ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್ನೋಟ್ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) …
Read More »Daily Archives: ಅಕ್ಟೋಬರ್ 25, 2022
ವಿಶ್ವದಾದ್ಯಂತ ಕೇತುಗ್ರಸ್ತ ಸೂರ್ಯಗ್ರಹಣ ಆರಂಭ : ಇಂಗ್ಲೆಂಡ್, ಇಟಲಿ, ನಾರ್ವೆಯಲ್ಲಿ ಗ್ರಹಣ ಸ್ವರ್ಶ|
27 ವರ್ಷಗಳ ಬಳಿಕ ಸಂಭವಿಸುತ್ತಿರೊ ಕೇತುಗ್ರಸ್ತ ಸೂರ್ಯಗ್ರಹಣ ಆರಂಭವಾಗಿದ್ದು, ಇಂಗ್ಲೇಡ್, ನಾರ್ವೆಯಲ್ಲಿ ಅರ್ಥ ಸೂರ್ಯನನ್ನು ನುಂಗಿದ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಭಾರತದಲ್ಲಿ ಸೂರ್ಯಗ್ರಹಣ ಆರಂಭಗೊಳ್ಳಲು ಇನ್ನೂ ಒಂದು ಗಂಟೆ ಮಾತ್ರ ಬಾಕಿಯಿದೆ. ಬರೊಬ್ಬರಿ 4 ಗಂಟೆಗಳ ಕಾಲ ಬಾನಂಗಳಲ್ಲಿ ವಿಸ್ಮಯ ಕಾಣಿಸಲಿದೆ. ಭಾರತದ ಸೂರ್ಯ ಗ್ರಹನ ಗೋಚರತೆ ಭಾಗಶಃ ಸೂರ್ಯಗ್ರಹಣವನ್ನು ಅನುಭವಿಸುವ ಭಾರತೀಯ ನಗರಗಳೆಂದರೆ ನವದೆಹಲಿ, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಉಜ್ಜಯಿನಿ, ವಾರಣಾಸಿ ಮತ್ತು ಮಥುರಾ ಭಾಗಗಳಲ್ಲಿ ಕಾಣಿಸುತ್ತದೆ. ಗ್ರಹಣದ ಅವಧಿ: …
Read More »ಟ್ರ್ಯಾಕ್ಟರ್- ಲಾರಿ ಡಿಕ್ಕಿ: ಐವರಿಗೆ ಗಾಯ
ಬೆಳಗಾವಿ: ನಗರ ಹೊರವಲಯದ ಅಲಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ತಡರಾತ್ರಿ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಐವರು ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಟ್ರಾಲಿ ತುಂಡಾಗಿ ಬೋರಲು ಬಿದ್ದಿದ್ದು, ಅದರಲ್ಲಿದ್ದವರು ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡು ಟ್ರಾಲಿಗಳನ್ನು ಹೊಂದಿದ ಟ್ರ್ಯಾಕ್ಟರಿನಲ್ಲಿ ಕಬ್ಬು ಕಟಾವು ಮಾಡುವವರು ಕೆಲಸ ಮುಗಿಸಿ ಪ್ರಯಾಣಿಸುತ್ತಿದ್ದರು. ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಬಂದ ಲಾರಿ ಟ್ರ್ಯಾಕ್ಟರಿನ ಎರಡನೇ ಟ್ರಾಲಿಗೆ ಡಿಕ್ಕಿ …
Read More »ಸೈಕ್ಲಿಂಗ್: ಲಾಯಪ್ಪ, ಪ್ರೀತಿ ಪ್ರಥಮ
ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್‍ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …
Read More »ಸೂರ್ಯಗ್ರಹಣ: ಹಲವೆಡೆ ದೇವರ ದರ್ಶನ ಬಂದ್
ಬೆಳಗಾವಿ: ಕೇತುಗ್ರಸ್ಥ ಖಂಡಗ್ರಾಸ (ಖಗ್ರಾಸ) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದ ಮೂರ್ತಿಗಳ ದರ್ಶನ ಬಂದ್ ಮಾಡಲಾಯಿತು. ದೀಪಾವಳಿ ಹಬ್ಬದ ಕಾರಣ ದೇವಸ್ಥಾನಗಳನ್ನು ಮುಚ್ಚಲಿಲ್ಲ. ಆದರೆ, ಮೂರ್ತಿಗಳ ಮೇಲೆ ಬಿಲ್ವಪತ್ರಿ, ಶಾಲುಗಳನ್ನು ಹೊದಿಸಿ ಮರೆ ಮಾಟಲಾಯಿತು. ಸಂಜೆ 4.30ಕ್ಕೆ ಸರಿಯಾಗಿ ಬೆಳಗಾವಿಯಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ ಎಂದು ಅರ್ಚಕರು ಮಾಹಿತಿ ನೀಡಿದರು. ಸೋಮವಾರವೇ ಹಲವು ದೇವಸ್ಥಾನಗಳಲ್ಲಿ ಗ್ರಹಣ ಮಾಹಿತಿ ಹಾಗೂ ದೋಷ ನಿವಾರಣಾ ವಿಧಾನಗಳ ಬಗ್ಗೆ ವಿವರ …
Read More »ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು: ಕಾಂಗ್ರೆಸ್ ಟೀಕೆ
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ನಡೆಸುವ ಟೀಕೆಗಳನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಳ್ಳುತ್ತಿದೆ. ಇದೀಗ ‘ನನ್ನ ತಂಟೆಗೆ ಬಂದರೆ ಹಾವು ಬಿಡುತ್ತೇನೆ’ ಎಂದು ಯತ್ನಾಳ್ ಹೇಳಿಕೆ ಬಳಸಿಕೊಂಡು ಕಾಂಗ್ರೆಸ್ ವ್ಯಂಗ್ಯವಾಡಿದೆ. ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! …
Read More »ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ
ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಹೌದು ಕಿತ್ತೂರು ಪಟ್ಟಣದ ಶಬ್ಬೀರ ಬೀಡಿ ಎಂಬುವವರಿಗೆ ಸೇರಿದ ಕುಶನ್ ಅಂಗಡಿಗೆ ನಿನ್ನೆ ತಡರಾತ್ರಿ ಬೆಂಕಿ ತಗುಲಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದೆ. ಅಂದಾಜು 3 ಲಕ್ಷ ಮೌಲ್ಯದ ಸಿದ್ಧಗೊಂಡಿದ್ದ ಕುಶನ್, ಪೀಠೋಪಕರಣ ಬೆಂಕಿಗಾಹುತಿಯಾಗಿವೆ. ಶಬ್ಬೀರ …
Read More »ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ಬಿಲ್ವಪತ್ರೆಗಳಿಂದ ಮುಚ್ಚಲ್ಪಟ್ಟ ಕಪಿಲೇಶ್ವರ ..!
ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿಯ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ಎಲ್ಲ ಪೂಜಾ ಕಾರ್ಯಗಳನ್ನು ಮುಗಿಸಲಾಯಿತು. ವಾ.ಓ: ಹೌದು ಕೇತುಗ್ರಸ್ತ ಸೂರ್ಯ ಗ್ರಹಣ ಹಿನ್ನೆಲೆ ಪ್ರತಿದಿನದಂತೆ ನಡೆಯುವ ಅಭಿಷೇಕ, ರುದ್ರಾಭಿಷೇಕ ಸೇರಿ ಎಲ್ಲಾ ಕ್ರಿಯೆಗಳನ್ನು ಬೆಳಿಗ್ಗೆ 8 ಗಂಟೆಯೊಳಗೆ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಅರ್ಚಕರು ಪೂರ್ಣಗೊಳಿಸಿದರು. ಬಳಿಕ ಮಧ್ಯಾಹ್ನ ವೇದ ಶುರುವಾಗುವ ಮುಂಚೆ ಶಿವಲಿಂಗವನ್ನು ಪೂರ್ಣವಾಗಿ ಬಿಲ್ವಪತ್ರೆಗಳಿಂದ ಮುಚ್ಚಲಾಯಿತು. ಇದು …
Read More »ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ
lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ …
Read More »ಮುಂದಿನ ಚುನಾವಣೆ ಕ್ಷೇತ್ರ ಘೋಷಿಸಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ
ಚಿತ್ರದುರ್ಗ: ದೀಪಾವಳಿ ದಿನದಂದೇ ಮೀಸಲಾತಿ ಜಾರಿಯಾಗಿದ್ದು, ಇದೇ ದಿನ ವಾಲ್ಮೀಕಿ ಪುತ್ಥಳಿ ಅನಾವರಣವಾಗುತ್ತಿರುವುದು ಸಂತೋಷ ತಂದಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, 2023 ರ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಘೋಷಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಎಂದು ಕೂಡ ಹಿಂದೆ ಸರಿಯಲಿಲ್ಲ. …
Read More »
Laxmi News 24×7