ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದು ಹೊರಬಿದ್ದಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಬುಧವಾರ (ಸೆಪ್ಟೆಂಬರ್ 28) ಶೇ.34ರಿಂದ ಶೇ.38ಕ್ಕೆ ಏರಿಕೆ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ದೇಶಾದ್ಯಂತ 50 ಲಕ್ಷಕ್ಕಿಂತ ಅಧಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಭಾರತ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ವರ್ಷದಲ್ಲಿ ಎರಡು ಬಾರಿ ಅಥವಾ ಆರು ತಿಂಗಳಿಗೊಮ್ಮೆ ತುಟ್ಟಿಭತ್ಯೆಯನ್ನು ನೀಡುತ್ತದೆ. ಈ ಹಿಂದೆ ಕೇಂದ್ರ …
Read More »Daily Archives: ಸೆಪ್ಟೆಂಬರ್ 28, 2022
ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಜೊಲ್ಲೆ
ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕವಾಗಿ “ಕುಂಕುಮಾರ್ಚನೆ”ನಡೆಸಲು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾಜೊಲ್ಲೆ ಸೂಚನೆ ನೀಡಿದ್ದಾರೆ. ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಅದರಂತೆ ದಿನಾಂಕ 30.09.2022 …
Read More »ಬೂತ್ ಕಾರ್ಯಕರ್ತರೇ ಬಿಜೆಪಿ ಪಕ್ಷದ ಮಾಲೀಕರು: ಅರುಣ್ ಸಿಂಗ್
ಕಲಬುರಗಿ: ಸಾಮಾನ್ಯ ಕಾರ್ಯಕರ್ತರ ಗುರುತಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಏಕೈಕ ಪಕ್ಷ ದೇಶದಲ್ಲಿ ಇದ್ದರೆ ಅದು ಬಿಜೆಪಿ ಪಕ್ಷ. ಹೀಗಾಗಿ ಪಕ್ಷದ ಕಾರ್ಯಕರ್ತರೆ ನಮ್ಮ ಮಾಲೀಕರು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಹೇಳಿದರು. ಜೇವರ್ಗಿ ತಾಲೂಕಿನ ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾತ್ರ ಯಜಮಾನರು.ಆದರೆ ನಮ್ಮಲ್ಲಿ ಕಾರ್ಯಕರ್ತರೇ ನಮ್ಮ ಜೀವಾಳ ಎಂದರು.
Read More »ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. …
Read More »ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು …
Read More »ಭೂ ಪರಿವರ್ತನೆ ಸರಳ ಕ್ರಮ: ಸಚಿವ ಆರ್.ಅಶೋಕ್
ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು. ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಹೇಳಿದರು. ಇದರಿಂದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸಹಕಾರಿಯಾಗಲಿದೆ. ನಗರ ಪ್ರದೇಶದಲ್ಲಿ ಭೂ ಪರಿವರ್ತನೆಗೆ …
Read More »ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮೂರು -ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಬಳ್ಳಾರಿ ನಗರ ಬಿಜೆಪಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಷ್ಟೇ ಸಿನಿಮಾ ಶುರುವಾಗಿದ್ದು, ಮುಂದೆ ಯಾರು ಎಲ್ಲಿ ಹೋಗುತ್ತಾರೆ ಎಂಬುದು ತಿಳಿಯಲಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರು ಹೋಗಲ್ಲವೆಂದು ತಿಳಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ …
Read More »ಸರ್ಕಾರ ಮಾಡಬೇಕಾದ ಕೆಲಸವನ್ನು ನಟಿ ಲೀಲಾವತಿ ಮಾಡಿದ್ದಾರೆ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು: ಸರ್ಕಾರ ಮಾಡುವ ಕೆಲಸವನ್ನು ಹಿರಿಯ ನಟಿ ಲೀಲಾವತಿ ಅವರು ಮಾಡಿದ್ದಾರೆ. ಆಸ್ಪತ್ರೆಗೆ ಬೇಕಾದ ಸೌಕರ್ಯಗಳು, ಸೌಲಭ್ಯಗಳು, ಸಿಬ್ಬಂದಿಗಳನ್ನು ಒದಗಿಸುವ ಪ್ರಾಮಾಣಿಕ ಕೆಲಸ ಸರ್ಕಾರದಿಂದ ಮಾಡುತ್ತೇವೆ. ಆಸ್ಪತ್ರೆಯ ಉದ್ಘಾಟನೆಗೆ ಬರದಿದ್ದರೆ ನಮ್ಮ ಹುದ್ದೆಯ ಘನತೆಗೆ ಚ್ಯುತಿ ಬರುತ್ತಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಸೋಲದೇವನಹಳ್ಳಿ ಗ್ರಾಮದಲ್ಲಿ ಹಿರಿಯ ನಟಿ ಲೀಲಾವಲಿ ಅವರು ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ಭಾಗದಲ್ಲಿ ಪಶುವೈದ್ಯಕೀಯ ಆಸ್ಪತ್ರೆ ಆಗಬೇಕಾಗಿದೆ …
Read More »ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್?
ಬೆಂಗಳೂರು: ದಂಡ ಸಂಗ್ರಹ ನಮ್ಮ ಉದ್ದೇಶವಲ್ಲ. ಸಂಚಾರ ನಿಯಮ ಬಗ್ಗೆ ವಾಹನ ಸವಾರರಿಗೆ ಜಾಗೃತಿ ಮೂಡಿಸುವುದೇ ಮೊದಲ ಆದ್ಯತೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮಧ್ಯೆ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ವೊಬ್ಬರು ತಮ್ಮ ಅಧೀನ ಸಿಬ್ಬಂದಿಗೆ ಪ್ರತಿ ದಿನ 40 ಪ್ರಕರಣ ದಾಖಲಿಸಬೇಕು ಎಂದು ಆದೇಶ ನೀಡಿರುವ ಪತ್ರವೊಂದು ವೈರಲ್ ಆಗಿದೆ. ನಿತ್ಯ ಕನಿಷ್ಠ 40 ಪ್ರಕರಣ ದಾಖಲಿಸಿಕೊಳ್ಳಬೇಕು. ನಿಗದಿತ ಸಂಖ್ಯೆಯಲ್ಲಿ ಕೇಸ್ ದಾಖಲಿಸದಿದ್ದರೆ ಕರ್ತವ್ಯ …
Read More »ಮಾಲ್ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ
ಕೇರಳ: ಪತ್ರಕರ್ತೆಯೊಬ್ಬರಿಗೆ ನಟನೊಬ್ಬ ಅಸಭ್ಯವಾಗಿ ನಿಂದಿಸಿದ ಪ್ರಕರಣ ಸುದ್ದಿಯಲ್ಲಿರುವಾಗಲೇ ಮಲಯಾಳಂ ಸಿನಿಮಾರಂಗದಲ್ಲಿ ಮತ್ತೊಂದು ಘಟನೆ ನಡೆದಿದೆ. ಸಿನಿತಾರೆಯರು ತಮ್ಮ ಚಿತ್ರದ ಪ್ರಮೋಷನ್ ಗಾಗಿ ಮಾಲ್, ಥಿಯೇಟರ್ ಗೆ ಹೋಗುವಾಗ, ಅಭಿಮಾನಿಗಳು, ಫೋಟೋ ತೆಗೆದುಕೊಳ್ಳಲು ಮುಗಿಬೀಳುತ್ತಾರೆ. ಮಂಗಳವಾರ ಕೇರಳದ ಕೋಜಿಕೋಡ್ ಮಾಲ್ ವೊಂದರಲ್ಲಿ “ಸ್ಯಾಟರ್ ಡೇ ನೈಟ್” ಎನ್ನುವ ಸಿನಿಮಾ ಪ್ರಚಾರದಲ್ಲಿ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು. ಮೆಚ್ಚಿನ ಕಲಾವಿದರನ್ನು ನೋಡಲು ಅಭಿಮಾನಿಗಳು, ಪ್ರೇಕ್ಷಕರು ಮುಗಿಬಿದ್ದಿದ್ದು, ಅವರನ್ನು ನಿಯಂತ್ರಣ ಮಾಡಲು ಪೊಲೀಸರು …
Read More »
Laxmi News 24×7