ಖಾನಾಪೂರ ತಾಲೂಕಿನ ನಂದಗಡದಲ್ಲಿರುವ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ 17 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರವಿಂದ್ ಪಾಟೀಲ್ ಅವರು ತಾಲೂಕಾ ಮಾರ್ಕೆಟಿಂಗ್ ಸೂಸೈಟಿಯ ಅಭಿವೃದ್ಧಿಗೆ ಸತತ ಪರಿಶ್ರಮ ಪಟ್ಟಿದ್ದು ಹಾಲಿ ಅಧ್ಯಕ್ಷರಾದ ಶ್ರೀಶೈಲ ಮಾಟೋಳ್ಳಿ ಅವರು ಎರಡು ವರ್ಷಗಳ ಅವಧಿಯ ನಂತರ ರಾಜೀನಾಮೆ ನೀಡಿದ್ರು. ಖಾಲಿ ಇದ್ದ ಈ ಸ್ಥಾನಕ್ಕೆ ಇನ್ನಿತರ ನಿರ್ದೇಶಕರು …
Read More »Daily Archives: ನವೆಂಬರ್ 22, 2022
ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಅಳವಡಿಸಲು ಮುಂದಾದ ಹಿಂಡಲಗಾ ಪಂಚಾಯತಿ
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕರು ಕಸ ಚೆಲ್ಲುತ್ತಿದ್ದಾರೆ. ಹೀಗೆ ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯತಿ ವಿನೂತನ ಕ್ರಮಕ್ಕೆ ಮುಂದಾಗಿದೆ. ಹೌದು ಸಿಸಿ ಕ್ಯಾಮರಾ ಅಳವಡಿಸುವ ಕಾಮಗಾರಿಗೆ ಮಂಗಳವಾರ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳ್ಕರ್ ಚಾಲನೆ ನೀಡಿದರು. ಅದೇ ರೀತಿ ಕಸ ಚೆಲ್ಲುವವರಿಗೆ 5 ಸಾವಿರ ರೂಪಾಯಿ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ಗ್ರಾಮ ಪಂಚಾಯತಿ ನೀಡಿದೆ. ಈ ವೇಳೆ ಗ್ರಾ.ಪಂ.ಉಪಾಧ್ಯಕ್ಷೆ ಭಾಗ್ಯಶ್ರೀ ಕೋಕಿತ್ಕರ್, …
Read More »ಜುಡೋ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿಯ ಪದಕ ಬೇಟೆಯಾಡಿದ ಮುತ್ಯಾನಟ್ಟಿ ಸಿನಿಯರ್, ಜೂನಿಯರ್
ಸಿನಿಯರ್, ಜೂನಿಯರ್ ಜುಡೋ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಭರ್ಜರಿ ಪದಕ ಬೇಟೆಯಾಡಿದ್ದಾರೆ. ಹೌದು ಇದೇ ನವೆಂಬರ್ 21ರಂದು ಶಿವಮೊಗ್ಗದ ಅನಂತಪುರದಲ್ಲಿ ನಡೆದ ಸಿನಿಯರ್, ಜೂನಿಯರ್ ಜುಡೋ ಚಾಂಪಿಯನ್‍ಶಿಪ್‍ನಲ್ಲಿ ವಿಷ್ಣು 73 ಕೆಜಿ ಚಿನ್ನದ ಪದಕ, ಚೇತನ್ 66 ಕೆಜಿ ಚಿನ್ನದ ಪದಕ, ಯೋಗೇಶ್ 30 ಕೆ.ಜಿ ಚಿನ್ನದ ಪದಕ, ಸಂದೀಪ್ 35 ಕೆ.ಜಿ ಚಿನ್ನದ ಪದಕ, ಗೌತಮ್ 40 ಕೆ.ಜಿ ಚಿನ್ನದ ಪದಕ, ಪ್ರೀತಮ್ 45 ಕೆ.ಜಿ …
Read More »ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ತೆರವು ಮಾಡಿದ ಬುಡಾ ಅಧಿಕಾರಿಗಳು
ಬೆಳಗಾವಿ ರಾಮತೀರ್ಥ ನಗರದಲ್ಲಿ ಸಾರ್ವಜನಿಕ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಬುಡಾ ಅಧಿಕಾರಿಗಳು ತೆರವು ಮಾಡಿದ್ದಾರೆ. ಹೌದು ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಸಹಾಯದಿಂದ ರಾಮತೀರ್ಥ ನಗರದಲ್ಲಿ ಯೋಜನೆ ಸಂಖ್ಯೆ 35, 40, 41ರಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧ ಮಾತನಾಡಿದ ಬುಡಾ ಎಇಇ ಮಹಾಂತೇಶ ಹಿರೇಮಠ ಅವರು ಯಾವುದೇ ಅನಧಿಕೃತ ಮನೆಗಳನ್ನು ಯಾರೂ ಕೂಡ ಕಟ್ಟಬಾರದು. ಪ್ರಾಧಿಕಾರಕ್ಕಾಗಿ ನಾವು ವಶಪಡಿಸಿಕೊಂಡಿರುವ ಅಥವಾ …
Read More »ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಆಕಳು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಹೌದು ಸೋಮವಾರ ರಾತ್ರಿ ಬೆಳಗಾವಿ ನಗರದ 3ನೇ ಮತ್ತು 4ನೇ ರೈಲ್ವೇ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ರೈಲು ಗುದ್ದಿದ ಪರಿಣಾಮ ಆಕಳುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸ್ಯಾನಿಟರಿ ಇನ್ಸಪೆಕ್ಟರ್ ಗಣಾಚಾರಿ ಮತ್ತು ಅವರ ತಂಡ ಆಕಳುಗಳ ಶವಗಳನ್ನು ತೆಗೆದುಕೊಂಡು ಹೋಗಿ …
Read More »ವಸತಿ ನಿಲಯದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್‍ನಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು …
Read More »KSRTC ಹೆಸರಿನಲ್ಲಿ ನಕಲಿ ಉದ್ಯೋಗ ಜಾಹೀರಾತು
ಕೆಎಸ್‌ಆರ್ ಟಿಸಿ ನಿಗಮದ ಹೆಸರು ದುರುಪಯೋಗ ಮಾಡಿಕೊಂಡು ಉದ್ಯೋಗ ಜಾಹೀರಾತು ನೀಡಿದ ಎನ್ ಜಿಓ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸನ್ಮಾರ್ಗ ಎನ್ ಜಿಓ ಎಂಬ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಿ ಉದ್ಯೋಗದ ಜಾಹಿರಾತು ನೀಡಿದೆ. ಇದರ ವಿರುದ್ಧ ಶಿವಮೊಗ್ಗ ಕೆಎಸ್‌ಆರ್ ಟಿಸಿ ವಿಭಾಗದ ಮುಖ್ಯಸ್ಥ ಮರಿಗೌಡ ದೂರು ದಾಖಲಿಸಿದ್ದಾರೆ. ಡ್ರೈವರ್ ಗಳು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಲಾಗಿದ್ದು, 650 ಹುದ್ದೆಗಳು ಖಾಲಿಯಿದೆ ಎಂದು …
Read More »ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ಹಲವು ಪೊಲೀಸರಿಗೆ ಗಾಯ
ಚಿತ್ರದುರ್ಗ: ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ನಗರದಲ್ಲಿ ನಡೆದಿದೆ. ಹಿರಿಯೂರು ತಾಲೂಕು ಕಚೇರಿ ಬಳಿ ದುರ್ಘಟನೆ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ವಾಹನ ತಾಗಿ ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಘಟನೆ ನಡೆದಿದೆ. ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ …
Read More »ಮತ್ತೆ {ಗೋಕಾಕ} ಘಟಪ್ರಭಾ ಶಿಂಗಲಾಪೂರ ಹತ್ತಿರ ಮೊಸಳೆ ಪ್ರತ್ಯಕ್ಷ
ಗೋಕಾಕ: ಕಳೆದ ಎರಡು ವಾರದ ಹಿಂದೆ ಗೋಕಾಕ ಫಾಲ್ಸ್ ನಲ್ಲಿ ಮೊಸಳೆ ಕಾಣಿಸಿ ಕೊಂಡಿತ್ತು. ಎರಡು ವಾರ ಕಳೆದರೂ ಕೂಡ ಮೊಸಳೆ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ್ ವಿಫಲ ವಾಗಿದೆ. ಇವಾಗ ಮತ್ತೊಂದು ಮೊಸಳೆ ಶಿಂಗಲಾ ಪುರ ಮಾರ್ಕಂಡೇಯ ಘತಪ್ರಭೆ ನದಿ ಸೇರುವ ಸ್ಥಳದಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷ ವಾಗಿದೆ ಇದರಿಂದ ಸಾರ್ವಜನಿಕ ರಲ್ಲಿ ಆತಂಕ ಉಂಟಾಗಿದೆ. ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆಯ ದುರ್ಲಕ್ಷ್ಯವೆ ಕಾರಣ ಎನ್ನ …
Read More »ಧಾರವಾಡ | ಇನ್ನೂ ಬಾರದ ಕರ್ನಾಟಕ ವಿವಿಯ ಎರಡು ಸೆಮಿಸ್ಟರ್‌ಗಳ ಫಲಿತಾಂಶ
ಧಾರವಾಡ: ನೂತನ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಿದ ಕರ್ನಾಟಕ ವಿಶ್ವವಿದ್ಯಾಲಯವು ಎರಡು ಸೆಮಿಸ್ಟರ್‌ಗಳ ಫಲಿತಾಂಶವನ್ನು ಪ್ರಕಟಿಸಲು ಏದುಸಿರು ಬಿಡುತ್ತಿದೆ. ಕವಿವಿ ಎನ್‌ಇಪಿಯನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದು ಅಧಿಕಾರಿಗಳು ಹೇಳಿಕೊಂಡಿದ್ದರು. ಎನ್‌ಇಪಿ ಅಡಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಇದೀಗ ಮೂರನೇ ಸೆಮಿಸ್ಟರ್ ಪೂರ್ಣಗೊಳಿಸುವ ಹಂತದಲ್ಲಿದ್ದಾರೆ. ಆದರೆ, ಈವರೆಗೂ ಮೊದಲ ಹಾಗೂ ಎರಡನೇ ಸೆಮಿಸ್ಟರ್ ಫಲಿತಾಂಶಗಳು ಬಾರದೆ, ಅವರೆಲ್ಲರೂ ಗೊಂದಲದಲ್ಲಿದ್ದಾರೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ವ್ಯಾಪ್ತಿ …
Read More »