Breaking News

Yearly Archives: 2022

ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳ

ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್‌ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು …

Read More »

24 ಗಂಟೆಗಳಲ್ಲಿ ಎಫ್‌ಐಆರ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು

ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್‌ಐಆರ್‌) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ವಿಚಾರವಾಗಿ ವಕೀಲ ಎಸ್‌. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಎಫ್‌ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

ಮೂರು ವಿಧೇಯಕಗಳಿಗೆ ಅನುಮೋದನೆ ನೀಡಿದ ರಾಜ್ಯಪಾಲರು.. ರಾಜಪತ್ರ ಹೊರಡಿಸಿದ ಸರ್ಕಾರ

ಬೆಂಗಳೂರು : ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಎರಡು ಪರೀಕ್ಷಾ ಮಂಡಳಿ ವಿಲೀನ: ರಾಜ್ಯ ಸರ್ಕಾರ ಈ ಸಂಬಂಧ ರಾಜಪತ್ರ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು …

Read More »

ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್ – ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಟ್ರೋಲ್

ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ (Sriperumbudur) ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದರು. ಈ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳನ್ನು ನಿರ್ಮಿಸಲಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶ್ರೀಪೆರಂಬದೂರಿನಲ್ಲಿ ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ (SIPCOT) 1.80 ಕೋಟಿ ರೂಪಾಯಿ ಬಜೆಟ್‍ನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ …

Read More »

ಊಟ, ತಿಂಡಿ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ 63ರ ವೃದ್ಧನಿಂದ ಅತ್ಯಾಚಾರ

ಮಂಡ್ಯ: ಊಟ ತಿಂಡಿ ಆಮಿಷ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ 63 ವರ್ಷದ ವೃದ್ಧ ಬಲವಂತವಾಗಿ ಅತ್ಯಾಚಾರವೆಸಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ವ್ಯಾಪ್ತಿಯ ಗ್ರಾಮವೊಂದರಲ್ಲಿ 63 ವರ್ಷದ ವಯೋವೃದ್ಧ ಗ್ರಾಮದ ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಹಲಗೂರು ಪಟ್ಟಣಕ್ಕೆ ಕರೆದುಕೊಂಡು ಬಂದಿದ್ದನು. ಈ ವೇಳೆ ಬಾಲಕಿಗೆ ಊಟ ತಿಂಡಿ ಕೊಡಿಸಿ ನಂತರ ಬಲವಂತವಾಗಿ ಆಕೆಯ …

Read More »

ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್‌ವೈ ಹೆಸರು: ಬೊಮ್ಮಾಯಿ

ರಾಯಚೂರು: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿವೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಗಿಲ್ಲೆಸುಗೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಈಗಾಗಲೇ ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಏಮ್ಸ್ ಕುರಿತಾಗಿ ಮಾತನಾಡಲಿದ್ದೇನೆ. ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ …

Read More »

ಕಾಂಗ್ರೆಸ್‍ನ ರಾಹುಲ್ ಗಾಂಧಿ ತಮ್ಮ ಆಸ್ತಿತ್ವಕ್ಕಾಗಿ ಜೋಡೋ ಯಾತ್ರೆ ಮಾಡುತ್ತಿದ್ದಾರೆ: ಭಾರತ್ ಜೋಡೋ ಯಾತ್ರೆ ಬಗ್ಗೆ ಲೇವಡಿ ಮಾಡಿದ C.M.

ಕಾಂಗ್ರೆಸ್‍ನ ರಾಹುಲ್ ಗಾಂಧಿ ತಮ್ಮ ಆಸ್ತಿತ್ವಕ್ಕಾಗಿ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ ಬಗ್ಗೆ ಲೇವಡಿ ಮಾಡಿದ್ದಾರೆ. ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಗ್ರಾಮದಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ರಾಹುಲ್ ಗಾಂಧಿ ಅವರಿಗೆ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೀಗಾಗಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯಿಂದ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಗೂ, …

Read More »

ಸಿದ್ದರಾಮಯ್ಯ ಸುಳ್ಳಿನ ನಾಯಕ,ಅವರು ಸಮಾಜವಾದಿಯನ್ನು ಯಾವಾಗಲೋ ಮಡಚಿ ಮನೆಯಲ್ಲಿ ಇಟ್ಟಿದ್ದಾರೆ.:C.M. ಬೊಮ್ಮಾಯಿ

ಕಾಂಗ್ರೆಸ್ ನಾಯಕ ಸಿದರಾಮಣ್ಣ ಅವರು ಸಮಾಜವಾದಿಯನ್ನು ಯಾವಾಗಲೋ ಮಡಚಿ ಮನೆಯಲ್ಲಿ ಇಟ್ಟಿದ್ದಾರೆ. ಈಗ ಅವರು ಒಬ್ಬ ಸಣ್ಣ ಹುಡುಗನ ಕೈ ಕೆಳಗೆ ಕೆಲಸ ಮಾಡುತ್ತಿದ್ದಾರೆ. ಅವನು ಓಡಿ ಅಂದ್ರೆ ಓಡುತ್ತಾರೆ. ಕೂರು ಅಂದ್ರೆ ಕೂರುತ್ತಾರೆ. ಅವರು ಸ್ವಾಭಿಮಾನ ಕಳೆದುಕೊಂಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದರು. ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರು ಸುಳ್ಳಿನ ಅಗ್ರಗಣ್ಯ ನಾಯಕ. ಅಹಿಂದ …

Read More »

ಬೆಳಗಾವಿ ಜಿಲ್ಲಾ ಶಿವಸೇನೆ ವತಿಯಿಂದ ಜ್ಯೋತಿ ಚಿಹ್ನೆಗೆ ಸ್ವಾಗತ,

ಮಹಾರಾಷ್ಟ್ರದಲ್ಲಿ ಒಡೆದು ಎರಡು ಹೋಳಾಗಿರುವ ಶಿವಸೇನೆ ಪಕ್ಷದಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಗುಂಪಿಗೆ ಜ್ಯೋತಿಯ ಚಿಹ್ನೆಯನ್ನು ಕೇಂದ್ರ ಚುನಾವಣಾ ಆಯೋಗ ನೀಡಿರುವ ಹಿನ್ನೆಲೆ ಬೆಳಗಾವಿಯಲ್ಲಿ ಶಿವಸೇನೆ ಜಿಲ್ಲಾ ಘಟಕದ ವತಿಯಿಂದ ವಿಜಯೋತ್ಸವ ಅಚರಿಸಲಾಯಿತು. ರಾಮಲಿಂಗಖಿಂಡ ಗಲ್ಲಿಯಲ್ಲಿರುವ ಶಿವಸೇನೆ ಕಚೇರಿ ಮುಂದೆ ಛತ್ರಪತಿ ಶಿವಾಜಿ ಮಹಾರಾಜ್‍ರ ಪುತ್ಥಳಿಗೆ ಪೂಜೆ, ಮಾಲಾರ್ಪಣೆ ಮಾಡಿದರು. ಬಳಿಕ ಉದ್ಧವ್ ಠಾಕ್ರೆ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ ಶಿವಸೇನೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇದೇ …

Read More »