ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಗಳಾಗಿದ್ದ ಎಂಜಿ ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ತವರು ಜಿಲ್ಲೆಗೆ ಪ್ರಾದೇಶಿಕ ಆಯುಕ್ತರನ್ನಾಗಿ ನಿಯುಕ್ತಿಯಾಗಿದ್ದಾರೆ. ಮೂಲತಃ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ.ಜಿ. ಹಿರೇಮಠ ಅವರು ಸುಮಾರು ಎರಡು ವರ್ಷಗಳ ಕಾಲ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Read More »Yearly Archives: 2022
ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ನಿರಾಣಿ.
ಬಾಗಲಕೋಟೆ: ”ಬಸನಗೌಡ ಪಾಟೀಲ್ ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ತಮ್ಮನ್ನು ಮತ್ತು ಯಡಿಯೂರಪ್ಪ ಅವರನ್ನು ಒಂದು ಮಾಡಿ ಅಂತ ಕಾಲಿಗೆ ಬಿದ್ದು ಬಂದಿಲ್ವಾ…?” ಬಾಗಲಕೋಟೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರಶ್ನಿಸಿದವರು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ. ”ನಿರಾಣಿಯವರು ಬಿಜೆಪಿ ಟಿಕೆಟ್ಗಾಗಿ ನನ್ನ ಮನೆ ಕಾಯ್ತಿದ್ದರು” ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆಗೆ ನಿರಾಣಿ ಈ ರೀತಿ ತಿರುಗೇಟು …
Read More »ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಕರೆಕೊಟ್ಟಿದ್ದು, ಹೊಸ ಸಂಕಲ್ಪ: ಸಾಹುಕಾರ್’ ರಮೇಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸ್ಥಾನ ನೀಡದ ಕಾರಣ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ವಿರುದ್ಧ ಮುನಿಸಿಕೊಂಡು ಸದನಕ್ಕೆ ಗೈರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಅವರು, ಮುಖ್ಯಮಂತ್ರಿಗಳ (Chief Minister) ಜೊತೆಗಿನ ಮಾತುಕತೆಯ ಬಳಿಕ ಮುನಿಸು ದೂರ ಮಾಡಿ ಸಕ್ರಿಯರಾಗಿದ್ದಾರೆ. ಸಿಎಂ ವಿಶ್ವಾಸ ನೀಡಿದ ಬಳಿಕ ಸದನಕ್ಕೂ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಅವರು ಸದ್ಯ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Constituency) ಪಕ್ಷ …
Read More »8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಮೂವರಿಂದ ಅತ್ಯಾಚಾರ ಶಂಕೆ
ಎಂಟನೇ ತರಗತಿ ವಿದ್ಯಾರ್ಥಿನಿ (8th Class Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ (Koppal Taluk) ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ (Parents) ಗೊತ್ತಾಗಿದೆ. ಈ ಸಂಬಂಧ …
Read More »ಫೆಬ್ರವರಿ ತಿಂಗಳಲ್ಲಿ ಬಜೆಟ್ : ಸಿಎಂ ಬಬೊಮ್ಮಾಯಿ
ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ ಈಗಾಗಲೇ ಎರಡು ಬಾರಿ ಹಣಕಾಸಿನ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ಅಧಿವೇಶನ ಮುಗಿದ ಬಳಿಕ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.
Read More »ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು: ಬಸವರಾಜ ಹೊರಟ್ಟಿ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು …
Read More »ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ
ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …
Read More »ಹುಬ್ಬಳ್ಳಿ: ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಹುಬ್ಬಳ್ಳಿ:ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ. ದರ್ಗಾದ ಸುತ್ತಮುತ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ. ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ …
Read More »ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `NPS’ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ
ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ …
Read More »ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ;
ಗದಗ: ಮೂವರು ವಿವಾಹಿತ ಶಿಕ್ಷರ ಪ್ರೀತಿಗೆ ವಿದ್ಯಾರ್ಥಿ ಬಲಿ ಆಗಿದ್ದಾನೆ. ಅದರಲ್ಲೂ ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಗಿದೆ. ಅಮ್ಮನೊಂದಿಗೆ ಸಲುಗೆಯಿಂದಿದ್ದ ಇಬ್ಬರು ಶಿಕ್ಷಕರ ಪೈಕಿ ಒಬ್ಬ ಆಕೆಯ ಮಗನನ್ನು ಭೀಕರವಾಗಿ ಕೊಲೆ ಮಾಡಿ ಕ್ರೌರ್ಯ ತೋರಿದ್ದಾನೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಸಹಶಿಕ್ಷಕಿ ಗೀತಾ ಎಂಬಾಕೆಯ …
Read More »