ಬೆಳಗಾವಿ ಜಿಲ್ಲೆಯಲ್ಲಿ ೨೯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯವರನ್ನು ಸಭೆಗೆ ಕರೆದಿದ್ದೇವೆ ಆದರೆ ಈ ಕುರಿತಂತೆ ಆದೇಶ ಮಾಡಿಲ್ಲ. ಕೆಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಾರಣಾಂತರದಿAದ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಹೇಳಿದರು. ನಗರದಲ್ಲಿ ಇಂದು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘನೆಯ ಮುಖಂಡರ ಜತೆಗೆ ಕರೆಯಲಾದ ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …
Read More »Yearly Archives: 2022
ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಮೇಕೆ ಕೊಡುತ್ತೆ ಹಾಲು
ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಆಡು ಕೂಡ ಹಾಲು ಕೊಡುತ್ತೆ ಎನ್ನುವುದಕ್ಕೆ ಇಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಜಮಖಂಡಿನಗರದ ಟೀಚರ್ಸ್ ಕಾಲೋನಿಯಲ್ಲಿ ಗಂಡು ಆಡಿನ ಮರಿ ಹಾಲು ಕೊಡುತ್ತಿರುವುದು ಕಂಡು ಸಾರ್ವಜನಿಕರು ತೀವ್ರ ಅಚ್ಚರಿಗೊಂಡಿದ್ದಾರೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆ ಇದಾಗಿದ್ದು. ಪ್ರತಿ ನಿತ್ಯ ಒಂದು ಬಟ್ಟಲಿನಷ್ಟು ಹಾಲನ್ನು ಈ ಗಂಡು ಮೇಕೆ ಕೊಡುತ್ತಿದೆ. …
Read More »ವೈದ್ಯನೊಬ್ಬ ಚಿಕಿತ್ಸೆಗಾಗಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಪರಾರಿ
ಬೆಂಗಳೂರು: ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತಿದೆ. ಆದರೆ, ಕಾಮುಕ ವೈದ್ಯನೊಬ್ಬ ಚಿಕಿತ್ಸೆಗೆ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಹೀಗೆ ಚಿಕಿತ್ಸೆಗೆಂದು ತನ್ನ ಅಜ್ಜಿಯ ಜೊತೆ ಬಂದ 19 ವರ್ಷದ ಯುವತಿಗೆ ಈ ಕೀಚಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಹೊಟ್ಟೆ ನೋವು ಎಂದು …
Read More »ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವು
ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಡಕುಂದ್ರಿ ಗ್ರಾಮದ 42 ವರ್ಷದ ಶಿವಾನಂದ ಬಾಬು ಸಿರಗಾಂವಿ ಮೃತ ಯೋಧ. ಶ್ರೀನಗರದ 55 ಆರ್‍ಆರ್ ಬಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಬಾಬು ಸಿರಗಾಂವಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತ ಯೋಧನಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಯೋಧನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಬಡಕುಂದ್ರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಶುಕ್ರವಾರ …
Read More »ಸಾವಿನಲ್ಲೂ ಸಾರ್ಥಕತೆ: ಇಬ್ಬರು ಅಂಧರ ಬಾಳಿಗೆ ಬೆಳಕಾದ ರುದ್ರಮ್ಮ ಹೊಂಗಲ್
ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಹಿರಿಯ ಜೀವಿ ರುದ್ರಮ್ಮ ಬಸವಣೆಪ್ಪ ಹೊಂಗಲ(ಕುದರಿ) ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಒಕ್ಕುಂದ ಗ್ರಾಮದ 93 ವರ್ಷದ ರುದ್ರಮ್ಮ ಹೊಂಗಲ ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ಅವರ ಕುಟುಂಬಸ್ಥರ ನಿರ್ಧಾರದಂತೆ ಬೆಳಗಾವಿ ಕೆಎಲ್ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮುಖಾಂತರ ನೇತ್ರಗಳನ್ನು ದಾನ …
Read More »ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ ದೇಶೀಯ ತಳಿಗಳ ಗೋವು ಪ್ರದರ್ಶನ
ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ ದೇಶೀಯ ತಳಿಗಳ ಗೋವು ಪ್ರದರ್ಶನ,ಮತ್ತು ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಲಿದೆ. ಹೌದು. ಇಂತಹ ವಿಶೇಷ ವಾದ ಪ್ರಯತ್ನ ನಡೆತ್ತಿರುವುದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿಿಿ ಇದೇ ತಿಂಗಳು ಅಕ್ಟೋಬರ್ 10 ರಂದು ಜರುಗಲಿರುವ ನಮ್ಮ ದೇಶದ ಎಲ್ಲಾ ದೇಶೀಯ ತಳಿಗಳ ಗೋವು ಪ್ರದರ್ಶನ, ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರ ಮತ್ತು ಬೀದಿನಾಯಿಗಳಿಗೆ …
Read More »ಟನ್ ಕಬ್ಬಿಗೆ 2800 ರೂ. ದರ
ಕಾಗವಾಡ: ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2800 ರೂ. ನೀಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಂಪವಾಡದ ಅಥಣಿ ಶುಗರ್ಸ್ ಲಿ., ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಹಾಗೂ ಶಾಸಕ ಶ್ರೀಮಂತ ಪಾಟೀಲ ಘೋಷಣೆ ಮಾಡಿದರು. ಬುಧವಾರ ಅಥಣಿ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿ ಅವರು ಮಾತನಾಡಿದರು. 2022-23ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆ 20 ಲಕ್ಷ ಟನ್ ಕಬ್ಬು …
Read More »ಸದ್ಯದಲ್ಲೇ ‘ಬಸ್ ಯಾತ್ರೆ’ಗೆ ದಿನಾಂಕ ನಿಗದಿ: ಮಂಡ್ಯದಲ್ಲಿ ಸಿದ್ದರಾಮಯ್ಯ ಘೋಷಣೆ
ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಬಹು ನಿರೀಕ್ಷಿತ ಬಸ್ ಯಾತ್ರೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡ್ಯದಲ್ಲಿ ಈ ವಿಚಾರ ತಿಳಿಸಿದ್ದಾರೆ. ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ರಾಜ್ಯದ …
Read More »ಸಹೋದರಿಯ ಗಂಡನನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಸಹೋದರರು
ಕಲಬುರಗಿ: ನಗರದ ಸಂತೋಷ್ ಕಾಲೊನಿಯಲ್ಲಿ ವಿಜಯದಶಮಿ ಹಬ್ಬದಂದು ಸಂಜೆ ಬನ್ನಿ ಬದಲಾಯಿಸಿಕೊಳ್ಳುವ ಸಂದರ್ಭದಲ್ಲಿಯೇ ಅಣ್ಣ ತಮ್ಮಂದಿರು, ಸಹೋದರಿಯ ಗಂಡನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಕಾಲೊನಿಯ ಲಕ್ಷ್ಮೀ ಕಾಂತ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ದಸರಾ ಹಬ್ಬದ ಅಂಗವಾಗಿ ಬನ್ನಿ ಬಂಗಾರ ಕೊಡಲು ಮನೆಗೆ ಬಂದ ಹೆಂಡತಿಯ ಸಹೋದರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಶಿವಕಾಂತ್, ಪ್ರಶಾಂತ್ ಎಂಬುವವರು ಈ ಕೊಲೆ ಮಾಡಿದ್ದು, ಕೊಲೆಯಾದ ಲಕ್ಷ್ಮಿಪುತ್ರನ …
Read More »ಅಕ್ಟೋಬರ್ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್ ಕುಮಾರ್
ಬೆಂಗಳೂರು: ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಅಕ್ಟೋಬರ್ 28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷ ‘ಮಾತಾಡ್ ಮಾತಾಡ್ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ಈಗಾಗಲೇ ನಾಡಿನಾದ್ಯಂತ …
Read More »