ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, …
Read More »Yearly Archives: 2022
4ಜನ ದರೋಡೆಕೋರರ ಹೆಡೆಮುರಿಕಟ್ಟಿದ ನಿಪ್ಪಾಣಿ ಪೊಲೀಸರು
ಭೀವಶಿ ಗ್ರಾಮದ ವ್ಯಾಪ್ತಿಯಲ್ಲಿ ಬಂಗಾರದ ವ್ಯಾಪಾರಿಯೊಬ್ಬ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದರೋಡೆಕೋರರು ಆತನನ್ನು ತಡೆದು ನಗ ನಾಣ್ಯ ದೋಚಿದ್ದ ಕಿರಾತಕರನ್ನು ಬಂಧಿಸುವಲ್ಲಿ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನಿಪ್ಪಾಣಿ ತಾಲೂಕಿನ ಮಾಂಗೂರ್ ನಿವಾಸಿ ದೊಂಡಿರಾಮ ವಿಷ್ಣು ಕುಸಾಳೆ ದಿನಾಂಕ 08/04/02022ರಂದು ಸಾಯಂಕಾಲ ಚಿನ್ನದ ವ್ಯಾಪಾರವನ್ನು ಮುಗಿಸಿಕೊಂಡು ತಮ್ಮ ಅಂಗಡಿಯಲ್ಲಿದ್ದ 5 ಲಕ್ಷ 40 ಸಾವಿರ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣ, ಮತ್ತು 2.5 …
Read More »ಸರ್ವರ್ ಸಮಸ್ಯೆ: ರಾತ್ರಿಯವರೆಗೂ ದಾಖಲೆ ಪರಿಶೀಲನೆ
ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ 8ರವರೆಗೂ ನಡೆಯಿತು. ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸರ್ವರ್ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ …
Read More »‘ಜನಜಾಗೃತಿ ಕಾರ್ಯಕ್ಕೆ ಜನರು ಸಹಕರಿಸಬೇಕು’
ಹುಕ್ಕೇರಿ: ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ತಾನು ಸಾಯುವುದರ ಜತೆ ತನ್ನ ಕುಟುಂಬವನ್ನೆ ನಾಶ ಮಾಡುವನು. ಜನರು ದುಶ್ಚಟದಿಂದ ದೂರ ಉಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದ ಜನ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ ಡಾ.ಜಗಜೀವನರಾಮ ಸಭಾ ಭವನದಲ್ಲಿ ಆಯೋಜಿಸಿದ್ದ ‘ಗಾಂಧಿಸ್ಮ್ರತಿ ಅಂಗವಾಗಿ ‘ದುಶ್ಚಟಗಳ ವಿರುದ್ಧ ಜನಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ …
Read More »ಈಡೇರಿದ ಮೀಸಲಾತಿ ಬೇಡಿಕೆ.. ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಈಗ ನೆಮ್ಮದಿ ಸಿಕ್ಕಿದೆ.. ಸಚಿವ ಶ್ರೀರಾಮುಲು
ಬೆಂಗಳೂರು: ಮೀಸಲಾತಿ ಸಂಬಂಧ ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಈಗ ಸಮಾಧಾನ ಸಿಕ್ಕಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದೆ. ವಾಲ್ಮೀಕಿ ಸಮುದಾಯ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಜಾಗೂ ಪ.ಪಂಗಡದ ಸಮುದಾಯಗಳಲ್ಲಿ 151 ಜಾತಿ ಬರುತ್ತವೆ. ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಇದು ಇಂದಿನ ಹೋರಾಟ ಅಲ್ಲ. ಅನೇಕ ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ ಇಂದು …
Read More »ಭ್ರಷ್ಟರನ್ನು ರಸ್ತೆಗೆ ತರುತ್ತೇವೆಂದು ಮೋದಿ ಹೇಳಿದ್ದರು.:ಭಾರತ್ ಜೋಡೋ ಯಾತ್ರೆ ಟೀಕಿಸಿದ ಯತ್ನಾಳ್
ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ, ರಾಹುಲ್ ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ ಎಂದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವ ಪರಿಣಾಮ ಸಹ ಬೀರುವುದಿಲ್ಲ. ಇದರಿಂದ ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು ಮಾಡಿದೆ …
Read More »ಉದ್ಘಾಟನೆಯಾಗದ ಸ್ಮಾರ್ಟ್ ಸಿಟಿ ಮೀನು ಮಾರುಕಟ್ಟೆ
ಯಾವುದೇ ಕಾಮಗಾರಿಗಳಿಗಾಗಲಿ.. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಆರಂಭದಲ್ಲಿ ಇರುವ ಉತ್ಸಾಹ ಕಾಮಗಾರಿ ಮುಗಿದ ಮೇಲೆ ಇರುವುದೇ ಇಲ್ಲ. ಇದಕ್ಕೆ ಧಾರವಾಡವೇನೂ ಹೊರತಾಗಿಲ್ಲ. ಕಾಮಗಾರಿಗೆ ಅನುಮೋದನೆ ದೊರೆತು, ಅದು ಮುಕ್ತಾಯವಾಗುವವರೆಗೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿರಂತರವಾಗಿ ಅಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಯಾವಾಗ ಕಾಮಗಾರಿ ಮುಗಿಯುತ್ತದೋ, ಅವರು ಕೂಡ ಅಲ್ಲಿಗೆ ಬರುವುದನ್ನು ನಿಲ್ಲಿಸಿ ಬಿಡುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ. ಹುಬ್ಬಳ್ಳಿಯ ಗಣೇಶಪೇಟೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …
Read More »ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ
ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್‌ನ ಗಜಾನನ ಗವಾನೆ ಮಾನಸಿಕ ಅಸ್ವಸ್ಥನನ್ನು ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಶನಿವಾರ ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀನಗರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲೆಯಾಗಿ ಓಡಾಡುವ ಮೂಲಕ ಅವಾಂತರ ಎಸಗಿದ್ದಾನೆ. ಈ ವೇಳೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್ ನ ಗಜಾನನ ಗವಾನೆ ಅವರಿಗೆ ಆ ಭಾಗದ ಮಹಿಳೆಯರು ಹಾಗೂ …
Read More »ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!
ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿ. ಆದರೆ ಡಾಲ್ಬಿಯನ್ನು ಉಪಯೋಗ ಮಾಡಬೇಡಿ ಎಂದ ಡಿಸಿಪಿ ರವೀಂದ್ರ ಗಡಾದಿ
ಮುಂಬರುವ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿ. ಆದರೆ ಡಾಲ್ಬಿಯನ್ನು ಉಪಯೋಗ ಮಾಡಬೇಡಿ ಎಂದು ಡಿಸಿಪಿ ರವೀಂದ್ರ ಗಡಾದಿ ಅವರು ಕನ್ನಡ ಸಂಘಟನೆಗಳಿಗೆ ಮನವಿ ಮಾಡಿಕೊಂಡರು. ಇಡೀ ರಾಜ್ಯದಲ್ಲಿಯೇ ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಅಂದು ಬೆಳಗಾವಿಗೆ ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಲಕ್ಷೋಪಲಕ್ಷ ಕನ್ನಡಿಗರು ಜಮಾಯಿಸಿ ಕನ್ನಡಮ್ಮನ ಜಾತ್ರೆಯಲ್ಲಿ ಮಿಂದೇಳುತ್ತಾರೆ. ಇನ್ನು ಅದ್ಧೂರಿ ರಾಜ್ಯೋತ್ಸವಕ್ಕೆ ಕ್ಷಣಗಣನೇ ಕೂಡ ಶುರುವಾಗಿದೆ. …
Read More »