ಬೆಂಗಳೂರು: ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ, ಇತ್ತೀಚೆಗೆ ‘ಪೇ ಸಿಎಂ’ ಎಂಬ ಅಭಿಯಾನ ಮಾಡಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಗೂ ಕ್ಯೂಆರ್ ಕೋಡ್ ಪ್ರಕಟಿಸಿ ನಗರದ ವಿವಿಧ ಭಾಗಗಳಲ್ಲಿ ಪೋಸ್ಟರ್ ಅಂಟಿಸಿತ್ತು. ಕಾಂಗ್ರೆಸ್ ಮಾಡಿದ ಪೇ ಸಿಎಂ ಅಭಿಯಾನ ರಾಜ್ಯದಲ್ಲಿ ಸಂಚಲನವನ್ನೇ ಎಬ್ಬಿಸಿತ್ತು. ಬೆಂಗಳೂರಿನಲ್ಲಿ ಆರಂಭವಾದ ಕ್ಯಾಂಪೇನ್, ರಾಜ್ಯದ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಅಭಿಯಾನ ಮಾಡಿ, ಬಿಜೆಪಿ …
Read More »Daily Archives: ಅಕ್ಟೋಬರ್ 7, 2022
‘ಏರ್ಟೆಲ್’ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್; ಗುರುವಾರದಿಂದಲೇ 5G ಸೇವೆಗೆ ಚಾಲನೆ
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು 5ಜಿ ಸೇವೆಗೆ ಚಾಲನೆ ನೀಡಿದ್ದು, ಇದರಿಂದ ಗ್ರಾಹಕರಿಗೆ ಅತಿ ವೇಗದ ಇಂಟರ್ನೆಟ್ ಲಭ್ಯವಾಗಲಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಹಾಗೂ ಗೌತಮ್ ಅದಾನಿ ಅವರ ಟೆಲಿಕಾಂ ಕಂಪನಿ 5 ಜಿ ತರಂಗಾಂತರಗಳನ್ನು ತಮ್ಮದಾಗಿಸಿಕೊಂಡಿವೆ. ಇದರ ಮಧ್ಯೆ ಏರ್ಟೆಲ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗುರುವಾರದಿಂದಲೇ ಬೆಂಗಳೂರು ಸೇರಿದಂತೆ ದೇಶದ 8 ನಗರಗಳಲ್ಲಿ ಈ ಸೇವೆ ಲಭ್ಯವಾಗುತ್ತಿದ್ದು, ಪ್ರಸ್ತುತ ಇರುವ …
Read More »ಚುನಾವಣಾ ಆಖಾಡಕ್ಕೆ ಪ್ರಮೋದ್ ಮುತಾಲಿಕ್, ಗುರು ಶಿಷ್ಯರ ಕದನಕ್ಕೆ ವೇದಿಕೆ ಸಿದ್ದ?
ಮಂಗಳೂರು : ಕರಾವಳಿಯಲ್ಲಿ ಪ್ರಮೋದ್ ಮುತಾಲಿಕ್ 2023 ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರಿಂದ ಬೇಡಿಕೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರೀ ಚರ್ಚೆಗೆ ಗ್ರಾಸವಾಗಿದೆ. BIGG NEWS: ಆರನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ; ಡಿಕೆ ಬ್ರದರ್ಸ್ ಗೆ ಭಾಗವಹಿಸಲಾಗದ ಸಂಕಷ್ಟ ಪ್ರಮೋದ್ ಮುತಾಲಿಕ್ 2023 ಚುನಾವಣೆಗೆ ಸ್ಪರ್ಧೆ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ 15 ವಿಧಾನಸಭಾ ಕ್ಷೇತ್ರವಿದೆ. ಇದರಲ್ಲಿ 12 …
Read More »ರೈತರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ನ. 1 ರಿಂದ ‘ಯಶಸ್ವಿನಿ ಯೋಜನೆ’ ಪುನಾರಂಭ
ಬೆಂಗಳೂರು: ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ ಐಸಿಯು ಉಪ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಕಲ್ಪಿಸಲು ಯಶಸ್ವಿನಿ ಯೋಜನೆಯಿಂದ ಅನುಕೂಲವಾಗಿತ್ತು. ರೈತರ ಹಿತ ದೃಷ್ಟಿಯಿಂದ ನವೆಂಬರ್ …
Read More »ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್
ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ. ಕಳೆದ ವಾರ ಬಿಡುಗಡೆಯಾದ ಜಗ್ಗೇಶ್ ಅವರ ತೋತಾಪುರಿ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು. ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್ ಮಾಡುತ್ತಿದೆ. ರಜನಿಕಾಂತ್ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್ ಮಾಡಿಕೊಟ್ಟಿದ್ದಾರೆ. ಆದರೆ …
Read More »SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ …
Read More »ಸಿದ್ದರಾಮಯ್ಯ ಅವಧಿಯ ಸೋಲಾರ್ ಹಗರಣದ ತನಿಖೆಗೆ ಮುಂದಾದ ಬಿಜೆಪಿ ಸರ್ಕಾರ
ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಡೆದ ಸೋಲಾರ್ ಹಂಚಿಕೆ ಹಗರಣದ ತನಿಖೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬಗ್ಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ಈ ಸಂಬಂಧ ಯಾವುದೇ ಕ್ಷಣದಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸೋಲಾರ್ ಉತ್ಪಾದನೆಗಾಗಿ ಕರೆದ ಆನ್ ಲೈನ್ ಅರ್ಜಿ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. 2100 ಕೋಟಿ ರೂ. ಮೊತ್ತದ 300 ಮೆಗಾ ವ್ಯಾಟ್ ಸೋಲಾರ್ …
Read More »ಗದಗ ಜಿಲ್ಲೆಯಲ್ಲಿ ‘ಚುನಾವಣಾ ದೇವರು’: ಹನುಮಂತನ ಬಳಿ ಮೊದಲು ಬಂದು ಪೂಜೆ ಸಲ್ಲಿಸಿದವರಿಗೆ ಗೆಲುವು ನಿಶ್ಚಿತ ಎಂಬ ನಂಬಿಕೆ!
ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇಲ್ಲಿನ ಪ್ರಸಿದ್ಧ ‘ಚುನಾವಣಾ ದೇವರ’ ದರ್ಶನಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಾರಂಭಿಸಿದ್ದಾರೆ. ಗದಗ: ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. …
Read More »ನಿತ್ಯ ಒಂದೂವರೆ ತಾಸು ಮೊಬೈಲ್, ಟಿ.ವಿ ಬಂದ್- ಡಿಜಿಟಲ್ ಲಾಕ್‌ಡೌನ್ ಏನಕ್ಕೆ?
ಬೆಳಗಾವಿ: ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತಂದು, ಕಲಿಕೆ ಯತ್ತ ಆಕರ್ಷಿಸಲು ಇಲ್ಲೊಂದು ಗ್ರಾಮದಲ್ಲಿ ‘ಡಿಜಿಟಲ್ ಲಾಕ್‌ಡೌನ್’ ಘೋಷಿಸಲಾಗಿದೆ. ನಿತ್ಯ ಸಂಜೆ 7ರಿಂದ 8.30ರವರೆಗೆ ಮೊಬೈಲ್, ಟಿ.ವಿ ಬಳಕೆ ನಿಷೇಧಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾಂವ್ ತಾಲ್ಲೂಕಿನ ಮೋಹಿತೆ ವಡಗಾಂವ ಗ್ರಾಮಸ್ಥರು ಇಂತಹ ನಿರ್ಣಯ ಕೈಗೊಂಡಿದ್ದಾರೆ. ಆ.14ರಿಂದ ಹೊಸ ಪದ್ಧತಿ ಜಾರಿಯಾಗಿದ್ದು, ಸಂಜೆ ಹೊತ್ತಿನಲ್ಲಿ ಮಕ್ಕಳು ಮೊಬೈಲ್ ಬದಿಗಿರಿಸಿ ಅಭ್ಯಸಿಸುತ್ತಿದ್ದಾರೆ. ಗ್ರಾಮದ ಜನಸಂಖ್ಯೆ ಸುಮಾರು 3 ಸಾವಿರ. 450 ಮಕ್ಕಳು …
Read More »ವಿದ್ಯುತ್ ತಂತಿ ತುಳಿದು ಸುಟ್ಟು ಕರಕಲಾದ ವ್ಯಕ್ತಿ
ಖಾನಾಪುರ: ಕಳೆದ 26 ದಿನಗಳ ಹಿಂದೆ ಮೇವು ತರಲು ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಅವರ ಅಸ್ತಿಪಂಜರ ಗುರುವಾರ ಪತ್ತೆಯಾಗಿದೆ. ಪೊಲೀಸರು ‘ಹೆಸ್ಕಾಂ’ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಹೊಲದಲ್ಲಿ ಹರಿದುಬಿದ್ದ ವಿದ್ಯುತ್ ತಂತಿ ಸ್ಪರ್ಶದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾರೆ. ವಿದ್ಯುತ್ ಪ್ರವಹಿಸಿದ ಕಾರಣ ಇಡೀ ದೇಹ ಸುಟ್ಟು ಕರಕಲಾಗಿದೆ. ದೇಹದ ಮೂಳೆಗಳು ಹಾಗೂ ತಲೆಬುರುಡೆ ಪ್ರತ್ಯೇಕವಾಗಿ ಸಿಕ್ಕಿವೆ. ಗ್ರಾಮದಿಂದ ದೂರದಲ್ಲಿ ಕಬ್ಬಿನ …
Read More »
Laxmi News 24×7