ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಖೊಟ್ಟಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹೌದು 2012ರಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾನೂನು ಬಾಹಿರವಾಗಿ ಆಸ್ತಿ ಗಳಿಸಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ನೀಡಿದ್ದಾರೆ. ಇದರಿಂದ ಶಾಸಕ ಅಭಯ್ ಪಾಟೀಲ್ ಸುಮಾರು ಬಾರಿ …
Read More »Monthly Archives: ಸೆಪ್ಟೆಂಬರ್ 2022
ಬೆಳಗಾವಿಯಲ್ಲಿ ಬಿತ್ತು ಮತ್ತೊಂದು ಮರ: ಹಲವು ವಾಹನಗಳು ಜಖಂ
ಬೆಳಗಾವಿಯ ಆರ್‍ಟಿಓ ಸರ್ಕಲ್ ಬಳಿ ಮರ ಬಿದ್ದು ಯುವಕನ ಬಲಿ ಪಡೆದ ಬೆನ್ನಲ್ಲಿಯೇ ಮತ್ತೊಂದು ಮರ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆ ಹಲವು ವಾಹನಗಳು ಜಖಂಗೊಂಡಿವೆ. ಬೆಳಗಾವಿಯ ಮಾರ್ಕೆಟ್ ಪೆÇಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆ ಕಚೇರಿ ಬಳಿಯೇ ಬೃಹದಾಕಾರದ ಮರ ಉರುಳಿ ಇನ್ನೊವಾ ವಾಹನ ಸೇರಿದಂತೆ ಇತರ ವಾಹನಗಳು ಜಖಂಗೊಂಡಿವೆ. ಎರಡು ರಿಕ್ಷಾ ಹಾಗೂ ಒಂದು ಇನ್ನೊವಾ ವಾಹನ ಮರದ ಬುಡದಲ್ಲಿ ಸಿಲುಕಿವೆ. ಈ ಘಟನೆಯಲ್ಲಿ ಯಾವುದೇ …
Read More »ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ
ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್‌ಐ(ಕಾ&ಸು) ಹಾರೂಗೇರಿ ಪೊಲೀಸ್ …
Read More »ಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು: ಯತ್ನಾಳ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ʻಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕುʼ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್‌ಐಆರ್ ಗೆ ಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ ಕೆ ಆಡ್ವಾಣಿ, ವಾಜಪೇಯಿಗಿಂತ ಡೊಡ್ಡವ್ರಾ ಅವರು? ಎಲ್ ಕೆ …
Read More »ಗೋಕಾಕ ನಲ್ಲಿ ರೇಬಿಸ್ ದಿನ ಆಚರಣೆ
ಗೋಕಾಕ : ಗೋಕಾಕ ತಾಲೂಕಿನಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು ದಿನಾಂಕ:-15-09-2022 ರಂದು ಪಶು ಆಸ್ಪತ್ರೆ ಗೋಕಾಕನಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ ರವರು ಕಾರ್ಯಕ್ರಮದ ಕುರಿತು ಮಾತನಾಡಿ ರೇಬೀಸ್ ರೋಗ ಪ್ರಾಣಿಜನ್ಯ ರೋಗವಾಗಿದ್ದು ಜಾನುವಾರುಗಳಿಂದ ಜಾನುವಾರುಗಳಿಗೆ, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದ್ದು, …
Read More »17 ರಿಂದ ನಾಲ್ಕು ದಿನಗಳ ಕೃಷಿ ಹಬ್ಬ; 10 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ
ಧಾರವಾಡ: ಕೊರೊನಾ ಮಹಾಮಾರಿಯಿಂದಾಗಿ ಕಳೆದೆರಡು ವರ್ಷಗಳಿಂದ ಕೈ ಬಿಟ್ಟಿದ್ದ ಪ್ರತಿಷ್ಠಿತ ಧಾರವಾಡ ಕೃಷಿ ವಿವಿ ನಡೆಸುವ ಧಾರವಾಡ ಕೃಷಿ ಮೇಳವನ್ನು ಸೆ.17ರಿಂದ ಸೆ.20ರವರೆಗೆ ನಡೆಸಲು ಕೃಷಿ ವಿಶ್ವವಿದ್ಯಾಲಯ ತೀರ್ಮಾನಿಸಿದೆ. ನಾಲ್ಕು ದಿನಗಳವರೆಗೆ ನಡೆಯುವ ಈ ವರ್ಷದ ಕೃಷಿ ಮೇಳವನ್ನು “ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ತಾಂತ್ರಿಕತೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದು, ಶನಿವಾರವೇ ಬೀಜ ಮೇಳದ ಮೂಲಕ ರೈತರ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಕಳೆದ 2-3 ವರ್ಷಗಳಿಂದ ನೆರೆ ಹಾವಳಿ, ಕೋವಿಡ್-19 ಹೊಡೆತದಿಂದ …
Read More »‘ಸಚಿವ ಡಾ.ಕೆ ಸುಧಾಕರ್’ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು …
Read More »ಇದೇ ಅಧಿವೇಶನದಲ್ಲೇ ದಾಖಲೆ ಬಹಿರಂಗ : ‘ಒತ್ತುವರಿ ಬಾಂಬ್’ ಸಿಡಿಸಿದ ಸಚಿವ ಅಶೋಕ್
ಬೆಂಗಳೂರು,ಸೆ.15-ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಯಾರ್ಯಾರು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇದೇ ಅಧಿವೇಶನದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದರ ಕುರಿತು ಯಾರ್ಯಾರು ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೋ ಅವರೆಲ್ಲರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು. ಸುದ್ದಿಗಾರರೊಂದಿಗೆ …
Read More »ಬೆಳಗಾವಿ: ಸಾವಿನಲ್ಲೂ ಒಂದಾದ ವೃದ್ದ ದಂಪತಿ
ಬೆಳಗಾವಿ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲ್ಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಬಣ್ಣ ಅಣ್ಣಿಗೇರಿ(76) ಬುಧವಾರ ತಡರಾತ್ರಿ ಮೃತಪಟ್ಟರು. ಈ ವಿಷಯ ಕೇಳಿದ ಪತ್ನಿ ಶಿವಬಸವ್ವ(70) ಕೆಲಹೊತ್ತಿನಲ್ಲೇ ಹೃದಯಾಘಾತಕ್ಕೀಡಾಗಿ ನಿಧನರಾದರು. ಏಕಕಾಲಕ್ಕೆ ವೃದ್ಧ ದಂಪತಿ ಅಗಲಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ಇಬ್ಬರ ಅಂತ್ಯಕ್ರಿಯೆಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »ಎಷ್ಟೇ ದೊಡ್ಡ ಹುಲಿ ಇದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ; BSY ಮೊದಲು ರಾಜೀನಾಮೆ ನೀಡಲಿ; ಶಾಸಕ ಯತ್ನಾಳ್ ಆಗ್ರಹ
ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊದಲು ಎಲ್ಲಾ ಹುದ್ದೆಗೂ ರಾಜೀನಾಮೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಈ ವಿಚಾರವಾಗಿ ಮೊದಲು ಯಡಿಯೂರಪ್ಪ ರಾಜೀನಾಮೆ ಕೊಡಲಿ. ಎಷ್ಟೇ ದೊಡ್ಡ ಹುಲಿ ಇದ್ರೂ ಕಾನೂನಿನ …
Read More »
Laxmi News 24×7