ಹೈಸ್ಕೂಲ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಮುಚ್ಚಂಡಿ ಗ್ರಾಮದ ಹೊರಭಾಗದಲ್ಲಿ ಹಂತಕರು ಎಸೆದು ಹೋಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ ನಗರದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ. ನಗರದ ಜಿ.ಎ.ಹೈಸ್ಕೂಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ. ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಬೆಳಗಾವಿಯ ಜಿಎ ಹೈಸ್ಕೂಲಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಎಂದು …
Read More »Yearly Archives: 2022
ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು……
ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿAದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ ಸಂಸದರು ಇಂದು ದೂರವಾಣಿ ಮುಖಾಂತರ ಪತ್ರಿಕೆಗೆ ಹೇಳಿಕೆ ನೀಡಿದ್ದು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ತಮ್ಮ …
Read More »ದೆವ್ವ ಕರೆದರೆ ಹೋಗಲು ಆಗುತ್ತಾ? : ಸುಮಲತಾರಿಗೆ ರವೀಂದ್ರ ಶ್ರೀಕಂಠಯ್ಯ ತಿರುಗೇಟು
ಮೈಸೂರು : ”ಅವರು ಕರೆದಾಕ್ಷಣ ಹೋಗಲಾಗುವುದಿಲ್ಲ,ಉತ್ತಮರು ಕರೆದರೇ ಹೋಗಬಹುದು, ದೆವ್ವ ಕರೆದರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ?” ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರನ್ನು ಆಣೆ ಪ್ರಮಾಣ ಮಾಡಲು ಬರುವಂತೆ ಸುಮಲತಾ ಅವರು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಸುಮಲತಾ ಜತೆಯಲ್ಲಿರುವವರು ಭ್ರಷ್ಟಾತಿಭ್ರಷ್ಟರು.ಮೈಸೂರು ಬೆಂಗಳೂರು ಹೈವೇ ಕಾಮಗಾರಿಯಲ್ಲಿ ನೂರಾರು ಕೋಟಿ …
Read More »ಚೇತನ್ ಹಿಂದೂ ಧರ್ಮ ಟಾರ್ಗೆಟ್ ಮಾಡೋದನ್ನ ಬಿಡಲಿ: ಚಕ್ರವರ್ತಿ ಕಿಡಿ
ರಬಕವಿ-ಬನಹಟ್ಟಿ : ನಟ ಚೇತನ್‌ರಿಗೆ ಸಿನಿಮಾ ಮಾಡಿ ಹಿಟ್ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ, ಬದಲಾಗಿ ಒಂದಲ್ಲ ಒಂದು ವಿಚಾರದಿಂದ ಸನಾತನ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುತ್ತಾ ಸದಾ ಸುದ್ದಿಯಲ್ಲಿರಬೇಕೆಂಬ ಹುಚ್ಚು ಮನಸ್ಸು ಅವರದಾಗಿದೆ. ಈಗ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದಿಂದ ಮತ್ತೆ ವಿವಾದಎಬ್ಬಿಸಿರುವುದು ಹೊಸತೇನಲ್ಲವೆಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುವ ಸಂದರ್ಭ ಮಾತನಾಡಿ, ಬುಡಕಟ್ಟು ಜನಾಂಗ, ಭಾರತೀಯ ಮೂಲ ಭಾರತೀಯ ಸಂಸ್ಕೃತಿ ಬೇರೆ ಎಂಬುದು ಎಡಪಂಕ್ತಿಯರ …
Read More »ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, 3 ಸಾವಿರ ಜನರಿಗೆ ಬಾಡೂಟ
ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಬಿ.ಹೆಚ್.ರಸ್ತೆ ಪಕ್ಕದಲ್ಲೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಅದರಲ್ಲಿ ನಟ ಪುನೀತ್ …
Read More »ತಮಿಳ್ ತಲೈವಾಸ್ ಬಗ್ಗುಬಡಿದ ಬೆಂಗಳೂರು ಬುಲ್ಸ್; ಅಂಕಪಟ್ಟಿಯಲ್ಲಿ ಏರಿಕೆ
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ತಮಿಳ್ ತಲೈವಾಸ್ ತಂಡವನ್ನು 45-28 ಅಂಕಗಳಿಂದ ಸೋಲಿಸಿದ ಬೆಂಗಳೂರು ಬುಲ್ಸ್, ಈ ಋತುವಿನ ಮೂರನೇ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿತು. ಭರತ್ (12 ಅಂಕ), ವಿಕಾಶ್ ಕಂಡೋಲ (7 ಅಂಕ) ಮತ್ತು ನೀರಜ್ ನರ್ವಾಲ್ (5 ಅಂಕ) ಅವರು ಎರಡು ಪಂದ್ಯಗಳ ಸೋಲಿನ ಸರಣಿಯನ್ನು ಮುರಿದು ಬೆಂಗಳೂರು ಬುಲ್ಸ್‌ಗೆ ಅತ್ಯುತ್ತಮ ರೈಡರ್‌ಗಳ ಆಯ್ಕೆಯಾಗಿದ್ದಾರೆ. ಎರಡೂ ತಂಡಗಳು ಆಟವನ್ನು …
Read More »ಚೇತನ್ಗೆ ಯಾಕೆ ಉರಿ? ಎಂದು ಕಿಡಿಕಾರಿದ ಮುತಾಲಿಕ್; ಹೇಳಿಕೆ ವಾಪಸ್ ಪಡೆಯಲು ಆಗ್ರಹ..
ಧಾರವಾಡ: ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ನಟ ಚೇತನ್ ಅಪಸ್ವರ ಎತ್ತಿರುವ ವಿಚಾರವಾಗಿ ಪ್ರತಿಕ್ರಿಯಿರುವ ಪ್ರಮೋದ್ ಮುತಾಲಿಕ್, ಚೇತನ್ಗೆ ಯಾಕೆ ಉರಿ? ಎಂದು ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಮುತಾಲಿಕ್, …
Read More »ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ
ಬೆಂಗಳೂರು : 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ. ಈ ಕುರಿತು ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್ ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ. ಕಿರಿಯ ತಾಂತ್ರಿಕ …
Read More »ಇಂದಿನಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯ, ತಪ್ಪಿದರೇ 1 ಸಾವಿರ ದಂಡ – ಡಿಜಿ, ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ವಾಹನಗಳಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವುದು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದೆ. ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೇಂದ್ರ …
Read More »ನೇಮಕಾತಿ ಹಗರಣ | ಧಮ್ ಇದ್ದರೆ ತನಿಖೆ ನಡೆಸಿ: ಬೊಮ್ಮಾಯಿಗೆ H.D.K. ಸವಾಲು
ಮೈಸೂರು: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ದಾಖಲೆಗಳನ್ನು ರಾಹುಲ್ ಗಾಂಧಿಗೆ ಕಳುಹಿಸುತ್ತೀರೇಕೆ? ನಿಮಗೆ ಧಮ್ ಇದ್ದರೆ ಸಚಿವ ಸಂಪುಟದಲ್ಲಿಟ್ಟು ತನಿಖೆ ಮಾಡಿಸಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು. ಮುಖ್ಯಮಂತ್ರಿಯು ಬೀದರ್ ಜಿಲ್ಲೆಯ ಔರಾದ್‌ನಲ್ಲಿ ನಡೆದ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ನೀಡಿದ್ದ ಹೇಳಿಕೆಗೆ ಇಲ್ಲಿ ತಿರುಗೇಟು ಕೊಟ್ಟ ಅವರು, ‘ದಾಖಲೆಗಳನ್ನು ರಾಹುಲ್‌ಗೆ ಕಳುಹಿಸಿ ಏನು …
Read More »