Breaking News

Daily Archives: ನವೆಂಬರ್ 22, 2022

ಬೆಳಗಾವಿ ಗಡಿ ವಿವಾದ : ಅತ್ತ ‘ಮಹಾ’ ಸಿದ್ಧತೆ, ಇತ್ತ ಗಾಢ ನಿದ್ದೆ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ, ಸಮರ್ಥ ವಾದ ಮಂಡಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಹಾರಾಷ್ಟ್ರ ಸರ್ಕಾರ ಮಾಡಿಕೊಂಡಿದೆ. ಆದರೆ, ಕರ್ನಾಟಕ ಸರ್ಕಾರ ತುರ್ತು ಸಿದ್ಧತೆಗಳನ್ನೂ ಮಾಡಿಕೊಳ್ಳದಿರುವುದು ಗಡಿ ಕನ್ನಡಿಗರು ಹಾಗೂ ಹೋರಾಟಗಾರರನ್ನು ಆತಂಕಕ್ಕೆ ತಳ್ಳಿದೆ.   1956ರ ರಾಜ್ಯ ಪುನರ್‌ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯಲಿದೆ. ಗಡಿ ವಿವಾದವನ್ನು ಸುಪ್ರೀಂ …

Read More »

ಬೆಳಗಾವಿಯಲ್ಲಿ ಕುಸಿದ ತಾಪಮಾನ: 10.2 ಡಿಗ್ರಿ ಸೆಲ್ಸಿಯಸ್‌ ದಾಖಲು

ಬೆಳಗಾವಿ: ನಗರದಲ್ಲಿ ಸೋಮವಾರ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಪ್ರಸಕ್ತ ವರ್ಷದ ಈವರೆಗಿನ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ. ಕಳೆದ ಸೋಮವಾರದಿಂದ  ಗರಿಷ್ಠ 27ರಿಂದ ಕನಿಷ್ಠ 18ರ ಆಸುಪಾಸಿನಲ್ಲೇ ದಾಖಲಾಗಿದೆ. ಸೋಮವಾರ ಏಕಾಏಕಿ ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಇನ್ನೂ ಎರಡು ದಿನ ಇಷ್ಟೇ ಪ್ರಮಾಣದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನಗರದ ಜನ ಥರಗುಟ್ಟುವ ಚಳಿಯಿಂದ ಬಳಲುವಂತಾಯಿತು. ಗರಿಷ್ಠ ತಾಪಮಾನ ಸರಾಸರಿ …

Read More »

ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ‘ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವುದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆಭರದ ಸಿದ್ಧತೆ ನಡೆಸಿದ್ದಾರೆ. …

Read More »

ಸುಪ್ರೀಂನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ಸರ್ವಸನ್ನದ್ಧ: ಬೊಮ್ಮಾಯಿ

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ (ನ.23) ಸುಪ್ರಿಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದ 18 ವರ್ಷಗಳ ಬಳಿಕ ವಿಚಾರಣೆಗೆ ಬರುವುದರಿಂದ, ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.   ‘ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ’ ಎಂದು …

Read More »

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು. ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ. ಈ …

Read More »

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ , ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಹೌದು ಮಂಗಳವಾರ ಬೆಳಿಗ್ಗೆ ನಗರದ ಶಿವಾಜಿ ಗಾರ್ಡನ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸಿಮೆಂಟ್ ಕಂಟೇನರ್ ವಾಹನ ಗುದ್ದಿದೆ. ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಶಿವಾಜಿ ನಗರದ ರಾಮಸ್ವಾಮಿ ಗೌಡರ ಎಂದು ಗುರುತಿಸಲಾಗಿದೆ. ಘಟನೆಯಿಂದ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ …

Read More »

ಅಂತರಾಷ್ಟ್ರೀಯ ಮಟ್ಟದ 2022ನೇ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ

ದೈಹಿಕ ಅಂಗವಿಕಲತೆಯನ್ನು ಲೆಕ್ಕಿಸದೆ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ 2022ನೇ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ವಿಕಲಚೇತನ ಕ್ರೀಡಾ ಪಟುಗಳಿಗೆ ಸರ್ಕಾರದಿಂದ ಹೆಚ್ಚಿನ ಸಹಾಯ, ಸಹಕಾರ ಸಿಗುವಂತಾಗಬೇಕು ಎಂದು ಸುರೇಶ ಯಾದವ ಫೌಂಡೇಶನ್ ಸಂಸ್ಥಾಪಕ ಸುರೇಶ ಯಾದವ ಅಭಿಪ್ರಾಯ ಪಟ್ಟರು. ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಫೆಡರೇಷನ್ ಆಫ್ ಇಂಡಿಯಾ, ಒಲಂಪಿಕ್ ಕಮಿಟಿ …

Read More »

ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀರ್ಪು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನವೆಂಬರ್ 23 ರ ನಾಳೆ ನಡೆಯಲಿದೆ.   ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಈ ನಿಟ್ಟಿನಲ್ಲಿ ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ …

Read More »

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನ

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾಗಿರುವ ಘಟನೆ ನಡೆದಿದೆ. ಹೌದು ಕಳ್ಳರು ಮನೆ, ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದರು ಆದರೆ. ಇದೀಗ ತಹಶೀಲ್ದಾರ್ ಕಚೇರಿ ಮೇಲೂ ತಮ್ಮ ವಕ್ರದೃಷ್ಟಿ ಬೀರಿದ್ದು. ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್‍ನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಪಾಸ್ವರ್ಡ್, ಲಾಗಿನ್ ಲಾಕ್ ಮಾಡಲಾಗಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಳ್ಳರಿಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಕೇಸ್ …

Read More »

ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು. ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು …

Read More »