Breaking News

Daily Archives: ನವೆಂಬರ್ 8, 2022

ವಿಕೋಪಕ್ಕೆ ತಿರುಗಿದ ಪ್ರತಿಭಟನೆ: ಸಿಪಿಐ ಎದೆಗೇ ಬಿತ್ತು ಪ್ರತಿಭಟನಾಕಾರರು ಎಸೆದ ಕಲ್ಲು, ಪೊಲೀಸರಿಗೆ ಗಾಯ

ಬಾಗಲಕೋಟೆ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಬಾಗಲಕೋಟೆಯ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತೆರಳಿದ್ದು, ಕಲ್ಲು ತೂರಾಟವೂ ನಡೆದಿದೆ. ಮಾತ್ರವಲ್ಲ, ಇನ್​ಸ್ಪೆಕ್ಟರ್ ಸೇರಿ ಮೂವರು ಪೊಲೀಸರಿಗೆ ಗಾಯವಾಗಿದೆ. ಬಾಗಲಕೋಟೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಎದುರು ಕಬ್ಬು ಬೆಲೆ ನಿಗದಿ ವಿಚಾರವಾಗಿ ರೈತರ ಪ್ರತಿಭಟನೆ ನಡೆಸುತ್ತಿದ್ದು, ಅದು ಇದೀಗ ವಿಕೋಪಕ್ಕೂ ತಿರುಗಿದೆ. ಪ್ರತಿಭಟನಾಕಾರರು ಎಸೆದ ಕಲ್ಲು ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್ ಎದೆಗೇ ಬಿದ್ದಿದ್ದು, ಅವರೂ ಸೇರಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. …

Read More »

ಮೈಸೂರಿಗೆ ಬಂದ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲು

ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ.   ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು. ರೈಲನ್ನು ಮೊದಲ …

Read More »

K.R.S. ಬೃಂದಾವನದಲ್ಲಿ ಚಿರತೆ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು.   ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಮೀನುಗಾರಿಕಾ ಇಲಾಖೆಯ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂಂದಿಯ ಕಣ್ಣಿಗೆ ಬಿದ್ದಿದೆ. ತಕ್ಷಣ ಜಾಗೃತರಾದ ಭದ್ರತಾ …

Read More »

ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ವೃದ್ಧೆಯ ಮೇಲೆ ಜೇನು ದಾಳಿ

ಭತ್ತದ ಕಟಾವಿಗೆ ಗದ್ದೆಗೆ ಹೋಗಿದ್ದ ವೃದ್ಧ ರೈತ ಮಹಿಳೆ ಓರ್ವರಿಗೆ ಜೇನು ಹುಳು ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ನಡೆದಿದೆ. ಯಳ್ಳೂರ ಗ್ರಾಮದ 70 ವರ್ಷದ ಚಾಂಗುನಾ ಕೃಷ್ಣಾ ಕುಗಜಿ ಜೇನು ದಾಳಿಯಿಂದ ಗಾಯಗೊಂಡಿರುವ ವೃದ್ಧ ರೈತ ಮಹಿಳೆ. ತಮ್ಮ ಹೊಲದಲ್ಲಿ ಭತ್ತದ ಕಟಾವು ಮಾಡಲು ಬಂದಿದ್ದ ವೇಳೆ ಏಕಾಏಕಿ ಜೇನುಗಳು ದಾಳಿ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯ ಮುಖ, ಬಾಯಿ ಮತ್ತು ತುಟಿಗಳಿಗೆ …

Read More »