ಬೆಳಗಾವಿ: ರಾಜ್ಯದಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಖಾಸಗಿ ನಿರ್ಣಯವನ್ನು ವಿಧಾನಪರಿಷತ್‍ನಲ್ಲಿ ಅಂಗೀರಿಸಲಾಯಿತು.ಕಾಂಗ್ರೆಸ್‍ನ ಯು.ಬಿ. ವೆಂಕಟೇಶ್ ಮಂಡಿಸಿದ ಖಾಸಗಿ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
Read More »Daily Archives: ಡಿಸೆಂಬರ್ 24, 2022
ಹುಬ್ಬಳ್ಳಿ ನಗರಕ್ಕೆ ಬರುವ ಪ್ರಯಾಣಿಕರು NWKRTCಯಿಂದ ಹೈರಾಣ
ಹುಬ್ಬಳ್ಳಿ: ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಿಂದ ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಹುಬ್ಬಳ್ಳಿ ನಗರಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ನಿತ್ಯ ಸಾವಿರಾರು ಮಂದಿ ವಾಯವ್ಯ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ ನಗರಕ್ಕೆ ಬಂದು, ಎಲ್ಲಿ ಇಳಿಯಬೇಕು ಎಂದು ಗೊತ್ತಾಗದೆ ಪರದಾಡುವುದು ಸಾಮಾನ್ಯವಾಗಿದೆ. ನಗರದಲ್ಲಿ ನಿಗದಿತ ಸ್ಥಳಗಳಲ್ಲಿ ತಾತ್ಕಾಲಿಕ ಬಸ್ ನಿಲುಗಡೆ ವ್ಯವಸ್ಥೆ ಇಲ್ಲ. ಒಂದೇ ನಿಲ್ದಾಣಕ್ಕೆ ಮೂರು, ನಾಲ್ಕು …
Read More »ಕೋವಿಡ್ ಆತಂಕ | ಹೊಸ ವರ್ಷಕ್ಕೆ ನೂತನ ಮಾರ್ಗಸೂಚಿ ಪ್ರಕಟ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ‘ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಭಾನುವಾರ ಕಂದಾಯ ಸಚಿವ ಆರ್. ಅಶೋಕ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಿ, ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ’ ಎಂದರು. ‘ಬೂಸ್ಟರ್ ಡೋಸ್ ಹೆಚ್ಚಿಗೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಿಬಿರ ಏರ್ಪಡಿಸಬೇಕು. …
Read More »ಕೊಲ್ಹಾಪುರದಲ್ಲಿ ಪ್ರತಿಭಟನೆ 26ರಂದು: ಕಿಣೇಕರ್
ಬೆಳಗಾವಿ: ‘ಮರಾಠಿಗರ ಮೇಲೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯ ಖಂಡಿಸಿ ಡಿ.26ರಂದು ಮಹಾರಾಷ್ಟ್ರದ ಕೊಲ್ಹಾಪುರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ್ ಹೇಳಿದರು. ಇಲ್ಲಿನ ಮರಾಠಾ ಮಂದಿರದಲ್ಲಿ ಬುಧವಾರ ನಡೆದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಡಿ.19ರಂದು ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಲು ಮುಂದಾಗಿದ್ದೆವು. ಆದರೆ, ಜಿಲ್ಲಾಡಳಿತ ಅನುಮತಿ ಕೊಡದೆ ಮರಾಠಿಗರಿಗೆ ಅನ್ಯಾಯ …
Read More »ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ
ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. 2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು. ಸಂಬಂಧಪಟ್ಟ ಸೇವಾ …
Read More »ಕೋವಿಡ್ ಕರಿಛಾಯೆ: ವಿಧಾನ ಮಂಡಲದ ಅಧಿವೇಶನ ಮೊಟಕು?
ಬೆಳಗಾವಿ, ಡಿ.24: ವಿಶ್ವದ ಅನೇಕ ದೇಶಗಳಲ್ಲಿ ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆಯಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಂಸತ್‌ನ ಅಧಿವೇಶನವು ಒಂದು ವಾರ ಮುಂಚಿತವಾಗಿ ಮುಂದೂಡಲ್ಪಟ್ಟಿರುವುದರಿಂದ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನವನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ …
Read More »ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ. ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು. ನಿನ್ನೆ ಸಂದರ್ಶನದಲ್ಲಿ …
Read More »ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ
ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಗಳಾಗಿದ್ದ ಎಂಜಿ ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ತವರು ಜಿಲ್ಲೆಗೆ ಪ್ರಾದೇಶಿಕ ಆಯುಕ್ತರನ್ನಾಗಿ ನಿಯುಕ್ತಿಯಾಗಿದ್ದಾರೆ. ಮೂಲತಃ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ.ಜಿ. ಹಿರೇಮಠ ಅವರು ಸುಮಾರು ಎರಡು ವರ್ಷಗಳ ಕಾಲ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Read More »ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ನಿರಾಣಿ.
ಬಾಗಲಕೋಟೆ: ”ಬಸನಗೌಡ ಪಾಟೀಲ್ ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ತಮ್ಮನ್ನು ಮತ್ತು ಯಡಿಯೂರಪ್ಪ ಅವರನ್ನು ಒಂದು ಮಾಡಿ ಅಂತ ಕಾಲಿಗೆ ಬಿದ್ದು ಬಂದಿಲ್ವಾ…?” ಬಾಗಲಕೋಟೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರಶ್ನಿಸಿದವರು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ. ”ನಿರಾಣಿಯವರು ಬಿಜೆಪಿ ಟಿಕೆಟ್ಗಾಗಿ ನನ್ನ ಮನೆ ಕಾಯ್ತಿದ್ದರು” ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆಗೆ ನಿರಾಣಿ ಈ ರೀತಿ ತಿರುಗೇಟು …
Read More »ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಕರೆಕೊಟ್ಟಿದ್ದು, ಹೊಸ ಸಂಕಲ್ಪ: ಸಾಹುಕಾರ್’ ರಮೇಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸ್ಥಾನ ನೀಡದ ಕಾರಣ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ವಿರುದ್ಧ ಮುನಿಸಿಕೊಂಡು ಸದನಕ್ಕೆ ಗೈರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಅವರು, ಮುಖ್ಯಮಂತ್ರಿಗಳ (Chief Minister) ಜೊತೆಗಿನ ಮಾತುಕತೆಯ ಬಳಿಕ ಮುನಿಸು ದೂರ ಮಾಡಿ ಸಕ್ರಿಯರಾಗಿದ್ದಾರೆ. ಸಿಎಂ ವಿಶ್ವಾಸ ನೀಡಿದ ಬಳಿಕ ಸದನಕ್ಕೂ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಅವರು ಸದ್ಯ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Constituency) ಪಕ್ಷ …
Read More »