ನವದೆಹಲಿ : ಬಿ.ಎಸ್ ಯಡಿಯೂರಪ್ಪಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ,ಕಾಂಗ್ರೆಸ್ ಕತ್ತಲಿನಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ ಮಾಡ್ತಿದೆ, ಅಹಮದಾವಾದ್ ನಲ್ಲಿ ಎಲ್ಲರೂ ಜೊತೆಯಾಗಿ ಇದ್ವಿ, ಕಾಂಗ್ರೆಸ್ ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ತಮ್ಮ ಬಿರುಕು ಮರೆಮಾಚಲು ಕಾಂಗ್ರೆಸ್ ಯತ್ನ ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ …
Read More »Daily Archives: ಡಿಸೆಂಬರ್ 14, 2022
ಬೆಳಗಾವಿ ಗಡಿ ವಿವಾದ, ಸದ್ಯಕ್ಕಿಲ್ಲ ಗಡಿಬಿಡಿ :ಅಮಿತ್ ಶಾ’
ನವದೆಹಲಿ : ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ನಡೆದ ಮಹಾ ಸಿಎಂ ಮತ್ತು ಕರ್ನಾಟಕ ಸಿಎಂಗಳ ನಡುವೆ ನಡೆದ ಸಭೆಯಲ್ಲಿ ಉಭಯ ನಾಯಕರುಗಳಿಂದ ಮಾಹಿತಿಯನ್ನು ಪಡೆದುಕೊಂಡು ನಂತರ ಮಾತನಾಡಿದ ಅಮಿತ್ ಶಾ ಈ ಬಗ್ಗೆ ಸುಪ್ರಿಂಕೋರ್ಟ್ ಅಂತಿಮ ಆದೇಶ ಹೊರಡಿಸಲಿದೆ. …
Read More »ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ. ಈ ಕುರಿತು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು. ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. …
Read More »PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ ವರ್ಷದ ಮಾರ್ಚ್ ವರೆಗೆ ಒಟ್ಟು 13,000 ಕೋಟಿ ರೂಪಾಯಿಗಳ ದೇಣಿಗೆ ಹರಿದು ಬಂದಿದೆ ಎಂದು ತಿಳಿದುಬಂದಿದೆ. ಈ ಪೈಕಿ 7,700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಇನ್ನು 5400 ಕೋಟಿ ರೂಪಾಯಿ ಉಳಿದಿದೆ. ಈ ನಿಧಿಯಿಂದ ವೈದ್ಯಕೀಯ ಆಮ್ಲಜನಕ …
Read More »ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಿದ ಮುಸ್ಲಿಂ ಯುವಕರು
ಅಲ್ಲಿ ಜಾತಿ, ಧರ್ಮದ ಬೇಧವಿರಲಿಲ್ಲ. ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನ ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ …
Read More »ಬೆಳಗಾವಿ ಅಧಿವೇಶನದಲ್ಲಿ ಪೂರ್ಣ ಹಾಜರಾತಿ ಕಡ್ಡಾಯ: ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ: ‘ಇದೇ 19ರಿಂದ 30ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಅತ್ಯಂತ ಮಹತ್ವ ಪಡೆದಿದೆ. ಇದರಲ್ಲಿ ಪೂರ್ಣ ಹಾಜರಾತಿ ಇರಬೇಕೆಂದು ಎಲ್ಲ ಶಾಸಕರಿಗೂ ಸೂಚಿಸಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನದ ಪೂರ್ವಸಿದ್ಧತೆಗಳನ್ನು ಸೋಮವಾರ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕೆಲ ಸಚಿವರು, ಶಾಸಕರು ಅಧಿವೇಶನದ ವೇಳೆ ಗೋವಾ, ಮಹಾರಾಷ್ಟ್ರ ಕಡೆಗೆ ಪ್ರವಾಸಕ್ಕೆ ಹೋಗುತ್ತಾರೆ. ಗಂಭೀರ ವಿಷಯಗಳ ಚರ್ಚೆಯಲ್ಲಿ ಗೈರಾಗುತ್ತಾರೆ ಎಂದು ಹಲವರು ದೂರಿದ್ದಾರೆ. …
Read More »ಕರ್ನಾಟಕದ ಚುನಾವಣೆ ಎಚ್ಚರಿಕೆಯ ಹೆಜ್ಜೆ: ಸಿ.ಟಿ.ರವಿ
ಬೆಂಗಳೂರು: ಗುಜರಾತ್ ಗೆಲುವು ಮತ್ತು ಹಿಮಾಚಲ ಪ್ರದೇಶದ ಸೋಲಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ. ಇಲ್ಲವಾದರೆ, ಹಿಮಾಚಲಪ್ರದೇಶದ ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೈಮರೆಯದೇ ಕೆಲಸ ಮಾಡಿದರೆ ಗುಜರಾತ್‌ನಂತೆ ಫಲಿತಾಂಶ ಸಿಗುತ್ತದೆ. ಮೈಮರೆತರೆ ಹಿಮಾಚಲ ಪ್ರದೇಶದಂತೆ ಆಗುತ್ತದೆ. ಗುಜರಾತ್ ಗೆಲುವಿನ ಪ್ರೇರಣೆ ಪಡೆದು ನಾವು ಮುನ್ನಡೆಯಬೇಕಾಗುತ್ತದೆ’ ಎಂದರು. ಈ ಬಾರಿ ಟಿಕೆಟ್ ಹಂಚಿಕೆಯಲ್ಲಿ ಉತ್ತಮ …
Read More »ಧಾರವಾಡ ರಂಗಾಯಣದಿಂದ ಕಿತ್ತೂರು ಚನ್ನಮ್ಮ ನಾಟಕ: ವೇದಿಕೆ ಮೇಲೆ ಆನೆ, ಒಂಟೆ, ಕುದುರೆ
ಧಾರವಾಡ: ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮ ಅವರ ಜೀವನ ಆಧಾರಿತ ನಾಟಕವನ್ನು ಧಾರವಾಡ ರಂಗಾಯಣ ಸಿದ್ಧಪಡಿಸಿದ್ದು, ಡಿ.24ರಿಂದ ಪ್ರದರ್ಶನಗೊಳ್ಳುತ್ತಿದೆ. ಸುಮಾರು ಮೂರೂವರೆ ತಾಸು ಸುದೀರ್ಘ ನಾಟಕದಲ್ಲಿ ಸುಮಾರು 150 ಕಲಾವಿದರು ನಟಿಸುತ್ತಿರುವುದು ಹಾಗೂ ಆನೆ, ಒಂಟೆ, ಕುದುರೆ, ಹಸುಗಳ ಬಳಕೆ ಮೂಲಕ ಬೃಹತ್ ರಂಗ ಸಜ್ಜಿಕೆಯ ನಾಟಕ ಈಗಾಗಲೇ ಸಾಕಷ್ಟು ಚರ್ಚೆಯಲ್ಲಿದೆ. ರಂಗ ತಾಲೀಮು ಭರದಿಂದ ನಡೆಯುತ್ತಿದ್ದು 250ಕ್ಕೂ ಹೆಚ್ಚು ಜನ ಇದರಲ್ಲಿ ಭಾಗಿಯಾಗಿದ್ದಾರೆ. …
Read More »ಕಬ್ಬು ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ: ಕಲಕೇರಿ
ಬೆಳಗಾವಿ: ಜಿಲ್ಲೆಯ ಎಂಟು ಸಕ್ಕರೆ ಕಾರ್ಖಾನೆಗಳ ಮೇಲೆ ಬುಧವಾರ ದಾಳಿ ನಡೆಸಲಾಗಿದ್ದು, ಯಾವುದೇ ಕಾರ್ಖಾನೆಯಲ್ಲಿ ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತ ಶಿವಾನಂದ ಕಲಕೇರಿ ತಿಳಿಸಿದ್ದಾರೆ. ‘ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ರೈತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ದಾಳಿ ಮಾಡಲಾಗಿದೆ. ಬೀದರ್‌ನಿಂದ ಕಾರವಾರವರೆಗೆ ಒಟ್ಟು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಕಾರ್ಖಾನೆಗಳಲ್ಲಿ ಯಾವುದೇ …
Read More »ಬೆಳಗಾವಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 21ರಿಂದ
ಬೆಳಗಾವಿ: ‘ಚಿಕ್ಕೋಡಿಯ ಸಿಎಲ್‌ಇ ಸಂಸ್ಥೆಯಲ್ಲಿ ಡಿ.21, 22ರಂದು ಜಿಲ್ಲಾಮಟ್ಟದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’21ರಂದು ಬೆಳಿಗ್ಗೆ 11ಕ್ಕೆ ಕ.ಸಾ.ಪ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಕನ್ನಡ ಚಿಂತನೆ …
Read More »