ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …
Read More »Daily Archives: ಸೆಪ್ಟೆಂಬರ್ 28, 2022
ಹಣದ ದಾಹಕ್ಕೆ ಮಹಿಳೆಯರ ಗರ್ಭಕೋಶ ಕತ್ತರಿಸಿದ ವೈದ್ಯ.. ಸಿಎಂ ಮನೆಗೆ ಪಾದಯಾತ್ರೆಗೆ ನಿರ್ಧರಿಸಿದ ಮಹಿಳೆಯರು
ಹಾವೇರಿ: ಸರ್ಕಾರಿ ವೈದ್ಯನ ಹಣದ ದಾಹಕ್ಕೆ ಗರ್ಭಕೋಶ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮದ ಮಹಿಳೆಯರು ಇದೀಗ ಮತ್ತೆ ಸಿಎಂ ಮನೆಗೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕುರಿತಂತೆ ರಾಣೆಬೆನ್ನೂರಲ್ಲಿ ಸಭೆ ನಡೆಸಿದ ಮಹಿಳೆಯರು ಬರುವ ತಿಂಗಳು 17 ರಂದು ಸಿಎಂ ಶಿಗ್ಗಾಂವಿ ನಿವಾಸಕ್ಕೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ರಾಣೆಬೆನ್ನೂರು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಪಿ ಶಾಂತ ತಾಲೂಕಿನ ಸುಮಾರು 15 ನೂರಕ್ಕೂ ಅಧಿಕ ಮಹಿಳೆಯರ …
Read More »ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್‌ಐ ನಾಯಕರನ್ನು ನ್ಯಾಯಾಂಗ ಬಂಧನ
ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …
Read More »ಹೆಂಡತಿ ಹೊಟ್ಟೆಗೆ ಚೂರಿ ಹಾಕಿದ ಗಂಡ: ಭಯಗೊಂಡು ಆತ್ಮಹತ್ಯೆಗೆ ಶರಣು
ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ – ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ …
Read More »ಬೆಳಗಾವಿ ಜಿಲ್ಲೆಯ ಯುವಕ. ಪ್ರಿಯತಮೆಯೊಂದಿಗೆ ಜಗಳ.. ಮನನೊಂದು ಕೆಎಸ್‌ಆರ್‌ಪಿ ಟ್ರೈನಿ ನೇಣಿಗೆ ಶರಣು
ಬೆಂಗಳೂರು: ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಪ್ಪ ಅಣ್ಣಪ್ಪ ಅಂಬಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಪ್ಪ, ಆರು ತಿಂಗಳಿಂದ ಮಡಿವಾಳದಲ್ಲಿರುವ ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಸೆ.25ರಂದು ಹೊರಗಡೆ ಹೋದಾಗ ನಾಪತ್ತೆಯಾಗಿದ್ದರು. ಈ ಸಂಬಂಧ ಬೆಟಾಲಿಯನ್‌ನ ಹಿರಿಯ ಅಧಿಕಾರಿಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಸೆ.26ರಂದು ಸಂಜೆ ಬೆಟಾಲಿಯನ್‌ನ ಬ್ಯಾರಕ್‌ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ …
Read More »
Laxmi News 24×7