ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ದಂಡಿ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್‌ಪಿ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
Read More »Daily Archives: ಡಿಸೆಂಬರ್ 18, 2022
ನಗರದಲ್ಲಿ ಹೆಚ್ಚಾಯ್ತು ರೌಡಿಗಳ ಅಟ್ಟಹಾಸ; ಹಫ್ತಾ ನೀಡಿಲ್ಲವೆಂದು ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿದ ಪುಡಿ ರೌಡಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೌಡಿಗಳ ಹಾವಳಿ ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ಪುಡಿ ರೌಡಿಗಳು ವರ್ತಿಸುತ್ತಿದ್ದಾರೆ. ಸಣ್ಣ ಪುಟ್ಟ ಅಂಗಡಿಗಳಿಗೆ ನುಗ್ಗಿ, ಅಲ್ಲಿದ್ದ ವ್ಯಾಪಾರಸ್ಥರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗೆ ಸಿಗರೇಟ್ ಹಣ ಕೇಳಿದಕ್ಕೆ ಬೈಂದೂರಿನ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ …
Read More »ಸಾರ್ವಜನಿಕರಿಂದ ಕಿರುಕುಳ ಆರೋಪ: ಸಿರವಾರ ಪಿಎಸ್ಐ ಗೀತಾಂಜಲಿ ಶಿಂಧೆ ಅಮಾನತು
ರಾಯಚೂರು: ಇತ್ತೀಚೆಗಷ್ಟೇ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಭಾರಿ ಸದ್ದು ಮಾಡಿದ್ದ ಸಿರವಾರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನು ಇದೀಗ ಅಮಾನತು ಮಾಡಲಾಗಿದೆ. ಸಾರ್ವಜನಿಕರಿಂದ ದೂರುಗಳ ಸುರಿಮಳೆ ಬಂದ ಹಿನ್ನೆಲೆಯಲ್ಲಿ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಗೀತಾಂಜಿಲಿ ಶಿಂಧೆ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸುಖಾಸುಮ್ಮನೆ ಕಿರುಕುಳ ನೀಡುತ್ತಾರೆ ಎಂದು ಸಾಕಷ್ಟು ಜನರು ಗೀತಾಂಜಲಿ ಶಿಂಧೆ ವಿರುದ್ಧ ಆರೋಪ ಮಾಡಿದ್ದರು. ಡೆತ್ನೋಟ್ …
Read More »ಬಹುಕೋಟಿ ರೂ. ವಕ್ಫ್ ಆಸ್ತಿ ಅಕ್ರಮ; ವರದಿ ಮಂಡನೆಗೆ ಸೂಚನೆ ನೀಡಿದ ವಿಧಾನ ಪರಿಷತ್ ಸಭಾಪತಿ..!
ಬೆಳಗಾವಿ: ರಾಜ್ಯದಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಹಾಗೂ ಒತ್ತುವರಿ ಅಕ್ರಮದ ಬಗ್ಗೆ ವರದಿಯನ್ನು ಸದನದಲ್ಲಿ ಮಂಡಿಸಲು ಸರ್ಕಾರಕ್ಕೆ ಸೂಚಿಸಿರುವೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ತಿಳಿಸಿದರು. ಚಳಿಗಾಲದ ಅಧಿವೇಶನದ ಸಿದ್ಧತೆ ಕುರಿತು ಮಾಹಿತಿ ನೀಡಲೆಂದು ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು ಕಳೆದ ಅಧಿವೇಶನದಲ್ಲಿ ಸದಸ್ಯರೊಬ್ಬರು ಈ ವರದಿ ಬಗ್ಗೆ ಪ್ರಸ್ತಾಪಿಸಿದ್ದು ಸರಿಯಲ್ಲ. ಸಂಬಂಧಿಸಿದ ಸದಸ್ಯರ ಗಮನಕ್ಕೆ ತರಲಾಗಿದೆ ಎಂದರು. ಅಲ್ಪಸಂಖ್ಯಾತರ …
Read More »ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ;
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ …
Read More »ಕಾಂಗ್ರೆಸ್-ಬಿಜೆಪಿ ಥರ ಇರೋ ಒಬ್ಬ ಹುಡುಗಿಗೆ 10 ಜನ ಹುಡುಗರನ್ನ ತಯಾರು ಮಾಡಲ್ಲ ಎಂದ ಸಿಎಂ ಇಬ್ರಾಹಿಂ..!
ಬಾಗಲಕೋಟೆ: ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು ರಾಜಕೀಯ ನಾಯಕರು ವಾಗ್ಯುದ್ಧದಲ್ಲಿ ತೊಡಗಿದ್ದಾರೆ. ಅದಲ್ಲದೇ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದ್ದು ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರವಾಗಿ ಮಾತನಾಡಿದ ಅವರು ‘ನಮ್ಮಲ್ಲಿ ಕ್ಯಾಂಡಿಟೇಟ್ ಇಲ್ಲ. ನಮ್ಮಲ್ಲಿ ಒಬ್ಬರೇ ಅಭ್ಯರ್ಥಿ. ಕುಮಾರಸ್ವಾಮಿ ಕಿ …
Read More »ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಆಹ್ವಾನ ಸಿಕ್ಕಿಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ..!
ಬೆಳಗಾವಿ: ‘ರಾಜ್ಯ ಬಿಜೆಪಿ ಸರ್ಕಾರ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನನಗೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ರಾಜ್ಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಸೇರಿದಂತೆ ಇನ್ನಿತರ ವ್ಯಕ್ತಿಗಳ ಭಾವಚಿತ್ರ ಅನಾವರಣಕ್ಕೆ ಎಲ್ಲರನ್ನೂ ಆಹ್ವಾನಿಸಲಾಗಿದೆ ಎಂದು ಸ್ಪೀಕರ್ ಹೇಳುತ್ತಿದ್ದಾರೆ. ನನಗಂತೂ …
Read More »ಪರೇಶ್ ಮೆಸ್ತಾ ಸಾವಿನ ಮರು ತನಿಖೆ ಆಗದಿದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದ ಮುತಾಲಿಕ್
ಉತ್ತರಕನ್ನಡ: ಪರೇಶ್ ಮೆಸ್ತಾ ಹತ್ಯೆ ಪ್ರಕರಣ ಇನ್ನೂ ಜೀವಂತವಾಗಿದ್ದು ಯುವಕನ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದು ಹಿಂದು ಸಂಘಟನೆಗಳು ಇನ್ನೂ ಹೋರಾಟದಲ್ಲಿ ನಿರತವಾಗಿವೆ. ಇದೀಗ ಸಿಬಿಐ ಮರುತನಿಖೆ ಆಗದಿದ್ದರೆ ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಉಗ್ರ ಧರಣಿ ಮಾಡಲಾಗುತ್ತದೆ ಎಂದು ಹೊನ್ನಾವರದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ‘ಪ್ರಕರಣದಲ್ಲಿ ಅಂದಿನ ಜಿಲ್ಲಾಧಿಕಾರಿ ಹಾಗೂ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರನ್ನು ಸಹ ಮರು ತನಿಖೆ ಮಾಡಬೇಕು. ಬಿಜೆಪಿಯವರು …
Read More »ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಮೇಲೆ ಲೋಕಾಯುಕ್ತ ದಾಳಿ..!
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬೆಂಗಳೂರಿನ ಕೇಂದ್ರ ಸೇರಿ ಜಿಲ್ಲಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ರೂ.ನಗದನ್ನು ವಶಪಡಿಸಿಕೊಂಡಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ರಾಣಿಬೆನ್ನೂರು ಕಚೇರಿಯಲ್ಲಿ ೮.೯೦ ಲಕ್ಷ ರೂ. ನಷ್ಟು ದಾಖಲೆಗಳಿಲ್ಲದ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನಿಗಮದ ವ್ಯವಸ್ಥಾಪಕ ನಿದೇರ್ಶಕರ ನಿವಾಸ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಮತ್ತು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮನೆಗಳ ಮೇಲೆ ದಾಳಿ …
Read More »ಮಹಾರಾಷ್ಟ್ರ ಸಂಸದರಿಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ; ಡಿಸಿ ಆದೇಶ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವ್ ಆಯೋಜಿಸಿದ್ದು, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆಗೆ ಆಹ್ವಾನ ನೀಡಿತ್ತು. ಆದರೆ ಮಹಾ ಸಂಸದರಿಗೆ ಬೆಳಗಾವಿ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗಾವಿಯ ವ್ಯಾಕ್ಸಿನ್ ಡಿಪೋದಲ್ಲಿ ನಡೆಯಲಿದ್ದ ಎಂಇಎಸ್ ಮಹಾಮೇಳಾವ್ ಸಮಾವೇಶದಲ್ಲಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಭಾಗಿಯಾಗಿ ಭಾಷಣ ಮಾಡುವವರಿದ್ದರು. ಈ ನಿಟ್ಟಿನಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ …
Read More »