Breaking News

Daily Archives: ನವೆಂಬರ್ 7, 2022

11,136 ಪೌರಕಾರ್ಮಿಕರಿಗೆ ಖಾಯಂ ನೌಕರಿಗೆ ಅಧಿಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಹನ್ನೊಂದು ಸಾವಿರ ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್‌ ಬುದ್ಧ, ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಲೆಕ್‌ಪಾರ್ಕ್‌ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್‌ ಭವನ ಉದ್ಘಾಟಿಸಿ …

Read More »

ನಾನು ಸೋಮವಾರ ಇಡಿ ಮುಂದೆ ಹಾಜರಾಗುವುದಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು : ನಾನು ನಾಳೆ (ಸೋಮವಾರ) ಇಡಿ ಮುಂದೆ ಹಾಜರಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ. ನವೆಂಬರ್ 7 ರಂದು ತನ್ನ ಮುಂದೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ ಕುರಿತಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ , ನನ್ನ ಸಹೋದರ ಮತ್ತು ನನ್ನನ್ನು ಇಡಿ ವಿಚಾರಣೆಗೆ ಕರೆಸಲಾಗಿದೆ. ನವೆಂಬರ್ 7 ರಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಗಳಲ್ಲಿ ನಾನು ನಿರತನಾಗಿದ್ದೇನೆ, ,ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು …

Read More »

ತ್ರಿಚಕ್ರ ವಾಹನದ ಅಪಘಾತ; ದಿವ್ಯಾಂಗನ ದುರ್ಮರಣ

ತ್ರಿಚಕ್ರ ವಾಹನ ಅಪಘಾತಕ್ಕಿಡಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಹಿರೇಬಾಗೇವಾಡಿ-ಮೋದಗಾ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ೪೦ ವರ್ಷದ ಗಣಪತಿ ಮುರಗೋಡ ಎಂದು ಗುರುತಿಸಲಾಗಿದೆ. ಹುಟ್ಟು ದಿವ್ಯಾಂಗರಾಗಿದ್ದ ಗಣಪತಿ ನಾವಲಗಟ್ಟಿಯಿಂದ ಮೊದಗಾ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರಥರು ಸಹೋದರರು, ಸಹೋದರು ಮತ್ತು ಪತ್ನಿಯನ್ನು ಅಗಲಿದ್ದಾರೆ. ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು:C.M.

ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿಯವರು ಭಗವಾನ್ ಬುದ್ಧನ ಮತ್ತು ಭಾರತರತ್ನ ಡಾ.ಬಾಬಾಸಾಹೇಬ್‌ರ ತತ್ವಾದರ್ಶಗಳು ಅನುಸರಣಿಯವಾಗಿವೆ. …

Read More »

ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಶ್ರೀ ಹಾಗೂ ದೀಪಕ್ ಗುಡ್ ಗನಟ್ಟಿ ಅವರಿಂದ ಸನ್ಮಾನ

ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ ಅವರು, ಪುತ್ರಿ ನೇತ್ರಾವತಿ, ಪುತ್ರ ನಿರಂಜನ ಭಾನುವಾರ ನಗರದ ಹುಕ್ಕೇರಿ ಹಿರೇಮಠದ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಈ‌ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಹಲಗಲಿ ಅವರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕದಲ್ಲಿ ಮಾತ್ರ …

Read More »

ಸವದತ್ತಿ ಸ್ವಾದಿಮಠ ಸ್ವಾಮಿಜೀ ಲಿಂಗೈಕ್ಯ

ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಇಂದು ಬೆಳಗಾವಿಯಲ್ಲಿ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ನ ಆ್ಯಂಬುಲೆನ್ಸ್ ಮೂಲಕ ಅವರ ಪಾರ್ಥಿವನ್ನು ಸವದತ್ತಿಗೆ ರವಾಣಿಸಲಾಯಿತು. ಇತ್ತಿಚೇಗೆ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ ವಿಜಯಪುರದ ಜಿಲ್ಲೆ ಕುದರಿ ಸಾಲವಾಡಗಿಯಲ್ಲಿ ಅವರ ಪಾರ್ಥಿವದ ಮೇಲೆ ಅಂತ್ಯಕ್ರಿಯೆ ನಡೆಯಿತು.

Read More »

ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರ

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಚಾಂದನಿ ದೇವಡಿ ಮತ್ತು ಕೇಂದ್ರ ಕಾರಾಗೃಹದ ಮುಖ್ಯ …

Read More »

ನಿಪ್ಪಾಣಿಯಲ್ಲಿ‌ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ

ಮಾನವ ಬಂಧುತ್ವ ವೇದಿಕೆ-ಕರ್ನಾಟಕ ನೇತೃತ್ವದಲ್ಲಿ ಇಂದು ನಿಪ್ಪಾಣಿಯಲ್ಲಿ‌ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಭಾಗವಹಿಸಿದರು. ತಂದೆಯವರಾದ ಹಾಗೂ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಯವರು, ಹೆಬ್ಬಾಳ ಗ್ರಾಮದ ಬಸವ ಭವನದ ಬಸವ ಚೇತನ ದೇವರು ಇದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದರ ಮೂಲಕ ಕಾರ್ಯಕ್ರಮವನ್ನು …

Read More »