ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಎಚ್.ವಿಶ್ವನಾಥ್ ಕಾಂಗ್ರೆಸ್‌ಗೆ? ಮೈಸೂರು: ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಅಡಗೂರು ಎಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈಗ ಬಿಜೆಪಿಯಲ್ಲಿರುವ ವಿಶ್ವನಾಥ್ ಆ ಪಕ್ಷದಿಂದಲೂ ದೂರ …
Read More »Daily Archives: ಅಕ್ಟೋಬರ್ 25, 2022
ಸ್ಥಾನ ಹೋದರೂ ಅಡ್ಡಿಯಿಲ್ಲ,ಕಿತ್ತೂರಿಗೆ ಎರಡು ಸಲ ಬಂದೆ: ಸಿಎಂ
ಬೆಳಗಾವಿ (ಚನ್ನಮ್ಮನ ಕಿತ್ತೂರು): ಮುಖ್ಯಮಂತ್ರಿ ಸ್ಥಾನ ಹೋದರೂ ಅಡ್ಡಿಯಿಲ್ಲ. ಕಿತ್ತೂರು ಚನ್ನಮ್ಮನ ಪವಿತ್ರ ಭೂಮಿಗೆ ಸತತ ಎರಡು ಸಲ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬ ಮೂಢನಂಬಿಕೆ ಇದೆ. ಸ್ಥಾನ ಕಳೆದುಕೊಳ್ಳುವ ಭಯ ದಿಂದ ಬಹಳಷ್ಟು ಮುಖ್ಯಮಂತ್ರಿಗಳು ಕಿತ್ತೂರಿಗೆ …
Read More »ಮೀಸಲು ಅಧ್ಯಾದೇಶಕ್ಕೆ ಅಧಿವೇಶನದಲ್ಲಿ ಒಪ್ಪಿಗೆ: ಮುಖ್ಯಮಂತ್ರಿ
ಹುಬ್ಬಳ್ಳಿ: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಅಧ್ಯಾದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಮೀಸಲಾತಿ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಗಾಗಿ ಕಾನೂನು ರಕ್ಷಣೆ ಕೊಡಲು ಎಲ್ಲ ಸಾಧ್ಯತೆಗಳನ್ನು ಮಾಡಲಾಗುವುದು. ಅಧ್ಯಾದೇಶಕ್ಕೆ ಮುಂಬರುವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು. ಪಂಚಮಸಾಲಿ ಸಹಿತ ಎಲ್ಲ ಮೀಸಲಾತಿ ಕುರಿತು ಬೇರೆ ಬೇರೆ ಹಂತಗಳಲ್ಲಿ ಹಿಂದುಳಿದ ವರ್ಗಗಳ …
Read More »ಸ್ಥಿರತೆ ಮತ್ತು ಏಕತೆಯೇ ನನ್ನ ಆದ್ಯತೆ; ಯುಕೆಗೆ ಹೊಸ ಭರವಸೆ ಮೂಡಿಸಿದ ರಿಷಿ ಸುನಕ್
ಲಂಡನ್: “ಯುನೈಟೆಡ್ ಕಿಂಗ್‌ಡಮ್(ಯುಕೆ) ಒಂದು ಶ್ರೇಷ್ಠ ರಾಷ್ಟ್ರ. ಆದರೆ ನಾವು ದೊಡ್ಡಮಟ್ಟಿನ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದೇವೆ ಎನ್ನುವುದೂ ಅಷ್ಟೇ ಸತ್ಯ. ನಮಗೆ ಈಗ ಬೇಕಾಗಿರುವುದು ಸ್ಥಿರತೆ ಮತ್ತು ಏಕತೆ. ನಮ್ಮ ಪಕ್ಷವನ್ನು ಮತ್ತು ದೇಶವನ್ನು ಒಗ್ಗೂಡಿಸುವುದೇ ನನ್ನ ಆದ್ಯತೆಯಾಗಿದೆ. ಆಗ ಮಾತ್ರ ನಾವು ಎಂತಹ ಸವಾಲನ್ನು ಬೇಕಿದ್ದರೂ ಸುಲಭವಾಗಿ ಎದುರಿಸಿ ಗೆಲ್ಲಲು ಸಾಧ್ಯ.’ ಇದು ಬ್ರಿಟನ್‌ನ 57ನೇ ಪ್ರಧಾನಿಯಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ರಿಷಿ ಸುನಕ್ ಅವರ ಮಾತುಗಳು. ಕಳೆದ 200 …
Read More »ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಪ್ರಮಾಣ ಹೆಚ್ಚಳ ಸಂಬಂಧ ಅಧ್ಯಾದೇಶಕ್ಕೆ ಸಹಿ ಬಿದ್ದ ಬೆನ್ನಲ್ಲೇ ಧರಣಿ ಸತ್ಯಾಗ್ರಹ ಕೈಬಿಡುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಘೋಷಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಿರತ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು ಅಧ್ಯಾದೇಶಕ್ಕೆ ಅಂಕಿತ ಬಿದ್ದ ಪತ್ರ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದಿನ ಮುಖ್ಯಮಂತ್ರಿಗಳು ನಮ್ಮ ಮೂಗಿಗೆ ತುಪ್ಪ ಸವರುವ …
Read More »
Laxmi News 24×7