Breaking News

Yearly Archives: 2022

ಭಾಲ್ಕಿ ಶ್ರೀಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಗದಗ: ‘ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಸಕ್ತ ಸಾಲಿನಲ್ಲಿ ಬೀದರ್‌ನ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಪ್ರದಾನ ಮಾಡಲಾಗುವುದು’ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್‌.ಎಸ್‌.ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅ.6ರಂದು ಇಲ್ಲಿ ನಡೆಯುವ ಲಿಂ.ಡಾ.ತೋಂಟದ ಸಿದ್ಧಲಿಂಗಸ್ವಾಮೀಜಿಯವರ ನಾಲ್ಕನೇ ಪುಣ್ಯಸ್ಮರಣೆ, ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Read More »

ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನವರಾತ್ರಿ ಮಹೋತ್ಸವ ಅಂಗವಾಗಿ ಸಮೀಪದ ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು. ಹಲವಾರು ಮಹಿಳೆಯರು ಉಡಿ ತುಂಬುವ ಸಂಪ್ರದಾಯದಲ್ಲಿ ಪಾಲ್ಗೊಂಡರು.   ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ದೇವಸ್ಥಾನ ಆಡಳಿತ ಮಂಡಳಿ, ಸಕಲ ವ್ಯವಸ್ಥೆ ಕಲ್ಪಿಸಿದರು. ಪರಮೇಶ್ವರಿ ಮೂರ್ತಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಹಿಳೆಯರು ಆರತಿ ತಟ್ಟೆ ಹಿಡಿದು, ಕುಂಕುಮ, …

Read More »

ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು

ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್‌ ನಡೆಯಿತು. ಇಲ್ಲಿನ ಕ್ಯಾಂಪ್‌ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್‌ ಅಂಗವಾಗಿ ಕ್ಯಾಂಪ್‍ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …

Read More »

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್​​​ನಲ್ಲಿ ನಡೆದಿದೆ. ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ್ ಮನೆಯ ಬಳಿ ಪದೇ ಪದೆ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ …

Read More »

ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್​ ಮಾಡಬೇಕು: ಬಸವಗೌಡ ಪಾಟೀಲ

ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್​ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್​ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್​​ಎಸ್​ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್​​ಎಸ್​ಎಸ್​ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. …

Read More »

ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …

Read More »

ಗಾಂಧಿ ಜಯಂತಿಯಂದು 2 ಟನ್ ಗೋಮಾಂಸ ಸಾಗಣೆ: ಐವರು ಆರೋಪಿಗಳ ಬಂಧನ

ಕಾರವಾರ(ಉತ್ತರ ಕನ್ನಡ): ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮೂರು ವಾಹನಗಳ ಸಮೇತ ಬಂಧಿಸಿರುವ ಘಟನೆ ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್​ನಲ್ಲಿ ಭಾನುವಾರ ನಡೆದಿದೆ. ಹುಬ್ಬಳ್ಳಿಯಿಂದ ಗೋವಾ ಕಡೆಗೆ ಹಸುಗಳನ್ನು ವಧೆ ಮಾಡಿ ಮಾಂಸವನ್ನು ಎರಡು ಮಹೀಂದ್ರ ಬುಲೆರೋ ಪಿಕಪ್ ಹಾಗೂ ಒಂದು ಟಾಟಾ 407 ವಾಹನದಲ್ಲಿ ಗೋವಾಕ್ಕೆ ಸಾಗಿಸುತ್ತಿದ್ದ ಬಗ್ಗೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನಾ ಪನ್ನೇಕರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು.‌ …

Read More »

ಗದಗ _ಬೆಟಗೇರಿ ಅವಳಿ ನಗರದಲ್ಲಿ ಹದಗೆಟ್ಟ ರಸ್ತೆ‌ ರಿಪೇರಿ ಮಾಡಿಸಿ.. ಶಾಸಕ ಹೆಚ್ ಕೆ ಪಾಟೀಲ್

ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗದಗ ಮತಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್​ ಮನವಿ ಮಾಡಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ಸಂಚರಿಸುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ …

Read More »

ಭ್ರಷ್ಟಾಚಾರ ಮೊಟ್ಟೆಗೆ ಕಾವು ಕೊಟ್ಟಿದ್ದೇ ಕಾಂಗ್ರೆಸ್‌: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್‌ ಭ್ರಷ್ಟಾಚಾರದ ಮೊಟ್ಟೆಯಿಟ್ಟು, ಅದಕ್ಕೆ ದಿನವೂ ಕಾವು ಕೊಟ್ಟು, ನೂರಾರು ಮರಿ ಹುಟ್ಟು ಹಾಕಿ ರಕ್ತಬೀಜಾಸುರರಂತೆ ಬೆಳೆಸಿದೆ. ಅದನ್ನು ಎಷ್ಟೇ ತೊಡೆದು ಹಾಕಲು ಪ್ರಯತ್ನಿಸಿದರೂ ಕಾಂಗ್ರೆಸ್‌ ಕಸ(ಹುಲ್ಲು)ದಂತೆ ಬೆಳೆಯುತ್ತಿದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್‌. ಈಗ ನಕಲಿ ಗಾಂಧಿ ಪರಿವಾರ ಈ ಬಗ್ಗೆ ಮಾತನಾಡುತ್ತಿರುವುದೇ ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯತೆ …

Read More »

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್‌’ ತಲುಪಿಲ್ಲ. ಟ್ಯಾಬ್‌ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ …

Read More »