Breaking News

Daily Archives: ಸೆಪ್ಟೆಂಬರ್ 25, 2022

ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಕಾರು, ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣೆಯ ಎಎಸ್‌ಐ ಹಲಗಿ ಅವರ ಪತ್ನಿ ರುಕ್ಮಿಣಿ, ಪುತ್ರಿ ತೆರಳುತ್ತಿದ್ದಂತ ಕಾರಿಗೆ ಸಿಮೆಂಟ್ ಲಾರಿಯೊಂದು ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿಯಲ್ಲಿ ಡಿಕ್ಕಿಯಾಗಿದೆ.   ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಕಾರು …

Read More »

ಆರೋಗ್ಯ ಇಲಾಖೆ 108ಗೆ ಅನಾರೋಗ್ಯ; ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ.   ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ …

Read More »

ಮಹರ್ಷಿ ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮಕ್ಕೆ ಬಹಿಷ್ಕಾರ: ಸತೀಶ ಜಾರಕಿಹೊಳಿ

ಅಕ್ಟೋಬರ್ 9ಕ್ಕೆ ರಾಜ್ಯಾಧ್ಯಂತ ಸರ್ಕಾರ ಆಯೋಜಿಸುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಹಿμÁ್ಕರ ಹಾಕಲು ರಾಜ್ಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಕೊಡಲು ವಿಳಂಬ ಮಾಡುತ್ತಿದೆ. ಹೀಗಾಗಿ ರಾಜ್ಯಾದ್ಯಂತ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಬಹಿμÁ್ಕರ ಹಾಕಲಾಗಿದೆ. ಆದರೆ ಖಾಸಗಿ ಕಾರ್ಯಕ್ರಮಕ್ಕೆ ಯಾವುದೇ ನಿಬರ್ಂಧ ಇಲ್ಲ. ಇನ್ನು …

Read More »

ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಹೋರಾಟ: ಯತ್ನಾಳ್‌

ಆಳಂದ (ಕಲಬುರಗಿ): ರಾಜ್ಯದ ಹಲವು ಸಮುದಾಯಗಳಿಗೆ ಮೀಸಲಾತಿ ನೀಡುವಲ್ಲಿ ಹಿಂದೇಟು ಹಾಕುತ್ತಿರುವ ರಾಜ್ಯ ಸರಕಾರದ ವಿರುದ್ಧ ಶಾಸಕರು ಮುಂದಿನ ಬೆಳಗಾವಿ ಅ ಧಿವೇಶನದಲ್ಲಿ “ಮಾಡು ಇಲ್ಲವೇ ಮಡಿ’ ಇಲ್ಲವೇ “ಏಕ್‌ ಮಾರ್‌ ದೋ ತುಕಡಾ’ ಎನ್ನುವಂತೆ ಧ್ವನಿ ಎತ್ತಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸವನ‌ಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.   ಸರಸಂಬಾ ಗ್ರಾಮದಲ್ಲಿ ಸಹಕಾರ ಸಂಘದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಪಂಚಮಸಾಲಿ, ವಾಲ್ಮೀಕಿ, ಕುರುಬ ಹೀಗೆ ಹಲವು ಸಮುದಾಯಗಳ ಜನರು ಮೀಸಲಾತಿಗಾಗಿ …

Read More »

ರಾಷ್ಟ್ರಪತಿಯವರಿಂದ ದಸರಾ ಉದ್ಘಾಟನೆ: ಸಾರ್ವಜನಿಕರಿಗೆ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ಮೈಸೂರು: ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.   ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇದೇ …

Read More »

ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ

ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …

Read More »

ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ಬಂಧನ

ಬೆಂಗಳೂರು: ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ 6 ಜನರ ಗ್ಯಾಂಗ್​ವೊಂದನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನೀಲ್, ಡಿ ರೂಪಂ, ಭಟ್ಟಾಚಾರ್ಯ ಹಾಗೂ ರವಿ ಬಂಧಿತರು. ಪ್ರವೀಣ್ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಆರೋಪಿ. ಈತ ಆಧಾರ್ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್ ಬೇಕಿರುವವರ ಮಾಹಿತಿ‌ ಪಡೆದು ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಎರಡನೇ ಆರೋಪಿ ರಮೇಶ್ ಆಟೋ ಚಾಲಕ. ಈತ ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ …

Read More »

ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 25 ಕೋಟಿ ರೂ. ಲಾಟರಿ ಗೆದ್ದಿದ್ದರೂ ಕಂಗಾಲಾಗಿ ಹೋಗಿರುವ ಆಟೋ ಚಾಲಕ!

ತಿರುವನಂತಪುರಂ: ಕಳೆದ ವಾರ ಲಕ್ಕಿ ಡ್ರಾ ಮೂಲಕ 25 ಕೋಟಿ ಬಹುಮಾನ ಗೆದ್ದಿದ್ದ, ಆಟೋ ಚಾಲಕ ಕಂಗಾಲಾಗಿ ಹೋಗಿದ್ದಾನೆ. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಆಟೋ ಚಾಲಕ ಅನೂಪ್, ಮಲೇಷ್ಯಾಕ್ಕೆ ತೆರಳಿ ದುಡಿಯಲು ದಾರಿ ಕಂಡು ಕೊಂಡಿದ್ದ. ಇನ್ನೇನು ಮಲೇಷ್ಯಾಗೆ ತೆರಳಬೇಕು ಅನ್ನುವಷ್ಟರಲ್ಲಿ ಲಾಟರಿ ಗೆದ್ದಿರುವುದು ತಿಳಿದಿದೆ.   ಲಾಟರಿಯಲ್ಲಿ ಕೋಟಿ ಬಹುಮಾನ ಬಂದಿದೆ. ಇನ್ನು ಮುಂದೆ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ನಿರ್ಧರಿಸಿದ್ದರು. ಆದರೆ ಆಗಿದ್ದೇ ಬೇರೆ. ಬಹುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ …

Read More »

ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ

ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …

Read More »

ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ

ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.   ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. …

Read More »