Breaking News

Yearly Archives: 2022

ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ದಾವಣಗೆರೆ: ರೀಲ್ಸ್ (Reels) ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davangere) ಜಿಲ್ಲೆ ಹರಗನಹಳ್ಳಿ ಚೆಕ್ ಡ್ಯಾಂ ಬಳಿ ನಡೆದಿದೆ. ಮೃತರನ್ನು ಹರಿಹರದ ಆಶ್ರಯ ಬಡಾವಣೆ ಪವನ್ (25), ಪ್ರಕಾಶ್ (24) ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು, ರೀಲ್ಸ್ ಮಾಡಲು ಹೋಗಿ ನೀರಲ್ಲಿ ಬಿದ್ದ ಪ್ರಕಾಶ್ ನನ್ನು ರಕ್ಷಿಸಲು ಹೋಗಿ ಪವನ್ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 

Read More »

ನಾನು ಬ್ಲ್ಯಾಕ್‌ ಇದ್ದೇನೆ, ಆದ್ರೆ ಬ್ಲ್ಯಾಕ್‌ ಮೇಲರ್ ಅಲ್ಲ:H.D.K.

ರಾಮನಗರ: ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ (Blackmail) ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ತಿಳಿಸಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ …

Read More »

A.I.C.C. ಅಧ್ಯಕ್ಷಗಾದಿ ಅಲಂಕರಿಸುತ್ತಾರಾ ಎರಡನೇ ಕನ್ನಡಿಗ, ದಲಿತ ನಾಯಕ ಖರ್ಗೆ !

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಪ್ರಾಬಲ್ಯ ತಾತ್ಕಾಲಿಕವಾಗಿ ಅಂತ್ಯಕಾಣುವ ಸಾಧ್ಯತೆ ಗೋಚರಿಸುತ್ತಿದ್ದು, ಪಕ್ಷದ ಅಧ್ಯಕ್ಷಗಾದಿಗೆ ಸ್ಪರ್ಧಿಸಿದವರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸರ್ವೋಚ್ಛ ಸ್ಥಾನಕ್ಕೆ ಏರುವ ಸಾಧ್ಯತೆ ಹೆಚ್ಚಾಗಿ ಗೋಚರಿಸುತ್ತಿದೆ. ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಜತೆ ರಾಷ್ಟ್ರೀಯ ನಾಯಕ ಶಶಿ ತರೂರ್ ಸಹ ಪ್ರಬಲ ಸ್ಪರ್ಧಿ. ಖರ್ಗೆ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಕಡೆಯ ಕ್ಷಣದಲ್ಲಿ ಸ್ಪರ್ಧಾ …

Read More »

ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ಭಾನುವಾರ ಹಿರಿಯ‌ ಮುಖಂಡ ಎಸ್.ಎಂ ಕೃಷ್ಣ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಮಾಜಿ ಸಿಎಂ ಇದೀಗ ಸಂಪೂರ್ಣ ಗುಣಮುಖರಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆಸ್ಪತ್ರೆಗೆ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು ಭೇಟಿ ನೀಡಿ, ಮಾಜಿ ಸಿಎಂ ಆರೋಗ್ಯ …

Read More »

ಗಾಂಧಿ ಜಯಂತಿ ಹಿನ್ನೆಲೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಗಾಂಧಿ ಜಯಂತಿಯ ಪ್ರಯುಕ್ತ ನಾಳೆ ಅಕ್ಟೋಬರ್ 2ರಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ವಿಭಾಗ ಆದೇಶ ಹೊರಡಿಸಿದೆ.   ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Read More »

ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ

ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …

Read More »

ಡಿಕೆಶಿ, ಸಿದ್ದರಾಮಯ್ಯ ಎಂದರೆ 3 ,6 ಇದ್ದ ಹಾಗೆ, ಎಣ್ಣೆ ಮತ್ತು ಸೀಗೇ ಕಾಯಿ ಒಂದಾಗಲು ಸಾಧ್ಯವೇ?

ಬೆಂಗಳೂರು: ಡಿಕೆ ಶಿವಕುಮಾರ್​​ ಹಾಗೂ ಸಿದ್ದರಾಮಯ್ಯ ಅಂದರೆ 36 ಇದ್ದಂತೆ‌. ಎರಡೂ ಮುಖ ಎಂದಿಗೂ ಸೇರುವುದಿಲ್ಲ. ಎಣ್ಣೆ ಮತ್ತು ಸೀಗೇ ಕಾಯಿ ಒಂದಾಗಲು ಸಾಧ್ಯವೇ? ಎಂದೂ ಸಾಧ್ಯವಿಲ್ಲ. ಅವರಿಬ್ಬರೂ ಒಂದಾಗಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರಿಬ್ಬರೂ ಒಂದಾಗಲು ಪ್ರಯತ್ನ ಮಾಡುತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಟೀಕಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತ್ ಜೋಡೋದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಾಗಿ ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರಿಬ್ಬರ ದಾರಿ …

Read More »

ಐಸಿಯುನಲ್ಲಿದ್ದ ಅಜ್ಜಿಯನ್ನು ಸಬ್​ ರಿಜಿಸ್ಟರ್ ಕಚೇರಿಗೆ ಕರೆತಂದು ಆಸ್ತಿ ಪತ್ರಕ್ಕೆ ಸಹಿ: ಬೆಳಗಾವಿಯಲ್ಲೊಂದು ಘಟನೆ

ಬೆಳಗಾವಿ: ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ …

Read More »

ವರ್ಕೌಟ್ ವೇಳೆ ಹೃದಯ ಸ್ತಂಭನ: Jr ಸಲ್ಮಾನ್ ಖಾನ್ ನಿಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಿನಿಮಾಗಳಲ್ಲಿ ಡೂಪ್ ಆಗಿ ಅಭಿನಯಿಸುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯ ಸ್ತಂಭನವಾಗಿ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ಸಾಗರ್ ಪಾಂಡೆ ನಿಧನಕ್ಕೆ ಸಿನರಂಗ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಸಾಗರ್ ಪಾಂಡೆ ಭಜರಂಗಿ ಭಾಯಿಜಾನ್‌ ಸಿನಿಮಾ ಸೇರಿದಂತೆ ಸುಮಾರು 50 ಸಿನಿಮಾಗಳಲ್ಲಿ ಡೂಪ್ ಆಗಿದ್ದರು. ಕಬೀರ್ ಖಾನ್ ನಿರ್ದೇಶನದ 2015ರ ಭಜರಂಗಿ ಭಾಯಿಜಾನ್ ಸೆಟ್‌ನ ಥ್ರೋಬ್ಯಾಕ್ ಚಿತ್ರವನ್ನು ಸಲ್ಮಾನ್ …

Read More »

ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ

ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ …

Read More »