Breaking News

Daily Archives: ಅಕ್ಟೋಬರ್ 12, 2022

ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್​ನ ಬ್ರೇಕ್ ಫೇಲ್ ಆದ ಹಿನ್ನೆಲೆ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ‌ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ …

Read More »

ಭೋರ್ಗರೆವ ಹಳ್ಳದಲ್ಲೇ ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಸಾಗಿದ ಭಕ್ತರು

ಬೆಳಗಾವಿ: ಭೋರ್ಗರೆಯುತ್ತಿರುವ ಹಳ್ಳದಲ್ಲೇ ಸಾವಿರಾರು ಭಕ್ತರು ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಿಂದ ಅಪ್ಪಾಚಿವಾಡಿ ಗ್ರಾಮಕ್ಕೆ ಸಾಗಿದರು. ಪ್ರತಿ ವರ್ಷ ಹಾಲಸಿದ್ಧನಾಥ ಜಾತ್ರೆ ವೇಳೆ ಅಪ್ಪಾಚಿವಾಡಿಗೆ ಕುರ್ಲಿ ಗ್ರಾಮದಿಂದ ಪಲ್ಲಕ್ಕಿ ಸಾಗಿಸಲಾಗುತ್ತದೆ. ಬಳಿಕ ಎರಡೂ ಗ್ರಾಮದ ಜನರು ಸೇರಿ ಐದು ದಿನಗಳ ಕಾಲ ಅದ್ಧೂರಿಯಾಗಿ ಜಾತ್ರೆ ಮಾಡುತ್ತಾರೆ. ಈ ಎರಡು ಗ್ರಾಮದ ಮಧ್ಯೆ ಗುಮ್ಮಟ ಹಳ್ಳ ಹರಿಯುತ್ತದೆ. ಈ ಹಳ್ಳ ವೇದಗಂಗಾ ನದಿಯ ಸಮೀಪವಿದೆ. …

Read More »

ಕರ್ನಾಟಕ ಇತಿಹಾಸದಲ್ಲಿ 12ನೇ ಶತಮಾನ ಸುವರ್ಣ ಯುಗ

ಮುದ್ದೇಬಿಹಾಳ: ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನ ಸುವರ್ಣ ಯುಗ ಎನ್ನಿಸಿಕೊಂಡಿದೆ. ಅದು ಶರಣರ ಯುಗವಾಗಿತ್ತು. ವಚನ ಸಾಹಿತ್ಯ ಎನ್ನುವ ವಿಶಿಷ್ಟ ಸಾಹಿತ್ಯದ ಪ್ರಾಕಾರ ಕಣ್ಣು ತೆರೆದುಕೊಂಡ ಕಾಲ ಅದಾಗಿತ್ತು. ವಚನ ಸಾಹಿತ್ಯವು ವಿಶ್ವ ಸಾಹಿತ್ಯ ಪ್ರಪಂಚಕ್ಕೆ ಕನ್ನಡ ಸಾಹಿತ್ಯ ಪರಂಪರೆ ನೀಡಿದ ಅಮೂಲ್ಯ ರತ್ನ ಎನ್ನಿಸಿಕೊಂಡಿದೆ ಎಂದು ವಿಜಯಪುರದ ಅಂಕಣಕಾರ, ಸಾಹಿತಿ ಮಂಜುನಾಥ ಜುನಗೊಂಡ ಹೇಳಿದರು.   ಇಲ್ಲಿನ ಎಂಜಿವಿಸಿ ಡಿಇಡಿ ಕಾಲೇಜಿನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್‌, ಎಸ್‌ಜಿವಿಸಿ ವಿದ್ಯಾಪ್ರಸಾರಕ …

Read More »

ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳ

ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು …

Read More »

24 ಗಂಟೆಗಳಲ್ಲಿ ಎಫ್‌ಐಆರ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು

ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್‌ಐಆರ್‌) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ವಿಚಾರವಾಗಿ ವಕೀಲ ಎಸ್‌. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಎಫ್‌ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

ಮೂರು ವಿಧೇಯಕಗಳಿಗೆ ಅನುಮೋದನೆ ನೀಡಿದ ರಾಜ್ಯಪಾಲರು.. ರಾಜಪತ್ರ ಹೊರಡಿಸಿದ ಸರ್ಕಾರ

ಬೆಂಗಳೂರು : ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಎರಡು ಪರೀಕ್ಷಾ ಮಂಡಳಿ ವಿಲೀನ: ರಾಜ್ಯ ಸರ್ಕಾರ ಈ ಸಂಬಂಧ ರಾಜಪತ್ರ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು …

Read More »