ರಾಜ್ಯ ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಶ್ರೇಯೋಭಿವೃದ್ಧಿ ಸಂಘ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಕೊಂಡುಸಕೊಪ್ಪ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು. ಗ್ರಾಪಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲಕ್೯, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಸಿ ದರ್ಜೆಯ ಮೇಲ್ದರ್ಜೆಗೆ ಏರಿಸಬೇಕು ಮತ್ತು ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್ ಮೊದಲಾದ ಹುದ್ದೆಯನ್ನು ಡಿ ದರ್ಜೆಯ ಮೇಲ್ದರ್ಜೆಗೇರಿಸುವ ಮೂಲಕ …
Read More »Yearly Archives: 2022
ಅಂಬೇಡ್ಕರ್ ಕುರಿತು ಅವಹೇಳನ : ಮಸಿ ದಾಳಿಗೆ ಭೀತಿಗೆ ಫೇಸ್ ಶೀಲ್ಡ್ ಧರಿಸಿದ ಬಿಜೆಪಿ ಸಚಿವ
ಮುಂಬೈ, ಡಿ. 18: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ. ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ …
Read More »ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ
ಬೆಳಗಾವಿ, ಡಿಸೆಂಬರ್ 19: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ …
Read More »ಮಹಾ ಅಧಿವೇಶನದಲ್ಲಿ ಬೆಳಗಾವಿ ವಿವಾದ ಪ್ರತಿಧ್ವನಿಸುವ ನಿರೀಕ್ಷೆ
ಮುಂಬೈ: ಸೋಮವಾರದಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಅವರ ಹೇಳಿಕೆ ಪ್ರತಿಧ್ವನಿಸುವ ನಿರೀಕ್ಷೆ ಇದೆ. “ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು,’ ಎಂದು ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಇದೇ ವೇಳೆ, “ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆಸಿರುವ ಮಾತುಕತೆಯನ್ನು …
Read More »ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪ
ಬೆಳಗಾವಿ: ಕುಂದನಗರಿಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೆಳಗಾವಿ ಗಡಿ ವಿವಾದ, ಮತದಾರರ ಮಾಹಿತಿ ಕಳವು, 40 ಪರ್ಸೆಂಟ್ ಕಮಿಷನ್, ಕುಕ್ಕರ್ ಬ್ಲಾಸ್ಟ್ ವಿವಾದಾತ್ಮಕ ಹೇಳಿಕೆ, ಕಬ್ಬು ಬೆಳೆಗಾರರ ಪ್ರತಿಭಟನೆ ಬಲವಾದ ಸದ್ದು ಮಾಡುವ ಲಕ್ಷಣಗಳು ಕಂಡುಬರುತ್ತಿವೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಡೆ ಯುತ್ತಿರುವ ಈ ಬಾರಿಯ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜಕೀಯ ಜಿದ್ದಾ ಜಿದ್ದಿ ವಿಚಾರಗಳೇ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದ ಕಿರಿಕಿರಿ, ಮತದಾರರ ಮಾಹಿತಿ …
Read More »ಮರಾಠಿ ಮಹಾಮೇಳಾವ್ ಗೆ ಅನುಮತಿ ನಿರಾಕರಣೆ: ವೇದಿಕೆ ತೆರವುಗೊಳಿಸಿದ ಅಲೋಕ ಕುಮಾರ್
ಬೆಳಗಾವಿ: ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಇಂದು ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ. ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳಾವ್ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ್ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯನ್ನು ತೆರವುಗೊಳಿಸಿದರು. ಯಾವುದೇ ಸಭೆ ಸಮಾರಂಭ ಆಯೋಜಿಸದಂತೆ ತಾಕೀತು …
Read More »ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆ:ಸತೀಶ ಜಾರಕಿಹೊಳಿ
ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವರೂಢ ಮೂರ್ತಿ ಲೋಕಾರ್ಪಣೆ ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ: ಶಾಸಕ ಸತೀಶ ಜಾರಕಿಹೊಳಿ ಛತ್ರಪತಿ ಶಿವಾಜಿ ಮಹಾರಾಜರು ವಿಶ್ವ ಪ್ರಸಿದ್ದ ಪಡೆದ ಮಹಾನ್ ಹೋರಾಟಗಾರ, ಅವರ ಚಿಂತನೆ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು” ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜ …
Read More »ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ..
ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ದಂಡಿ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್‌ಪಿ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
Read More »ನಗರದಲ್ಲಿ ಹೆಚ್ಚಾಯ್ತು ರೌಡಿಗಳ ಅಟ್ಟಹಾಸ; ಹಫ್ತಾ ನೀಡಿಲ್ಲವೆಂದು ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿದ ಪುಡಿ ರೌಡಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೌಡಿಗಳ ಹಾವಳಿ ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ಪುಡಿ ರೌಡಿಗಳು ವರ್ತಿಸುತ್ತಿದ್ದಾರೆ. ಸಣ್ಣ ಪುಟ್ಟ ಅಂಗಡಿಗಳಿಗೆ ನುಗ್ಗಿ, ಅಲ್ಲಿದ್ದ ವ್ಯಾಪಾರಸ್ಥರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗೆ ಸಿಗರೇಟ್ ಹಣ ಕೇಳಿದಕ್ಕೆ ಬೈಂದೂರಿನ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ …
Read More »ಸಾರ್ವಜನಿಕರಿಂದ ಕಿರುಕುಳ ಆರೋಪ: ಸಿರವಾರ ಪಿಎಸ್ಐ ಗೀತಾಂಜಲಿ ಶಿಂಧೆ ಅಮಾನತು
ರಾಯಚೂರು: ಇತ್ತೀಚೆಗಷ್ಟೇ ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಭಾರಿ ಸದ್ದು ಮಾಡಿದ್ದ ಸಿರವಾರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನು ಇದೀಗ ಅಮಾನತು ಮಾಡಲಾಗಿದೆ. ಸಾರ್ವಜನಿಕರಿಂದ ದೂರುಗಳ ಸುರಿಮಳೆ ಬಂದ ಹಿನ್ನೆಲೆಯಲ್ಲಿ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಗೀತಾಂಜಿಲಿ ಶಿಂಧೆ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸುಖಾಸುಮ್ಮನೆ ಕಿರುಕುಳ ನೀಡುತ್ತಾರೆ ಎಂದು ಸಾಕಷ್ಟು ಜನರು ಗೀತಾಂಜಲಿ ಶಿಂಧೆ ವಿರುದ್ಧ ಆರೋಪ ಮಾಡಿದ್ದರು. ಡೆತ್ನೋಟ್ …
Read More »