ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ …
Read More »Daily Archives: ಡಿಸೆಂಬರ್ 4, 2022
ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್, ಕನ್ನಡಕ ವಿತರಣೆ
ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …
Read More »ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇಲ್ಲಾ
ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇರದೇ ಇರುವುದು ನಮ್ಮ ದುರ್ದೈವ. ಸಂಘಟಿತರಾಗದಿದ್ರೆ ನಮ್ಮ ಸಮಾಜಕ್ಕೆ ರಾಜಕೀಯ ಶಕ್ತಿ ಬರುವುದಿಲ್ಲ ಎಂದು ಹುಬ್ಬಳ್ಳಿ ಕಾಂಗ್ರೆಸ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು. ರವಿವಾರ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಛಲವಾದಿ ಸಮಾಜದ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ ಟಿಕೆಟ್ ಸಿಕ್ಕರೂ ವ್ಯವಸ್ಥಿತವಾಗಿ …
Read More »ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ : ಯತ್ನಾಳ
ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ವಿಜಯಪುರ ನಗರ ಶಾಸಕ ಯತ್ನಾಳ ವಾಗ್ದಾಳಿ ನಡೆಸಿದರು. ಬಿಜೆಪಿಗೆ ರೌಡಿ ಶೀಟರ್ ಗಳ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯೆ ನೀಡಿ ಕೊತ್ವಾಲ ರಾಮಚಂದ್ರ ಬೆಂಗಳೂರಿಗೆ ದೊಡ್ಡ ರೌಡಿ, ಅವನಿಗೆ ಸಿಗರೇಟ್ ತಂದು ಕೊಡುತ್ತಿದ್ದವರು ನಮಗೆ ಪಾಠ ಮಾಡುತ್ತಿದ್ದಾರೆ. ಬ್ಲೂ ಫೀಲಂ ನಡೆಸುವವರು ಬಿಜೆಪಿ ಬಗ್ಗೆ …
Read More »ಶಿಗ್ಗಾವಿಯಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಉದ್ಘಾಟಿಸಿದC.M. ಬೊಮ್ಮಾಯಿ
ಹಾವೇರಿ ಜಿಲ್ಲೆಯ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆಗಳಿಗೆ ಮೆಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಹಾಗೂ ಮತ್ತಿತರರು ಹಾಜರಿದ್ದರು.
Read More »ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ
ಬೆಂಗಳೂರು, ಡಿಸೆಂಬರ್ 04; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿಬೆಳಗಾವಿಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಆದು ಮಾಮೂಲಿಯಾಗಲ್ಲ, ಅನಾರೋಗ್ಯಕ್ಕೆ ತುತ್ತಾಗಿ ತುರ್ತು ನಿಗಾ ಘಟಕ (ಐಸಿಯು)ನಲ್ಲಿರುವ ಸಹೋದರಿ ಭೇಟಿ ಮಾಡಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ …
Read More »ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು
ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ. ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ …
Read More »ಸಿಸಿಬಿ ಖಡಕ್ ವಾರ್ನಿಂಗ್‌ಗೆ ಬೆಂಗಳೂರು ಬಿಡ್ತಿದ್ದಾರೆ ರೌಡಿಗಳು
ಬೆಂಗಳೂರು : ರಾಜಕೀಯ ನಾಯಕರ ಜೊತೆ ರೌಡಿ ಶೀಟರ್‌ಗಳು ವೇದಿಕೆ ಹಂಚಿಕೊಳ್ಳುವುದಕ್ಕೆ ಶುರು ಮಾಡಿದ್ರೋ ಆಗಿನಿಂದ ಇದು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿದೆ. ಸದ್ಯ ರಾಜಕೀಯದಿಂದ ಮುಜಗರಕ್ಕೆ ಇಡಾಗಿದ್ದ ಸಿಸಿಬಿ ಬೆಂಗಳೂರು ರೌಡಿಗಳ ವಿಷಯದಲ್ಲಿ ಖಡಕ್ ತೀರ್ಮಾನ ತೆಗೆದುಕೊಂಡಿದೆ. ರೌಡಿಗಳಿಗೆ ಊರು ಬಿಡುವಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿಸಿಬಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳೋದಕ್ಕಾಗಿ ರೌಡಿಗಳನ್ನ ಊರು ಬಿಡಿಸಿದ್ದಾರೆ .ಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಸಿಸಿಬಿಗೆ ದೊಡ್ಡ ಮುಜುಗರ ಊಂಟು …
Read More »ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಪುಟಾಣಿ ಸಹೋದರರು ಮೃತ್ಯು
ವಿಜಯಪುರ, ಡಿ.4: ಅಣ್ಣ-ತಮ್ಮಂದಿರಾದ ಬಾಲಕರಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ಶನಿವಾರ ನಡೆದಿದೆ. ರಮೇಶ್(9) ಮತ್ತು ಮಾಳಿಂಗರಾಯ(11) ಮೃತಪಟ್ಟ ಬಾಲಕರಾಗಿದ್ದಾರೆ. ಇವರಿಬ್ಬರು ಶನಿವಾರ ಶಾಲೆಯಿಂದ ಮನೆಗೆ ಬಂದ ಬಳಿಕ ದನಗಳನ್ನು ಮೇಯಿಸಲೆಂದು ತಮ್ಮ ಪಕ್ಕದ ಜಮೀನಿಗೆ ಹೋಗಿದ್ದರು. ಈ ವೇಳೆ ಅಲ್ಲಿರುವ ಕೃಷಿ ಹೊಂಡಕ್ಕೆ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಬಸವನಬಾಗೇವಾಡಿ ಪೊಲೀಸ್ …
Read More »ವಂಶೋದ್ಧಾರಕ್ಕಾಗಿ ಸೊಸೆಯೊಂದಿಗೆ ಸೆಕ್ಸ್ ಗೆ ಮುಂದಾದ ಮಾವ: ದೂರು ಕೊಡುವ ಬದಲು ಸುಫಾರಿ ಕೊಟ್ಟ ಬೀಗರು
ಹಾಸನ: ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ ಕೊಲೆಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಕೈಗೆ ಬುದ್ಧಿ ಕೊಟ್ಟ ಬೀಗರು ಬಂಧಿತರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಕಾವಲು ಗ್ರಾಮದ ಕೆರೆ ಬಳಿ ನವೆಂಬರ್ 13ರಂದು ದೊಡ್ಡಹಳ್ಳಿ ತಮ್ಮೇಗೌಡನ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ತಮ್ಮೇಗೌಡನ ಬೀಗರನ್ನು ಬಂಧಿಸಿದ್ದಾರೆ. ವಿಕಲಚೇತನ ಮಗನಿಗೆ ಮದುವೆ ಮಾಡಿದ್ದ ತಮ್ಮೇಗೌಡ ಅಜ್ಜನಾಗುವ ಕನಸು ಕಂಡಿದ್ದ. …
Read More »