Breaking News

Daily Archives: ಸೆಪ್ಟೆಂಬರ್ 21, 2022

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …

Read More »

ಬೆಳಗಾವಿಯಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022 ಆಯೋಜನೆ

ಬೆಳಗಾವಿಯಲ್ಲಿ ನಗರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಆಯೋಜಿಸಲಾಗಿತ್ತು. ಹೌದು ಇಂದು ಬುಧವರಾ ಬೆಳಗಾವಿ ನಗರದ ಜೀರಗೆ ಸಭಾ ಭವನದಲ್ಲಿ ಬೆಳಗಾವಿ ನಗರಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಲ್ಲ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ ಬೋರಲಿಂಗಯ್ಯ, ಡಿಡಿಪಿಐ ಬಸವರಾಜ್ ನಲವತ್‌ವಾಡ್, ಆರ್‌ಟಿಓ ಶಿವಾನಂದ ಮಗದುಮ್, ಪಾಲಿಕೆ ಆಯುಕ್ತರಾದ …

Read More »

ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಕಾರಜೋಳ

ಬೆಂಗಳೂರು: ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.   ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು …

Read More »

ಭೋಜ್‌ ಪುರಿ ನಟಿಯ ಎಂಎಂಎಸ್‌ ಲೀಕ್?: ಆಕ್ರೋಶಗೊಂಡು ಮೌನ ಮುರಿದ ನಟಿ

ಮುಂಬಯಿ: ಭೋಜ್‌ ಪುರಿ ನಟಿ ಅಕ್ಷರ ಸಿಂಗ್‌ ತನ್ನ ನಟನೆ ಹಾಗೂ ಗಾಯನದಿಂದ ಖ್ಯಾತಿಗಳಿಸಿದವರು. ಬಿಗ್‌ ಬಾಸ್‌ ಓಟಿಟಿಯಲ್ಲಿ ಭಾಗವಹಿಸಿದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಭೋಜ್‌ ಪುರಿ ಸಿನಿಮಾರಂಗದಲ್ಲಿ ‘ಪವನ್ ರಾಜ’ ‘ದಿಲ್‌ ವಾಲಾʼ ʼಸತ್ಯʼ ಇತ್ಯಾದಿ ಸಿನಿಮಾದಲ್ಲಿ ನಟಿಸಿರುವ ಅಕ್ಷರ ‘ರಾಕೆಟ್‌ ಜವಾನಿʼ ʼಜಾ ತೋ ರಹೇ ಹೋ ಮುಝೆ ಚೋಡ್ ಕರ್ ತುಮ್ʼ ಮುಂತಾದ ಹಾಡುಗಳನ್ನು ಹಾಡಿ, ಹಾಟ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹಾಡುಗಳು ಯೂಟ್ಯೂಬ್‌ …

Read More »

ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ. ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ.   ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ …

Read More »

ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ

ನವದೆಹಲಿ : ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ ಅವರು ಬುಧವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಜಿಮ್‌ನಲ್ಲಿ ವ್ಯಾಯಾಮ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ರಾಜು ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ದೃಢಪಡಿಸಿದೆ.     ಡಿಸೆಂಬರ್ 25, 1963 …

Read More »

ನಾಳೆ ‌ಸದನದಲ್ಲೇ ಸಚಿವರೊಬ್ಬರ ಭ್ರಷ್ಟಾಚಾರ ದಾಖಲೆ ಸಮೇತ ಬಯಲು ಮಾಡುವೆ : ಎಚ್‌ಡಿಕೆ ಗುಡುಗು

ಕಲಬುರಗಿ : ಸಾರ್ವಜನಿಕ ಹಿತಾಸಕ್ತಿ ಬಲಿಕೊಟ್ಟು ಕಾನೂನು ಗಾಳಿಗೆ ತೂರಿ ಆಸ್ತಿಯನ್ನು ಮಾಡಿಕೊಂಡಿರುವ ರಾಜ್ಯದ ಸಚಿವರೊಬ್ಬರ ಹಗರಣದ ಭ್ರಷ್ಟಾಚಾರವನ್ನು ನಾಳೆ (ಗುರುವಾರ) ವಿಧಾನಸಭೆ ಅಧಿವೇಶನದಲ್ಲಿ ದಾಖಲೆಗಳ ಸಮೇತ ಬಿಡುಗಡೆಗೊಳಿಸಿ ಬಯಲಿಗೆಳೆಯಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.   ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಶೇ. 40 ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವವಾಗಿದೆ. ಈಗ ಬಿಡುಗಡೆ ಮಾಡುವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನಾಳಿನ ಸದನದಲ್ಲಿ ಇದಕ್ಕೆ …

Read More »

40% ಕಮಿಷನ್ ವಿರುದ್ಧ ‘ಪೇ ಸಿಎಂ’ ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಬೆಂಗಳೂರು : ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದೆ. ರಾಜಧಾನಿ ಬೆಂಗಳೂರಿನ ಆಯಕಟ್ಟಿ‌ನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಲಾಗಿದೆ. ಜತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಅಭಿಯಾನ ತೀವ್ರಗೊಳಿಸಲಾಗಿದೆ. ಕ್ಯೂ ಆರ್ ಕೋಡ್ ಇರುವ ಪೇಟಿಎಂ ಮಾದರಿ ಸ್ಟಿಕರ್ ನ್ನು ಪೇಸಿಎಂ ಎಂದು ಬದಲಾಯಿಸಿ ಇಲ್ಲಿ 40% ಕಮಿಷನ್ ಸ್ವೀಕರಿಸಲಾಗುವುದು ಎಂದು ವ್ಯಂಗ್ಯವಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಸುತ್ತಿರುವ ಈ ಅಭಿಯಾನ …

Read More »

ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಅವರ ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು:ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ಸಹುದ್ಯೋಗಿಗಳೊಂದಿಗೆ ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದ ಮಾಜಿ ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕ್ಷೇಮ ವಿಚಾರಿಸಿದರು.   ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ …

Read More »

ಖಾನಾಪುರ ತಾಲೂಕಿನಲ್ಲಿ ಕಳ್ಳರ ಪತ್ತೆ ಹಚ್ಚಿ: ಎಸ್‍ಪಿಗೆ ಮನವಿ

ಖಾನಾಪೂರ ತಾಲೂಕಿನಲ್ಲಿ ಕಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡೆ ಧನಶ್ರೀ ಸರ್‍ದೇಸಾಯಿ ಹೌದು ಖಾನಾಪೂರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಕಳ್ಳತನದ ಪ್ರಕರಣಗಳು ಹೆಚ್ಚುಗಿವೆ. ಇದರಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಇನ್ನು ಅನರಕ್ಷಸ್ಥರ ಜನರು, ರೈತರು ತಮ್ಮ ಮನೆಗಳಲ್ಲಿ ನಡೆದ ಕಳ್ಳತನಕ್ಕೆ ಸಂಬಂಧ ಪ್ರಕರಣಗಳನ್ನು ದಾಖಲಿಸಿಲ್ಲ. ಹೀಗಾಗಿ ತಕ್ಷಣ ಇದರ ಬಗ್ಗೆ ಸೂಕ್ತ ಕ್ರಮ …

Read More »