Breaking News

Daily Archives: ಡಿಸೆಂಬರ್ 25, 2022

ಬೆಳಗಾವಿ: ಸರ್ಕಾರಿ ನೌಕರರ ನಿಯೋಜನೆ ನಿಯಮಗಳು ಇನ್ನಷ್ಟು ಕಠಿಣ- ಸಿಎಂ ಬೊಮ್ಮಾಯಿ

ಬೆಳಗಾವಿ, : ಸರ್ಕಾರಿ ಅಧಿಕಾರಿಗಳು ಮತ್ತು ನೌಕರರನ್ನು ಅನ್ಯ ಇಲಾಖೆಗಳಿಗೆ ನಿಯೋಜಿಸುವ ಸರ್ಕಾರದ ಕ್ರಮವನ್ನು ಅಧಿಕಾರಿ ಹಾಗೂ ನೌಕರರು ಪ್ರಭಾವ ಬಳಸಿ ಅನಗತ್ಯವಾಗಿ ಇತರೆ ಇಲಾಖೆಗಳಿಗೆ ನಿಯೋಜನೆಗೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ನಿಯೋಜನೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಸಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ವಿಧಾನ ಪರಿಷತ್‍ನಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದರು. ಸರ್ಕಾರಿ ನೌಕರರು ನಿಯೋಜನೆ ಮೇರೆಗೆ ಅನ್ಯ ಇಲಾಖೆ ತೆರಳವುದರಿಂದ ಅನೇಕ ತೊಂದರೆಗಳು …

Read More »

ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಜಗದೀಶ್ ಶೆಟ್ಟರ್ ಹೇಳಿದ್ದೇನು?

ಧಾರರವಾಡ: ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೋ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲೇ ನಾವು ಚರ್ಚೆ ಮಾಡುತ್ತೇವೆ ಎಂದರು. ನಮ್ಮ …

Read More »

ಹುಬ್ಬಳ್ಳಿ ಜಯದೇವ ಆಸ್ಪತ್ರೆ’: ಜ.12ಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ ಸಾಧ್ಯತೆ

ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜ.12ಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಯಿದೆ.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನಸಿನ ಕೂಸಾಗಿರುವ ಹುಬ್ಬಳ್ಳಿ ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು 2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ. ಘೋಷಿಸಲಾಗಿತ್ತು. ಈ ಹಿಂದೆಯೇ ಹಲವು ಬಾರಿ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆಗೆ …

Read More »

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಮಾಡುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ

ಬೆಂಗಳೂರು: ಕೆಲ ದಿನಗಳಿಂದ ರಾಜಕೀಯ ಮರು ಪ್ರವೇಶದ ಬಗ್ಗೆ ಕುತೂಹಲಕ್ಕೆ ಕಾರಣವಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿಕೊಂಡಿದ್ದಾರೆ. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂದು ಹೊಸ ಪಕ್ಷ ಸ್ಥಾಪಿಸಿ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸುವುದಾಗಿ ಇಂದು ಹೇಳಿದ್ದಾರೆ.   ಬಸವಣ್ಣನವರು ಹೇಳಿದ ಹಾಗೆ ಯಾವುದೇ ಜಾತಿ ಮತ ಭೇದ ಇಲ್ಲದ ಹಾಗೆ, ಮೇಲು ಕೀಳು ಇಲ್ಲದ ಹಾಗೆ ಏನೆಲ್ಲಾ ಅಭಿವೃದ್ಧಿ …

Read More »

ಕನ್ನಡ ಭವನ ರಂಗಮಂದಿರ ಸಿದ್ಧ

ಬೆಳಗಾವಿ: ಗಡಿ ಜಿಲ್ಲೆಯ ಕಲಾವಿದರು, ಸಾಹಿತಿಗಳು, ಪ್ರೇಕ್ಷಕರು ಎರಡು ದಶಕಗಳಿಂದ ಕಾಣುತ್ತಿದ್ದ ಕನಸು ಕೊನೆಗೂ ಕೈಗೂಡಿದೆ. ಸಾರಸ್ವತ ಲೋಕದ ಕೇಂದ್ರವಾಗಿ ಕನ್ನಡ ಭವನ ರಂಗಮಂದಿರ ತಲೆಎತ್ತಿದೆ. ಡಿ.27ರಿಂದ ಸಾಂಸ್ಕೃತಿಕ ವೇದಿಕೆಯಾಗಿ ತೆರೆದುಕೊಳ್ಳಲಿದೆ.   ಕುಂದಾನಗರಿಯ ನೆಹರೂ ನಗರದಲ್ಲಿ ಈ ಭವನ ನಿರ್ಮಿಸಲಾಗಿದೆ. ಶ್ರೀಕೃಷ್ಣದೇವರಾಯ ವೃತ್ತದಿಂದ ತುಸು ಮುಂದಕ್ಕೆ ಹೋಗಿ, ಬಲಕ್ಕೆ ತಿರುಗಿದರೆ ರಾಮದೇವ ಹೋಟೆಲ್‌ ಹಿಂಭಾಗದಲ್ಲಿ ಭವನವಿದೆ. ಹೊರಗಡೆಯಿಂದ ಕಣ್ಹಾಯಿಸಿದರೆ ಹೈಟೆಕ್‌ ಕಟ್ಟಡದಂತೆ ಕಾಣುವ ಈ ಭವನ ಎಲ್ಲ ಆಧುನಿಕ ಸೌಕರ್ಯಗಳನ್ನೂ …

Read More »

ಅಥಣಿ ಪುರಸಭೆ ಸದಸ್ಯರಿಂದ ಪ್ರತಿಭಟಣೆ

ಅಥಣಿ ಪುರಸಭೆ ಚುನಾವಣೆ ಮುಗಿದು ಇಂದಿಗೆ ವರ್ಷವಾಯ್ತು, ಇದುವರೆಗೂ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ ಇದರಿಂದ ಪಟ್ಟಣದ ಅಭಿವೃದ್ದಿಗೆ ಹಿನ್ನಡೆಯಾಗುತ್ತಿದೆ. ಸರಕಾರ ಜನತಾ ಜನಾರ್ಧನರಿಗೆ ಮೋಸಮಾಡುತ್ತಿದೆ ಎಂದು ಆರೋಪಿಸಿ ಪುರಸಭೆ ಸದಸ್ಯರು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಣೆ ಮಾಡಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಬೆಳಿಗ್ಗೆ ಪ್ರತಿಭಟಣೆ ಮಾಡುತ್ತಾ ಮಾತನಾಡಿದ ಸದಸ್ಯ ರಾವಸಾಬ ಐಹೊಳೆ ಒಂದು ವರ್ಷವಾಯ್ತು ನಾವು ಆಯ್ಕೆಗೊಂಡು ಇದುವರೆಗೂ ಅಧಿಕಾರ ಸಿಕ್ಕಿಲ್ಲ, ಇದರಿಂದ ವಾರ್ಡಗಳಲ್ಲಿ ಯಾವುದೇ ಅಭಿವೃದ್ದಿ ಕಾರ್ಯವಾಗಿಲ್ಲ, …

Read More »

ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ‌: ಯತ್ನಾಳ

ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ‌ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿ 29 ರಂದು ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ‌. ಮೀಸಲಾತಿ ಘೋಷಣೆ ಆಗುವ ಭರವಸೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 2ಎ ಸಮಾನವಾದ ಮೀಸಲಾತಿ ಸಿಗುತ್ತದೆ. ತಾಯಿ ಆಣೆ ಮಾಡಿ …

Read More »

ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್‌

ಬೆಳಗಾವಿ: ಸಮಾಜ ಕಲ್ಯಾಣ, ಹಿಂದುಳಿದ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.   ಕರಾಟೆ ಪ್ರದರ್ಶನ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್‌ಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಎಲ್ಲಾ …

Read More »

ಡಿ.31 ರಿಂದ ಜ.3ರವರೆಗೆ ಗಡಿ ಭಾಗದ ಯಕ್ಸಂಬಾ ಪಟ್ಟಣದಲ್ಲಿ ಪ್ರೇರಣಾ ಉತ್ಸವ

ಚಿಕ್ಕೋಡಿ: ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ ನಡೆಯುವ 11ನೇ ವರ್ಷದ ಪ್ರೇರಣಾ ಉತ್ಸವ ಡಿ.31 ರಿಂದ ಜ.3 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ತಿಳಿಸಿದರು.   ಶನಿವಾರ ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರುಪ್ ಸಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜೊಲ್ಲೆ ಗ್ರುಪ್ ಪ್ರೇರಣಾ ಶಕ್ತಿ ಜ್ಯೋತಿಪ್ರಸಾದ ಜೊಲ್ಲೆ ಜನ್ಮದಿನದ ಅಂಗವಾಗಿ ಪ್ರತಿ …

Read More »