮದವರೊಂದಿಗೆ …

Read More »