ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಆದಷ್ಟು ಅನ್ಯಾಯ ಬೇರೆ ಯಾವುದೇ ಸರ್ಕಾರದ ಕಾಲದಲ್ಲೂ ಆಗಿಲ್ಲ. ಈ ವರ್ಗಗಳಿಗೆ ಸೇರಿದ 11ಕ್ಕೂ ಹೆಚ್ಚು ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿಮೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಗಜೀವನ್‌ರಾಂ ಅಭಿವೃದ್ಧಿ ನಿಗಮಗಳಿಗೆ ಅನುದಾನ ಕಡಿಮೆ ಮಾಡಲಾಗಿದೆ. ಇದು ಹಿಂದುಳಿದವರ ಮೇಲೆ …
Read More »Daily Archives: ನವೆಂಬರ್ 2, 2022
ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗದ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್..!
ವಿಜಯಪುರ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೋವಿದೆ. ಅದನ್ನ ಪಕ್ಷದ ಹಿರಿಯರು ಸರಿಪಡಿಸುತ್ತಾರೆ. ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನಕೂಲಮಾಡಿಕೊಂಡು ಸಿಎಂ ಆಗಿದ್ದಾರೆ. ಯಾರು ರೆಡ್ಡಿ ಅವರ ಅನಕೂಲದಿಂದ ಸಿಎಂ ಆಗಿದ್ದಾರೋ ಅವರು ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ವಿಜಯಪುರ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಹಾಗೂ …
Read More »ಎಲ್ಲ ರಂಗಗಳಲ್ಲಿ ಕನ್ನಡ ಕಡ್ಡಾಯ: C.M.ಬೊಮ್ಮಾಯಿ
ಬೆಂಗಳೂರು: ‘ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಡಿಸೆಂಬರ್‌ನಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡುವ ಮಸೂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಗುವುದು’ ಎಂದರು. ‘ಕನ್ನಡ ಭಾಷೆಗೆ ಕಾನೂನಿನ ಕವಚ ನೀಡುತ್ತಿರುವ ಮೊದಲ ಸರ್ಕಾರ ನಮ್ಮದು. …
Read More »ಕಾನೂನು ನಿಯಮದಂತೆ ಟೋಲ್ ತೆರವು: ನಳಿನ್ ಕುಮಾರ್ ಕಟೀಲು
ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದ್ದು, ನಮ್ಮದೇನು ಅಭ್ಯಂತರವಿಲ್ಲ. ಕಾನೂನು ನಿಯಮದಡಿ ನಾವು ಟೋಲ್ ತೆರವು ಮಾಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದಾಗ ಟೋಲ್‌ಗೇಟ್ ತೆರವು ಮಾಡದವರು ಈಗ ಹೋರಾಟ ಮಾಡುತ್ತಿರುವುದು ರಾಜಕೀಯ ನಾಟಕ. ಆಸ್ಕರ್ ಫೆರ್ನಾಂಡಿಸ್ ಕೇಂದ್ರ ಸಚಿವರಾಗಿದ್ದ ವೇಳೆ ಅವರು ಏಕೆ ಮನವಿ ನೀಡಲಿಲ್ಲ ಎಂದು ಪ್ರಶ್ನಿಸಿದರು. ತೂಗು ಸೇತುವೆಗಳ ಪರಿಶೀಲನೆ …
Read More »ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್ ಬಂದಿತ್ತು: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯ ರಾಜಕಾರಣಕ್ಕೆ ಸಂದೇಶ ರವಾನಿಸಿದೆ. ಆದರೆ, ಈ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಕಳ್ಳರ ಗ್ಯಾಂಗ್ ಮನೆಯಲ್ಲಿಯೇ ಕುಳಿತು ತಂತ್ರ ಮಾಡಿದೆ. ಮಾತ್ರವಲ್ಲ, ಮುಧೋಳ ಮತ್ತು ಬೆಂಗಳೂರಿನಿಂದಲೂ ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ …
Read More »ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್ ಹೃದಯಾಘಾತದಿಂದ ಸಾವು
ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್ನಲ್ಲಿ ಹೃದಯಾಘಾತದಿಂದ ಕಂಡಕ್ಟರ್ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೇಶ್ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು. ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್ಗೆ …
Read More »ವೇದಾವತಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗಿದ ಸಚಿವ ಶ್ರೀರಾಮುಲು
ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕಾರ್ಯ ತ್ವರಿತವಾಗಿ ನಡೆಯಬೇಕೆಂದು ನಿನ್ನೆ ರಾತ್ರಿ ಸಚಿವ ಶ್ರೀರಾಮುಲು ನದಿ ಪಕ್ಕದಲ್ಲೇ ವಾಸ್ತವ್ಯ ಹೂಡಿದರು. ಬಳ್ಳಾರಿ: ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ …
Read More »ಬೆಳಗಾವಿ: ಮುಮ್ಮಡಿಗೊಂಡ ಕನ್ನಡಿಗರ ಸಂಭ್ರಮ
ಬೆಳಗಾವಿ : ಒಂದೆಡೆ ಸ್ತಬ್ಧಚಿತ್ರಗಳ ಮೆರವಣಿಗೆ, ಮತ್ತೊಂದೆಡೆ ಯುವಜನರ ಹಾಡು- ಕುಣಿತ. ನಗರದಲ್ಲಿ ಮಂಗಳವಾರ ಕಂಡುಬಂದ 67ನೇ ಕರ್ನಾಟಕ ರಾಜ್ಯೋತ್ಸವದ ನೋಟವಿದು. ಮೂರು ವರ್ಷಗಳಿಂದ ಅದುಮಿಟ್ಟಿಗೊಂಡಿದ್ದ ನಾಡಭಕ್ತಿ ಏಕಾಏಕಿ ಅನಾವರಣಗೊಂಡಿತು. ಒತ್ತಕ್ಕಿ ಇಟ್ಟ ಸ್ಪ್ರಿಂಗು ನೆಗೆಯುವಂತೆ ಕನ್ನಡ ಹೃದಯಗಳು ಛಂಗನೆ ನೆಗೆದುಬಂದವು. ಎರಡು ವರ್ಷಗಳಿಂದ ಕೊರೊನಾ ಕಾಟಕ್ಕೆ ಮೆರವಣಿಗೆ ಕೈಬಿಡಲಾಗಿತ್ತು. ಕಳೆದ ವರ್ಷ ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೋವಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ಬಾರಿ ಎಲ್ಲ ಅಡ್ಡಿಗಳೂ …
Read More »ಬೆಳಗಾವಿ: ಗಡಿಯಲ್ಲಿ ಭೋರ್ಗರೆದ ಕನ್ನಡ ಪ್ರೇಮ
ಬೆಳಗಾವಿ: ಉದ್ದಾನುದ್ದದ ಕನ್ನಡ ಬಾವುಟ. ಕನ್ನಡದ ಹಿರಿಮೆಯನ್ನು ಎತ್ತಿಹಿಡಿದ ಯುವಜನರ ಕೈಗಳು, ಕನ್ನಡಕ್ಕಾಗಿ ಕೈ ಎತ್ತಿ ಕಲ್ಪವೃಕ್ಷವಾದಂತೆ ಭಾಸವಾಗುತ್ತಿತ್ತು. ಜಾನಪದ ಕಲಾವಿದರ ಹೆಜ್ಜೆಗಳೂ ಕನ್ನಡದ ಹಿರಿಮೆಯನ್ನೇ ಮಾತನಾಡುತ್ತಿದ್ದವು. ಎತ್ತ ನೋಡಿದರತ್ತ, ಬೆಳಗಾವಿಯ ನಗರದಲ್ಲಿ ಕನ್ನಡದ ಡಿಂಡಿಮ ಮೊಳಗಿತು. ಮೂರು ವರ್ಷಗಳ ನಂತರ ಮಂಗಳವಾರ ಜರುಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಹರ್ಷೋದ್ಗಾರಗಳು ಮುಗಿಲು ಮುಟ್ಟಿದ್ದರೆ, ಹೆಜ್ಜೆಗಳು ಭುವಿಯನ್ನು ನಡುಗಿಸುತ್ತಿದ್ದವು. ಅನ್ಯ ಭಾಷಿಗರು ಸೊಲ್ಲೆತ್ತದಂತೆ ಕನ್ನಡದ ಧ್ವನಿ ನೆಲ-ಬಾನು ಒಂದು ಮಾಡಿದವು. ನಾಡು, ನುಡಿಯ …
Read More »