Breaking News

Daily Archives: ಡಿಸೆಂಬರ್ 21, 2022

ಮಜೂರು ಗ್ರಾಪಂ ವ್ಯಾಪ್ತಿಯ ಐಎಸ್‌ಆರ್‌ಎಲ್‌ನಿಂದ ತೆರಿಗೆ ವಸೂಲಿಗೆ ಕ್ರಮ

ಸುವರ್ಣ ವಿಧಾನಸೌಧ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಐಎಸ್‌ಆರ್‌ಎಲ್‌ ಸಂಸ್ಥೆಯಿಂದ ಗ್ರಾಪಂಗೆ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಂಸ್ಥೆಯವರೊಂದಿಗೆ ಚರ್ಚಿಸಿ ತೆರಿಗೆ ಮೊತ್ತ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮುರುಗೇಶ ನಿರಾಣಿ ಹೇಳಿದರು.   ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್‌ ವಿಷಯ ಪ್ರಸ್ತಾಪಿಸಿ, ಐಎಸ್‌ಪಿಆರ್‌ಎಲ್‌ ಸಂಸ್ಥೆ ಪಾದೂರು ಗ್ರಾಮದಲ್ಲಿ ಮೊದಲ ಹಂತದಲ್ಲಿ 180 ಎಕರೆಯಲ್ಲಿ ಕೈಗಾರಿಕೆ …

Read More »

ಚರ್ಮಗಂಟು ರೋಗದ ಹಾವಳಿ 21 ಸಾವಿರ ಹಸು ಬಲಿ

ಬೆಂಗಳೂರು: ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ ಸುಮಾರು 21,305 ಜಾನುವಾರುಗಳು ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದ ಸುಮಾರು 230 ತಾಲೂಕುಗಳ 15,977 ಗ್ರಾಮಗಳಲ್ಲಿ ಈವರೆಗೆ 2,37,194 ರಾಸುಗಳಿಗೆ ಚರ್ಮಗಂಟು ರೋಗ ಬಾಧಿಸಿದ್ದು, ಈ ಪೈಕಿ 1.64 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸಿಬಂದಿ ಇಲ್ಲದೆ ಲಸಿಕೆ ತಲುಪುತ್ತಿಲ್ಲ ಎಂಬ ಸಂಗತಿ “ಉದಯವಾಣಿ’ ನಡೆಸಿದ ಜಿಲ್ಲಾವಾರು ಮಾಹಿತಿ ಸಂಗ್ರಹದಿಂದ ಬೆಳಕಿಗೆ ಬಂದಿದೆ. …

Read More »

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ; ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.   ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವೇಳೆ …

Read More »