Breaking News

Daily Archives: ಸೆಪ್ಟೆಂಬರ್ 26, 2022

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯುಟ್ಟು ದಸರೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವ ಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. …

Read More »

ಮಾರ್ಕಂಡೇಯ ಡ್ಯಾಮ್‍ಗೆ ಹೋಯ್ತು ಭೂಮಿ: ಈಗ ಊರು ಇಲ್ಲದೇ ಅತಂತ್ರ ಸ್ಥಿತಿಯಲ್ಲಿ ಪಣಗುತ್ತಿ ಸಂತ್ರಸ್ತರು..!

ಇವರೆಲ್ಲಾ ಮಾರ್ಕಂಡೇಯ ಡ್ಯಾಮ್ ಕಟ್ಟಲು ತಮ್ಮ ಇದ್ದ ಭೂಮಿಯನ್ನೇ ಬಿಟ್ಟು ಕೊಟ್ಟವರು. ಆದರೆ ಇಂದು ಸರಿಯಾದ ಸೂರು ಇಲ್ಲದೇ, ಊರು ಇಲ್ಲದೇ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಸಂತ್ರಸ್ತರು ಪುನರ್ವಸತಿ ಕಲ್ಪಿಸಿ ತಮ್ಮ ಗ್ರಾಮವನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಹೋರಾಟದ ಹಾದಿ ಹಿಡಿದಿದ್ದಾರೆ. ಮಾರ್ಕಂಡೇಯ ನದಿಯ ಹಿನ್ನಿರಿನಲ್ಲಿ 2002ರಲ್ಲಿ ಮುಳುಗಡೆ ಆಗಿರುವ ಬೆಳಗಾವಿ ತಾಲೂಕಿನ ಪಣಗುತ್ತಿ ಗ್ರಾಮದ ಜನರು ಅಂದು ಭೂಮಿ ಕಳೆದುಕೊಂಡಿದ್ದರು. ಇದೀಗ ಇಲ್ಲಿನ ಸಂತ್ರಸ್ತರು ಹೆಚ್ಚಿನ ಪ್ರಮಾಣದಲ್ಲಿ …

Read More »

ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ಉಡುಪಿ ಐಎಎಸ್ ಅಧಿಕಾರಿ!

ಉಡುಪಿ, ಸೆಪ್ಟೆಂಬರ್‌, 25: ಕಸ ಸಂಗ್ರಹಕಾರರು ಅಂದರೆ ಸಮಾಜದಲ್ಲಿ ಕೀಳರಿಮೆ ಜಾಸ್ತಿ. ಅದರಲ್ಲೂ ನಾವೇ ಸೃಷ್ಟಿಸಿದ ಕಸ, ತ್ಯಾಜ್ಯ ತುಂಬಿದ ವಾಹನ ರಸ್ತೆಯಲ್ಲಿ ಹೋಗುತ್ತಿದ್ದರೆ ಮೂಗು ಮುಚ್ಚಿ ಹೋಗುವವರೇ ಸಂಖ್ಯೆಯ ಅಧಿಕವಾಗಿದೆ. ಕಸ ಎತ್ತುವ ಸ್ವಚ್ಛತೆಯ ಸೈನಿಕರ ಬಗ್ಗೆ ಜನರಿಗಿದ್ದ ಕೀಳರಿಮೆಯನ್ನು ಹೋಗಲಾಡಿಸಲು ಉಡುಪಿಯ ಐಎಎಸ್‌ ಪ್ರಸನ್ನ ಎನ್ನುವವರು ಮುಂದಾಗಿದ್ದಾರೆ. ದಿನವಿಡೀ ತ್ಯಾಜ್ಯ ವಿಲೇವಾರಿ ಸಿಬ್ಬಂದಿ ಜೊತೆಗಿದ್ದು, ಅವರ ಜೊತೆ ಮನೆಮನೆಗೆ ಹೋಗಿ ಕಸ ಸಂಗ್ರಹಿಸಿ, ಕಸ ತುಂಬಿದ ವಾಹನವನ್ನೂ …

Read More »

ಮೌಲ್ಯಮಾಪನ ಎಡವಟ್ಟು ಏರಿಕೆ: ದ್ವಿತೀಯ ಪಿಯು; ಮರುಮೌಲ್ಯಮಾಪನ ನಿರೀಕ್ಷೆಯೇ ಅಧಿಕ !

ಮಂಗಳೂರು: ದ್ವಿತೀಯ ಪಿಯು ಫಲಿತಾಂಶದಲ್ಲಿ ತೃಪ್ತಿ ಹೊಂದಿಲ್ಲದ ವಿದ್ಯಾರ್ಥಿ ಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕು ವುದು ಸಾಮಾನ್ಯ. ಆದರೆ ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಪ್ರಕಟಿತ ಅಂಕ ಗಳಿಗಿಂತ ಮರುಮೌಲ್ಯಮಾಪನದ ಬಳಿಕ ಅಂಕಗಳು ವ್ಯತ್ಯಾಸವಾದ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮರು ಮೌಲ್ಯ ಮಾಪನ ವಾದ ಬಳಿಕ ಬರೋಬ್ಬರಿ 2,047 ವಿದ್ಯಾರ್ಥಿ ಗಳಿಗೆ ಹೆಚ್ಚುವರಿ ಅಂಕ ದೊರೆತಿದ್ದರೆ, 2020 ರಲ್ಲಿ 2,318 ಮಂದಿಗೆ ದೊರಕಿತ್ತು. ಮೌಲ್ಯಮಾಪಕರ …

Read More »

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.   ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.   ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ …

Read More »

ಅಂಬಾರಿ’ಯಲ್ಲಿ ಮಧ್ಯರಾತ್ರಿವರೆಗೂ ದೀಪಾಲಂಕಾರ ವೀಕ್ಷಿಸಿದ ಸಿಎಂ

ಮೈಸೂರು: ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್‌ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್‌ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು.   ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ ‘ಅಂಬಾರಿ’ ಡಬ್ಬಲ್ ಡೆಕ್ಕರ್ …

Read More »

ಭ್ರಷ್ಟಾಚಾರ ಮುಚ್ಚಲು ಜಾತಿ ಮೊರೆ ಹೋದ ಬಿಜೆಪಿ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ಲಿಂಗಾಯತ ಮುಖ್ಯಮಂತ್ರಿಗೆ ಅಪಮಾನ ಮಾಡುವ ಷಡ್ಯಂತ್ರ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದವರು ಶೇ. 40 ಪರ್ಸೆಂಟೆಜ್‌ ಬಗ್ಗೆ ಬಿಜೆಪಿ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕಳೆದ 1 ವರ್ಷದಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ವಿಚಾರವನ್ನು ಅಸೆಂಬ್ಲಿಯಲ್ಲಿ ಎತ್ತಿದರೆ ಜಾತಿ ವಿಚಾರ ಹೇಗೆ …

Read More »

ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಗೆ “ಉಪಾಂತ್ಯ’ ಎಂದೇ ಪರಿಗಣಿಸಲಾಗಿದ್ದ ತಾ.ಪಂ.- ಜಿ.ಪಂ. ಚುನಾ ವಣೆ ಗಳು 2023ರ ಮೇ ಒಳಗೆ ನಡೆಯವುದಕ್ಕೆ ಸಾಧ್ಯವೇ ಇಲ್ಲ. ರಾಜ್ಯ ಸರಕಾರದಲ್ಲಿನ ಈಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಿಧಾನಸಭೆ ಚುನಾವಣೆ ಬಳಿಕವಷ್ಟೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿವೆ. ಒಂದು ಕಡೆ ಕ್ಷೇತ್ರಗಳ ಗಡಿ ನಿಗದಿಗೆ ಸೀಮಾ ನಿರ್ಣಯ ಆಯೋಗ ಇನ್ನೂ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಇನ್ನೊಂದಡೆ ಕ್ಷೇತ್ರಗಳು ನಿಗದಿಯಾದ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ …

Read More »

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ.   ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ …

Read More »

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ. ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, …

Read More »