ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿಯವರು ಭಗವಾನ್ ಬುದ್ಧನ ಮತ್ತು ಭಾರತರತ್ನ ಡಾ.ಬಾಬಾಸಾಹೇಬ್‌ರ ತತ್ವಾದರ್ಶಗಳು ಅನುಸರಣಿಯವಾಗಿವೆ. …
Read More »Yearly Archives: 2022
ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಶ್ರೀ ಹಾಗೂ ದೀಪಕ್ ಗುಡ್ ಗನಟ್ಟಿ ಅವರಿಂದ ಸನ್ಮಾನ
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ ಅವರು, ಪುತ್ರಿ ನೇತ್ರಾವತಿ, ಪುತ್ರ ನಿರಂಜನ ಭಾನುವಾರ ನಗರದ ಹುಕ್ಕೇರಿ ಹಿರೇಮಠದ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಹಲಗಲಿ ಅವರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕದಲ್ಲಿ ಮಾತ್ರ …
Read More »ಸವದತ್ತಿ ಸ್ವಾದಿಮಠ ಸ್ವಾಮಿಜೀ ಲಿಂಗೈಕ್ಯ
ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಇಂದು ಬೆಳಗಾವಿಯಲ್ಲಿ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ನ ಆ್ಯಂಬುಲೆನ್ಸ್ ಮೂಲಕ ಅವರ ಪಾರ್ಥಿವನ್ನು ಸವದತ್ತಿಗೆ ರವಾಣಿಸಲಾಯಿತು. ಇತ್ತಿಚೇಗೆ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ ವಿಜಯಪುರದ ಜಿಲ್ಲೆ ಕುದರಿ ಸಾಲವಾಡಗಿಯಲ್ಲಿ ಅವರ ಪಾರ್ಥಿವದ ಮೇಲೆ ಅಂತ್ಯಕ್ರಿಯೆ ನಡೆಯಿತು.
Read More »ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರ
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಚಾಂದನಿ ದೇವಡಿ ಮತ್ತು ಕೇಂದ್ರ ಕಾರಾಗೃಹದ ಮುಖ್ಯ …
Read More »ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ
ಮಾನವ ಬಂಧುತ್ವ ವೇದಿಕೆ-ಕರ್ನಾಟಕ ನೇತೃತ್ವದಲ್ಲಿ ಇಂದು ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಭಾಗವಹಿಸಿದರು. ತಂದೆಯವರಾದ ಹಾಗೂ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಯವರು, ಹೆಬ್ಬಾಳ ಗ್ರಾಮದ ಬಸವ ಭವನದ ಬಸವ ಚೇತನ ದೇವರು ಇದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದರ ಮೂಲಕ ಕಾರ್ಯಕ್ರಮವನ್ನು …
Read More »ಹೈಕೋರ್ಟ್ ಸಿಬ್ಬಂದಿಗೆ ಹನಿಟ್ರ್ಯಾಪ್: ಮಹಿಳೆಯರು ಸೇರಿ 10 ಮಂದಿ ಬಂಧನ
ಬೆಂಗಳೂರು: ಹೈಕೋರ್ಟ್ ಸಿಬ್ಬಂದಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಮಹಿಳೆಯರು ಸೇರಿ 10 ಮಂದಿ ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೊಡ್ಡಬಿದರಕಲ್ಲು ಶಿವಗಂಗಾ ಲೇಔಟ್ ನಿವಾಸಿ ಸಿದ್ದೇಶ್ ಅಲಿಯಾಸ್ ಸಿದ್ದು (26), ಗೊಲ್ಲರ ಹಟ್ಟಿಯ ಪೈಪ್‌ಲೈನ್ ರಸ್ತೆ ನಿವಾಸಿ ಅನು ಅಲಿಯಾಸ್ ಅನುರಾಧಾ (25), ಕಾಮಾಕ್ಷಿ ಪಾಳ್ಯದ ಗುಣ (23), ಇಂದಿರಾನಗರದ ಚೇತನ್ ಅಲಿಯಾಸ್ ಚೇತು (19), ಗಂಗೋನಹಳ್ಳಿಯ ರವಿಕುಮಾರ್ ಅಲಿ ಯಾಸ್ ಬಾಂಡ್ (25), ಶ್ರೀರಾಮಪುರದ ಪ್ರಶಾಂತ್ …
Read More »ಡಬಲ್ ಎಂಜಿನ್ ನ ವಂಚನೆಯಿಂದ ಗುಜರಾತ್ ಅನ್ನು ರಕ್ಷಿಸುತ್ತೇವೆ : ರಾಹುಲ್ ಗಾಂಧಿ
ನವದೆಹಲಿ : ಕಾಂಗ್ರೆಸ್ ಪಕ್ಷವು ಗುಜರಾತ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ ಡಬಲ್ ಎಂಜಿನ್ ನ ವಂಚನೆಯಿಂದ ಅವರನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಭಾನುವಾರ ಹೇಳಿದ್ದಾರೆ. 500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗಿನ ರೈತರ ಸಾಲ ಮನ್ನಾ, ನಾವು ಗುಜರಾತ್‌ನ ಜನರಿಗೆ ನೀಡಿದ 8 ವಚನ’ವನ್ನು ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. …
Read More »ನಾಯಿಗೆ ಊಟ ತಡವಾಗಿ ಹಾಕಿದ್ದಕ್ಕೆ 21 ವರ್ಷದ ಯುವಕನನ್ನು ಬೆಲ್ಟ್‌ನಿಂದ ಹೊಡೆದು ಕೊಂದ
ಕ್ಷುಲಕ ಕಾರಣಕ್ಕೆ ಯುವಕನೋರ್ವ ಜೊತೆಯಲ್ಲಿದ್ದ ಸಹೋದರ ಸಂಬಂಧಿ ಯುವಕನನ್ನು ಭೀಕರವಾಗಿ ಹಿಂಸಿಸಿ ಕೊಲೆಗೈದ ಘಟನೆ ಪಾಲಕ್ಕಾಡ್‌ನ ಮನ್ನೆಂಗೋಡ್ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಹರ್ಷದ್ (27) ಸಾವಿಗೀಡಾದ ಯುವಕ. ಹಕೀಂ (27) ಕೃತ್ಯವೆಸಗಿದ ಆರೋಪಿ. ಘಟನೆ ಹಿನ್ನೆಲೆ: ಹರ್ಷದ್ ಹಾಗೂ ಹಕೀಂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಖಾಸಗಿ ಮೊಬೈಲ್ ಟೆಲಿಕಾಂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಹಕೀಂ ಹರ್ಷದ್ ರನ್ನು ಯಾವಾಗಲೂ ಸೇವಕನಂತೆ ನೋಡಿಕೊಳ್ಳುತ್ತಿದ್ದ. ಸಂಬಂಧಿಯಾದ ಕಾರಣ ಹರ್ಷದ್ ಸುಮ್ಮನಿದ್ದು ಮಾತು …
Read More »ಯುವಾ ಬಿಜೆಪಿ ವತಿಯಿಂದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ…
ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಯುವಾ ಮೊರ್ಚಾದ ವತಿಯಿಂದ ಬಸ ತಂಗುದಾಣಗಳ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಭಾನುವಾರದಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತ ಮತ್ತು ಸರದಾರ ಕಾಲೇಜು ಮೈದಾನದ ಹತ್ತಿರದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕೈಯಲ್ಲಿ ಪೊರಕೆ ಮತ್ತು ನೀರಿನ ಪೈಪ್ ಹಿಡಿದ ಕಾರ್ಯಕರ್ತರು ಕಸವನ್ನು ಗುಡಿಸಿ ನೀರು ಹಾಕಿ ತಂಗುದಾಣಗಳನ್ನು ಶುಚಿಗೊಳಿಸಿದರು. ಈ ಸಂದರ್ಭದಲ್ಲಿ ಉತ್ತರ ಶಾಸಕರು ಮತ್ತು ಮಹಾನಗರ ಅಧ್ಯಕ್ಷರು,ಯುವ ಮೊರ್ಚಾ ಅಧ್ಯಕ್ಷರು,ಪ್ರಧಾನ …
Read More »ಸಿಎಂ ಬೊಮ್ಮಾಯಿ ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದ ಚೂನಪ್ಪ ಪೂಜಾರಿ
ಕಬ್ಬು ಬೆಳೆಗಾರರಿಗೆ ಸಿಹಿ ಸುದ್ಧಿ ಕೊಡದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆಯಲ್ಲ, ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದು ರೈತ ಮುಖಂಡ ಚೂನಪ್ಪ ಪೂಜಾರಿ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಕರೆಯಲಾಗಿದ್ದು ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಕಬ್ಬಿನ ಬೆಲೆ ನಿಗದಿ ಮಾಡಿಲ್ಲ ಸಿಹಿ ಸುದ್ದಿ ಕೊಡ್ತೇವಿ ಅಂತಾ ಹೇಳಿದ್ರು. ಶುಗರ್ ಲಾಭಿಗೆ ಮಣಿದಿದ್ದಾರೆ ೮ ವರ್ಷದಿಂದ ೨೫೦೦ ತೆಗೆದುಕೊಳ್ಳುತ್ತಿದ್ದೇವೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. …
Read More »