ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡಾ ಎಂದು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳ ಮೂಲಕ ಮಹಾರಾಷ್ಟ್ರದ ಕಾರ್ಯದರ್ಶಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ಅದಾಗ್ಯೂ ಅವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರೋ ವಾತಾವರಣದಲ್ಲಿ ಬೆಳಗಾವಿಗೆ ಸಚಿವರು ಬರೋದು ಬೇಡಾ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ …
Read More »Daily Archives: ಡಿಸೆಂಬರ್ 5, 2022
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ ನಡೆಸಲಾಯಿತು ಸೋಮವಾರ ಬೀದಿಗಿಳಿದ ಕನ್ನಡ ಪರ ಹೋರಾಟಗಾರರು ಕನ‌್ನಡ ನಾಡಿನಲ್ಲಿ ಕನ್ನಡಕ್ಕೆ ಆಗುತ್ತಿರುವ ನಿರಂತರ ಅವಮಾನಕ್ಕೆ ಅಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಕರ್ನಾಟಕ ಏಕೀಕರಣ ಸಮಿತಿಯ ವತಿಯಿಂದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉರುಳು ಸೇವೆ ಸಲ್ಲಿಸಲಾಯಿತು .ಕನ್ನಡಿಗರಿಗೆ ನ್ಯಾಯ ನೀಡಲು ಅಗ್ರಹಿಸಿ ಘೋಷಣೆ ಕೂಗಲಾಯಿತು. ಕರ್ನಾಟಕ ಸರ್ಕಾರ ಕನ್ನಡಿಗರೊಂದಿಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದ …
Read More »ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು!
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಒಂದೇ ವ್ಯಕ್ತಿಯನ್ನು ಮದುವೆ ಆಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಗಿದೆ. ಈ ವಿವಾದಾತ್ಮಕ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ …
Read More »ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ 2ನೇ ಹಂತದ ಮತದಾನ
ಗುಜರಾತ್ : ಇಂದು ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly polls)ಯ 2ನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಗುಜರಾತ್‌ನ ಅಹಮದಾಬಾದ್, ಗಾಂಧಿನಗರ, ಮೆಹಸಾನಾ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅರಾವಳಿ, ಮಹಿಸಾಗರ, ಪಂಚಮಹಲ್, ದಾಹೋದ್, ವಡೋದರಾ, ಆನಂದ್, ಖೇಡಾ ಮತ್ತು ಛೋಟಾ ಉದಯ್‌ಪುರ ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ …
Read More »