Breaking News

Yearly Archives: 2022

ಬಿಎಸ್ ವೈಗೆ ಮಸಿ ಬಳಿಯಲು ಬಿಜೆಪಿಯೇ ಯತ್ನಾಳರನ್ನು ಮುಂದೆ ಬಿಟ್ಟಿದೆಯೇ?: ಕಾಂಗ್ರೆಸ್

ಬೆಂಗಳೂರು :“ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ” ಎಂದಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಯತ್ನಾಳ್‌ರ ಜತೆ ರಹಸ್ಯ ಮಾತುಕತೆ ಮಾಡಿದ್ದಾರೆ.ಇಂತಹ ಸದಾರಮೆ ನಾಟಕ ಬಿಜೆಪಿಗೆ ಮಾತ್ರ ಸಾಧ್ಯವೇನೋ! ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಗಳನ್ನು ಮಾಡಿದೆ.   ಬಿ.ಯಸ್. ಯಡಿಯೂರಪ್ಪ ಅವರಿಗೆ ಮಸಿ ಬಳಿಯಲು ಬಿಜೆಪಿಯೇ ಯತ್ನಾಳರನ್ನು ಮುಂದೆ ಬಿಟ್ಟಿದೆಯೇ? ಇದು ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುವ ಆಟವೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ. ಯತ್ನಾಳರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ, …

Read More »

ಮುಧೋಳ: ಸಿಮೆಂಟ್‌, ಕಬ್ಬಿಣ ಬಳಸದೇ ನಿರ್ಮಾಣವಾಗಿದೆ ಈ ದೇವಾಲಯ

ಬಾಗಲಕೋಟೆ, ನವೆಂಬರ್ 9: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುದ್ದಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಜೆ.ಕೆ. ಸಿಮೆಂಟ್ ಕಂಪನಿ ಆವರಣದಲ್ಲಿ ಪುರಾತನ ವಾಸ್ತುಶಿಲ್ಪ ಕಲೆಯ ಅನುಸಾರ ಯದುರೇಶ್ವರ ಶಿವ ಮಂದಿರವನ್ನು ಕಟ್ಟಲಾಗಿದೆ. ವಿಶೇಷವೆಂದರೆ ಈ ದೇವಾಲಯದ ನಿರ್ಮಾಣಕ್ಕೆ ಸಿಮೆಂಟ್‌, ಕಬ್ಬಿಣವನ್ನು ಬಳಸದೇ ಕಟ್ಟಲಾಗಿದ್ದು, ಪ್ರವಾಸಿ ಕೇಂದ್ರವಾಗಿ ಗಮನ ಸೆಳೆಯುತ್ತಿದೆ.   ಈ ಅತ್ಯಾಕರ್ಷಕ ಯದುರೇಶ್ವರ ಶಿವನ ದೇವಾಲಯ ಲೋಕಾರ್ಪಣೆಗೊಂಡು ಮೂರು ವರ್ಷಗಳಾಗಿವೆ. ಶಿವಭಕ್ತಾದಿಗಳಾದಿಯಾಗಿ ಮಕ್ಕಳು , ಕುಟುಂಬದವರು ಹೋಗಿ ಯದುರೇಶ್ವರ ಮಹದೇವ …

Read More »

ರಾಯಚೂರು: ಡಾಬಾಗೆ ಅನಧಿಕೃತ ವಿದ್ಯುತ್ ಕೊಡುತ್ತಿದ್ದ ಜೆಸ್ಕಾಂ ಎಂಜಿನಿಯರ್ ಅಮಾನತು

ಸಿರವಾರ (ರಾಯಚೂರು ಜಿಲ್ಲೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)‌ ವ್ಯಾಪ್ತಿಯ ಸಿರವಾರ ತಾಲ್ಲೂಕಿನ ಮಲ್ಲಟ ಉಪವಿಭಾಗದ ಶಾಖಾಧಿಕಾರಿ, ಕಿರಿಯ ಎಂಜಿನಿಯರ್ ಹಣಮಂತ್ರಾಯ ಡಿ. ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.   ಮಲ್ಲಟ ಗ್ರಾಮದ ಶಾಂಭವಿ ದಮ್ ಬಿರಿಯಾನಿ ದಾಬಾಗೆ ಲಿಂಗಸುಗೂರು ರಸ್ತೆಯ ಸ್ಥಾವರದಿಂದ ಅನಧಿಕೃತವಾಗಿ 25 ಕೆವಿಎ ವಿದ್ಯುತ್ ಪರಿವರ್ತಕ ಮತ್ತು ವಿದ್ಯುತ್ ಮಾಪಕ ಅಳವಡಿಸಿ ಕಂಪನಿಗೆ ₹1.46 ಲಕ್ಷ ಆರ್ಥಿಕ ನಷ್ಟವನ್ನುಂಟು ಮಾಡಿದ್ದಾರೆ ಎಂದು …

Read More »

ಹಿರಿಯರ ಸೂಚನೆಯಂತೆ ಪಕ್ಷದ ಒಳಗೆ ಯಾರನ್ನೂ ಬೈಯ್ಯುವುದಿಲ್ಲ; ಶಾಸಕ ಬಸನಗೌಡ ಪಾಟೀಲ್

ಬೆಂಗಳೂರು: ಹೌದು. ಹಿರಿಯರು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಪಕ್ಷದೊಳಗೆ ಯಾರನ್ನೂ ಬಯ್ಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಯಾರ ವಿರುದ್ಧವೂ ಮಾತಾಡದಂತೆ ವರಿಷ್ಠರು ಹೇಳಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ಹಿರಿಯರು ಸೂಚನೆ ನೀಡಿದ್ದಾರೆ. ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚಿಸಿದ್ದಾರೆ. ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನು ಮಾತ್ರ ಬೈಯ್ಯುತ್ತೇನೆ. ಪಕ್ಷದ ಒಳಗೆ ಯಾರನ್ನೂ ಬೈಯ್ಯುವುದಿಲ್ಲ ಎಂದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ …

Read More »

ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಶಕ್ಕೆ ಪಡೆದ ಪೊಲೀಸರು

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವಿರೋಧಿಸಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ನಗರದ ಚೆನ್ನಮ್ಮ ವೃತ್ತದಲ್ಲಿಂದು ವಶಕ್ಕೆ ಪಡೆದುಕೊಂಡರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚೆನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರು ಟಿಪ್ಪು ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಇನ್ನೂ ಇದೇ ವೇಳೆ ಶ್ರೀರಾಮ ಸೇನಾ ಕಾರ್ಯಕರ್ತರು ಹಾಗೂ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆದು …

Read More »

ಪಕ್ಷಕ್ಕೆ ಡ್ಯಾಮೆಜ್ ಆಗುವುದನ್ನ ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ. : ಸತೀಶ ಜಾರಕಿಹೊಳಿ

ನನ್ನ ಪಕ್ಷಕ್ಕೆ ಡ್ಯಾಮೆಜ್ ಆಗುವುದನ್ನ ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ. ನನಗೆ ಎಲ್ಲಕ್ಕಿಂತ ಪಕ್ಷ ದೊಡ್ಡದು ಹೀಗಾಗಿ ಪಕ್ಷಕ್ಕೆ ಡ್ಯಾಮೆಜ್ ಆಗಬಾರದೆಂದು ಆ ಪದ ವಾಪಸ್ ಪಡೆದಿರುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಹಿಂದು ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ನಿನ್ನೆಯμÉ್ಟೀ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿ ಸತೀಶ್ ಜಾರಕಿಹೊಳಿ ವಿμÁದ ವ್ಯಕ್ತಪಡಿಸಿದ್ದರು. ಇಂದು ಗುರುವಾರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ …

Read More »

ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ

12ನೇ ಶತಮಾನದ ಶ್ರೇಷ್ಠ ವಚನಕಾರ್ತಿ, ಜಗದ ಅಕ್ಕ ಅಕ್ಕಮಹಾದೇವಿ ಅವರ ಜೀವನ ಇಡೀ ಮಹಿಳಾ ಸಂಕುಲಕ್ಕೆ ಬಹಳ ದೊಡ್ಡ ಆದರ್ಶ ಎಂದು ಗದಗ-ಡಂಬಳದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೆಳಗಾವಿ ಜಿಲ್ಲಾ ಪ್ರಥಮ ಕದಳಿ ಮಹಿಳಾ ಸಮಾವೇಶವನ್ನು ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದ ಶ್ರೀಮತಿ ಪದ್ಮಾವತಿ ಅಂಗಡಿ ವೇದಿಕೆ, …

Read More »

ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ

ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೋಳಿಯವರ ಹೇಳಿಕೆಯನ್ನು ಸಮರ್ಥಿಸಿ ಭಾರತಿಯ ಜನತಾ ಪಕ್ಷದ ವಿರುದ್ಧ ಕಿಡಿಕಾರಿ ಪ್ರತಿಭಟನೆ ಜರುಗಿಸಿದ ಕಾಂಗ್ರೆಸ್ ಕಾರ್ಯಕರ್ತರು. ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಶಾಸಕ ಸತೀಶ ಜಾರಕಿಹೋಳಿ ಯವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಾಜಿ ಜಿಲ್ಲಾ ಚಾಯತ ಸದಸ್ಯ ಮಂಜುನಾಥ ಪಾಟೀಲ ನಿಪ್ಪಾಣಿಯಲ್ಲಿ ಜರುಗಿದ ಬುದ್ದ …

Read More »

ಪ್ರಮೋದ್ ಮುತಾಲಿಕ್ ಮೇಲೆ ಕಾನೂನು ಕ್ರಮ ಜರುಗಿಸಬೇಕು : ವಿಜಯ ಗುಂಟ್ರಾಳ

ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೋಮು ಗಲಭೆಗೆ ಪ್ರಚೋದನೆಕಾರಿ ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಎಐಎಂಐಎಂ ಪಕ್ಷದ ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಅವರಿಗೆ ಕಾನೂನಿನ ಕುರಿತು ಗೌರವವಿಲ್ಲ. ಅಲ್ಲದೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿಯೂ ಕೂಡಾ ಅವರಿಗೆ ನಂಬಿಕೆ ಇಲ್ಲ ಎಂದು ಹರಿಹಾಯ್ದರು. ನಗರದ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗಿದ್ದು, ಯಾವುದೇ …

Read More »

ಸಿಸಿಟಿವಿ ಕಣ್ಣು ತಪ್ಪಿಸಿ ನೆಲಮಾಳಿಗೆಯಲ್ಲಿ ಚಾಕು ತೋರಿಸಿ ಬಾಲಕಿಯರ ಮೇಲೆ ಅತ್ಯಾಚಾರ, ಬಳಿಕ ಅಬಾಶನ್‌ : ಮುರುಘ ಶ್ರೀಗಳ ವಿರುದ್ದ ಚಾರ್ಚ್‌ ಶೀಟ್‌ನಲ್ಲಿ ಸ್ಪೋಟಕ ಮಾಹಿತಿ

ಚಿತ್ರದುರ್ಗ: ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಸದ್ಯ ಮುರುಘಾ ಶ್ರೀಗಳ ಮೇಲೆ ಗಂಭೀರ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಈಗಾಗಲೇ ಪೋಲಿಸರು ನ್ಯಾಯಾಲಯಕ್ಕೆ ಚಾರ್ಚ್‌ ಶೀಟ್‌ ಸಲ್ಲಿಸಲಾಗಿದೆ. ಇನ್ನೂ ಮುರುಘ ಶ್ರೀಗಳು ಬಾಲಕಿಯರ ಮೇಲೆ ಅತ್ಯಾಚಾರ ಮಾಡಲು ರಹಸ್ಯ ನೆಲಮಾಳಿಗೆಯನ್ನು ಮಾಡಿಕೊಂಡಿದ್ದು ಅಂತ ಪೋಲಿಸರ ಮುಂದೆ ಬಾಲಕಿಯರು ಹೇಳಿದ್ದಾರೆ ಎನ್ನಲಾಗಿದ್ದು, ಚೀಟಿಗಳಲ್ಲಿ ಇಂತಹ ಮಕ್ಕಳು ಬೇಕು ಬರೆದುಕೊಡುತ್ತಿದ್ದರು ಎನ್ನಲಾಗಿದೆ. ಇದಕ್ಕೇ ವಾರ್ಡನ್‌ ರಶ್ಮಿ ಸಾಥ್‌ ನೀಡುತ್ತಿದ್ದಳು ಎನ್ನಲಾಗಿದೆ. ಇದಲ್ಲದೇ …

Read More »