ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು. …
Read More »Monthly Archives: ನವೆಂಬರ್ 2022
ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ ರೈತರಿಗೆ ನೀಡಿದ ವಾಗ್ದಾನದಂತೆ ನಡೆದುಕೊಂಡಿರುವದಾಗಿ ಅವರು ಹೇಳಿದರು. …
Read More »