ಶಿವಮೊಗ್: ಸೊರಬ ತಾಲ್ಲೂಕಿನ ವಾಸಿಯಾದ ತಿಮ್ಮಪ್ಪ ಎಂಬ 42 ವರ್ಷದ ವಯಸ್ಸಿನ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕರ ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ.ಈ ಬಗ್ಗೆ ಸೈಬರ್ ಟಿಪ್ ಲೈನ್ ನಿಂದ ಬಂದ ದೂರಿನ ಮೇರೆಗೆ 12-01-2020 ರಂದು ಶಿವಮೊಗ್ಗ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ತನಿಖಾಧಿಕಾರಿ …
Read More »Yearly Archives: 2022
ಇತಿಹಾಸ ಬರೆದ ಹು-ಧಾ ಮೇಯರ್: ಬ್ರಿಟಿಷ್ ಕಾಲದ ಸಂಪ್ರದಾಯಕ್ಕೆ ಬೈ ಬೈ- ಹೊಸತನಕ್ಕೆ ಮುನ್ನುಡಿ.
ಧಾರವಾಡ: ತಲೆತರಾಂತರಗಳ ಶಿಷ್ಟಾಚಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ತಿಲಾಂಜಲಿ ಇತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೇಯರ್ ಎಂದಾಕ್ಷಣ ನೆನಪಾಗುವುದು, ಗೌನ್. ಬ್ರಿಟಿಷರ ಕಾಲದಿಂದಲೂ ಗೌನ್ ಧರಿಸಿಕೊಂಡು ಮೇಯರ್ ಸಭೆಗೆ ಹಾಜರಾಗುವುದು ಸಂಪ್ರದಾಯ. ಆದರೆ ಇದೇ ಸಂಪ್ರದಾಯಕ್ಕೆ ತಿಲಾಂಜಲಿ ಇತ್ತು ಇತಿಹಾಸ ಸೃಷ್ಟಿಸಿದ್ದಾರೆ ಬಿಜೆಪಿಯ ಮೇಯರ್ ಈರೇಶ ಅಂಚಟಗೇರಿ. ಕಳೆದ ವಾರ ರಾಷ್ಟ್ರಪತಿ, ಮುಖ್ಯಮಂತ್ರಿಗಳು ಆಗಮಿಸಿದ್ದ ವೇಳೆ ಕೂಡ ಈ ಸಂಪ್ರದಾಯವನ್ನು ಮುರಿದು ಗೌನ್ ಧರಿಸದೇ ಅವರನ್ನು ಸ್ವಾಗತಿಸಿದ್ದ ಮೇಯರ್ ಈರೇಶ …
Read More »ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ. ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ …
Read More »ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು. ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ. ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ …
Read More »ಮೈಸೂರು ಅರಮನೆ; ಇತಿಹಾಸ, ನಿರ್ಮಾಣ ಖರ್ಚು, ವಿನ್ಯಾಸ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ
ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ವಿಶ್ವದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಮೈಸೂರು ಅರಮನೆ ಮೈಸೂರು ದಸರಾದ ಕೇಂದ್ರ ಬಿಂದುವಾಗಿದೆ. ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುವ ಅರಮನೆ ದಸರಾ ಬರುತ್ತಿದ್ದಂತೆಯೇ ಥೇಟ್ ಇಂದ್ರನ ಅಮರಾವತಿಯಾಗಿ ಬಿಡುತ್ತದೆ. ಮೈಸೂರು ದಸರಾದ ಪ್ರಮುಖ ವಿಧಿ ವಿಧಾನಗಳು ಇಲ್ಲಿಯೇ ನಡೆಯುತ್ತದೆ. ಖಾಸಗಿ ದರ್ಬಾರ್ ರಾಜವೈಭವಕ್ಕೆ ಸಾಕ್ಷಿಯಾಗಿದೆ. ಯಾರೇ ಆಗಲಿ ಮೈಸೂರು ಅರಮನೆ ನೋಡುತ್ತಿದ್ದಂತೆಯೇ ಇತಿಹಾಸವನ್ನು ಮೆಲುಕು ಹಾಕುವ ಪ್ರಯತ್ನ ಮಾಡುತ್ತಾರೆ. ಮೈಸೂರು …
Read More »ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರ ಸಂಗಮ
ಮೈಸೂರು: ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್‌ವುಡ್ ನೈಟ್’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ-ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು. ಹೊರಗೆ ಮಳೆಯಾಗುತ್ತಿದ್ದರೆ, ಒಳಗೆ ರಂಜನೆಯ ಸುರಿಮಳೆ ಜೋರಾಗಿಯೇ ಸುರಿಯಿತು. ಯುವ ದಸರಾ ಉಪ ಸಮಿತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟ-ನಟಿಯರು ಸರಣಿ ಕಾರ್ಯಕ್ರಮ ನೀಡಿ ರಂಜಿಸಿದರು. ಆಗಾಗ ಪುನೀತ್ ರಾಜ್‌ಕುಮಾರ್ …
Read More »ಗಂಡನ ಕೊಲೆ, ಹೆಂಡತಿಯ ಆತ್ಮಹತ್ಯೆ, ತಬ್ಬಲಿಯಾದ ಮಕ್ಕಳು; ಪ್ರೇಮಿಗಳ ದುರಂತ ಅಂತ್ಯ
ಹುಬ್ಬಳ್ಳಿ : ಲವ್, ಮರ್ಡರ್, ಸೂಸೈಡ್. ಪ್ರೇಮಿಗಳ (Couple) ದುರಂತ ಅಂತ್ಯ. ತಬ್ಬಲಿಗಳಾದ ಪುಟ್ಟ ಮಕ್ಕಳು. ಇಂಥದ್ದೊಂದು ಮನಕಲುಕುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮನೆಯವರ ವಿರೋಧದ ನಡುವೆಯೇ ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು (Love Marriage). ಇಬ್ಬರು ಪುಟ್ಟ ಕಂದಮ್ಮಗಳು, ಮೂರನೇ ಕೂಸು ಹೊಟ್ಟೆಯಲ್ಲಿತ್ತು. ದುಡಿದೋ ಹಾಕೋ ಶಕ್ತಿ ಗಂಡನ (Husband) ರೆಟ್ಟೆಯಲ್ಲಿತ್ತು. ಇಂತಹ ಸುಂದರ ಸಂಸಾರದ ಮೇಲೆ ಬಡಿದ ಬರಸಿಡಿಲು ಲವ್ ಬರ್ಡ್ ಕನಸನ್ನು ನುಚ್ಚು ನೂರು ಮಾಡಿದೆ. …
Read More »ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಖರ್ಗೆ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ!
ಬೆಂಗಳೂರು: ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಸಮೀಪಿಸುತ್ತಿದ್ದು, ಸಂಸದ ಶಶಿ ತರೂರ್ ಮತ್ತು ಮಾಜಿ ಸಚಿವ ಕೆ.ಎನ್.ತ್ರಿಪಾಠಿ, ಗಾಂಧಿ ಪರಿವಾರದ ನಿಷ್ಠ ಮತ್ತು ಪಕ್ಷದ ಶಿಸ್ತಿನ ಸಿಪಾಯಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ. ನಿನ್ನೆಯಷ್ಟೇ ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದು, ಮುಂದಿನ ಕಾಂಗ್ರೆಸ್ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವಾಗಲೇ ಖರ್ಗೆ ಕುರಿತಾದ ಅಚ್ಚರಿಯ ಭವಿಷ್ಯವೊಂದು ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಭವಿಷ್ಯದ ಕುರಿತು ಭಾರೀ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ …
Read More »ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ತನ್ನೊಂದಿಗೆ ಮಲಗುವಂತೆ ಕೇಳಿದ ಆರೋಪ: ಮಂಜು ಪಾವಗಡ ಸಹೋದನಿಗೆ ಥಳಿತ
ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ …
Read More »ಮಹದಾಯಿ ಯೋಜನೆ’ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ದಸರಾ ಬಳಿಕ ಕಾಮಗಾರಿ
ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು …
Read More »