ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಸುವರ್ಣಸೌಧದ ಎದುರು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ವೀರವನಿತೆಯ ವೇಷಭೂಷಣದಲ್ಲಿ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದರು. ಸಂಸದೆ ಮಂಗಲ ಅಂಗಡಿ, ಸಚಿವ ಶಶಿಕಲಾ …
Read More »Yearly Archives: 2022
ಅಪ್ಪು ಕನಸಿನ ಗಂಧದಗುಡಿ ದರ್ಶನ ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್
ಬೆಂಗಳೂರು: ಪುನೀತ್ ರಾಜ್ ಕುಮಾರ್ (puneeth Raj Kumar) ಕೊನೆಯ ಚಿತ್ರ ಗಂದಧಗುಡಿ (Gandhada Gudi) ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಗಂಧದಗುಡಿ ಚಿತ್ರ ಇಂದು ಆಫಿಷಿಯಲ್ ತೆರೆಕಂಡಿದೆ. ಪರಮಾತ್ಮ’ನ ಕನಸಿನ ಕೂಸು ಬೆಳ್ಳಿ ತೆರೆಗೆ ಬಂದಿದೆ. ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. ಥಿಯೇಟರ್ ಗಳೆಲ್ಲಾ ಹೌಸ್‍ಫುಲ್ ಆಗಿದ್ದು, ಎಲ್ಲೆಲ್ಲೂ ಅಪ್ಪು ಜಾತ್ರೆ ನಡೆಯುತ್ತಿದೆ. ಟೀಶರ್ಟ್, …
Read More »ಅನಾಥರಾದ ಬಸವರಾಜ ಹೊರಟ್ಟಿ, ಕಾಂಗ್ರೆಸ್ ಕೈಗೊಂಬೆಯಾದ ಖರ್ಗೆ: ಸಿ.ಎಂ. ಇಬ್ರಾಹಿಂ
ಹುಬ್ಬಳ್ಳಿ: ‘ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ, ರಾಜ್ಯ ಕಾಂಗ್ರೆಸ್‌ನಲ್ಲಿ ಇದ್ದ ಬಣಗಳ ಸಂಖ್ಯೆ ಮೂರಕ್ಕೇರಿದೆ. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಎಐಸಿಸಿ ಅಧ್ಯಕ್ಷರಾದ ಮೇಲೆ ಮಹತ್ವದ ಬದಲಾವಣೆ ನಿರೀಕ್ಷಿಸುವಂತಿಲ್ಲ. ಮತ್ತೊಬ್ಬರ ಕೈಗೊಂಬೆಯಾಗಿ ಕೆಲಸ ಮಾಡುತ್ತಾರಷ್ಟೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ …
Read More »ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ
ಚಿತ್ರದುರ್ಗ: ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …
Read More »ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ.
ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. 12 ಬಾಲಕರು, 8 ಬಾಲಕಿಯರು ಸೇರಿ 186 ಮಂದಿ ಅಸ್ವಸ್ಥ ರಾಗಿದ್ದಾರೆ. ಇವರಲ್ಲಿ ಆರೋಗ್ಯ ಸ್ಥಿತಿ ಗಂಭೀರ ವಾಗಿರುವ 94 ಮಂದಿಯನ್ನು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ಇದೇ ಊರಿನ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಅವರು ಅ.23ರಂದು, ಶಿವಪ್ಪ ಯಂಡಿಗೇರಿ (70) ಬುಧವಾರ ಮೃತಪಟ್ಟರು. ಅಸ್ಪತ್ರೆಗೆ ದಾಖಲಾಗಿರುವ ಹಲವರಿಗೆ …
Read More »ಮನೆಯಲ್ಲಿನ ಅಡುಗೆ ಅನಿಲ ಸೋರಿಕೆ ಸುಟ್ಟು ಕರಕಲಾಗಿರುವ ವಸ್ತುಗಳು
ಮನೆಯಲ್ಲಿನ ಅಡುಗೆ ಅನಿಲ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಹತ್ತಿದ್ದು, ದೊಡ್ಡ ಪ್ರಮಾಣದಲ್ಲಿನ ಗೃಹಬಳಕೆಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ನಡೆದಿದೆ. ದೀಪಾವಳಿ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಲೀಕ್ ಆಗಿದ್ದು, ಸೋರಿಕೆಯಾದ ಸಿಲಿಂಡರ್ ಏರ್ ಪಾಸ್ ಆಗಲು ಯಾವುದೇ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಆಕಸ್ಮಿಕ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ.
Read More »ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು
ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು. ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ …
Read More »ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರ ಪುನರಾಯ್ಕೆ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಪಿ ಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ಎಚ್.ಡಿ.ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ಪಟ್ಟರು. 13 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೇರಳದ …
Read More »ವಿಜಯಪುರ: ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು
ವಿಜಯಪುರ: ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ರೂಸರ್‌ನಲ್ಲಿದ್ದ ದಂಪತಿ ಸಾವಿಗೀಡಾಗಿದ್ದಾರೆ. ಕ್ರೂಸರ್‌ನಲ್ಲಿದ್ದ ಇತರೆ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ. ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ …
Read More »ಜಮೀನು ನಕ್ಷೆಗಳು ಆನ್ ಲೈನ್ ನಲ್ಲೇ ಲಭ್ಯ; ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು: ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್ ಲೈನ್ ನಲ್ಲೇ ಸಿಗುವುದಕ್ಕೆ ಈಗ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು …
Read More »