ಆಶ್ರಯ ಮನೆ ಫಲಾನುಭವಿಗಳ ಮನವಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿ ಆಶ್ರಯ ಮನೆ ಫಲಾನುಭವಿಗಳು ಸಿಎಂ ಬೆಂಗಾವಲು ವಾಹನ ತಡೆದು ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳ್ಳಿಯ ಸಿಎಂ ಅವರ ಆದರ್ಶ ನಗರದ ನಿವಾಸದ ಎದುರು ನಡೆದಿದೆ. ಜಗದೀಶ್ ನಗರ ಆಶ್ರಯ ಯೋಜನೆಯ 209 ಮನೆಗಳ ಹಂಚಿಕೆ ಹಾಗೂ ಹಕ್ಕು ಪತ್ರ ವಿತರಣೆ ಮಾಡುವಂತೆ ಫಲಾನುಭವಿಗಳು ಸಿಎಂಗೆ ಮನವಿ ಸಲ್ಲಿಸಲು ಆಗಮಿಸಿದ್ದರು. ಆದ್ರೆ ಸಿಎಂ ಅವರು ಸಮಯದ ಅಭಾವದಿಂದ ಅವರ ಮನವಿ ಸ್ವೀಕರಿಸದೆ …
Read More »Yearly Archives: 2022
ಸಂಜೆ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲನೇ ಸಭೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತೀರ್ಮಾನ: ಡಿ.ಕೆ. ಶಿ
ಬೆಳಗಾವಿಯಲ್ಲಿ ಸಂಜೆ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲನೇ ಸಭೆ ಹಮ್ಮಿಕೊಳ್ಳಲಾಗಿದೆ. ಈ ನೂತನ ಸಮೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಅವರ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಲಿದೆ ಎಂದರು. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪ್ರಕರಣದ ಆರೋಪಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, …
Read More »ವಿಧಾನಮಂಡಲದ ಚಳಿಗಾಲ ಅಧಿವೇಶನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು: ಸಭಾಪತಿ ರಘುನಾಥರಾವ್
ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ(ಡಿ.18) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ …
Read More »ಗರ್ಭಿಣಿ, ಬಾಣಂತಿ’ಯರಿಗೆ ನರೇಗಾದಲ್ಲಿ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಮಹಾತ್ಮಾಗಾಂಧಿ ನರೇಂಗಾ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ. ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ …
Read More »ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ
ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ.25 ರಿಂದ 35 ವರೆಗೆ ಸಹಾಯಧನವನ್ನು ನೀಡಲಾಗುವುದು. ಈ ವರ್ಷದಲ್ಲಿ …
Read More »ಶಾಮನೂರು ಶಿವಶಂಕರಪ್ಪ, ಖಂಡ್ರೆಗೆ ತುರ್ತು ನೋಟಿಸ್
ಬೆಂಗಳೂರು: ‘ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎನ್.ತಿಪ್ಪಣ್ಣ ಮಹಾಸಭಾದ ಸ್ಥಾನಗಳನ್ನು ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಅವರನ್ನು ಪದಚ್ಯುತಗೊಳಿಸಬೇಕು ಮತ್ತು ಮಹಾಸಭಾದಲ್ಲಿ ಲಿಂಗಾಯತ ಪದ ಸೇರ್ಪಡೆಗೆ ತಡೆ ನೀಡಬೇಕು’ ಎಂದು ಕೋರಲಾದ ಸಿವಿಲ್ ದಾವೆಗೆ ಸಂಬಂಧಿಸಿ ಮೂರು ಜನರಿಗೆ ತುರ್ತು ನೋಟಿಸ್ ಜಾರಿ ಗೊಳಿಸಲು ಬೆಂಗಳೂರು ಸಿಟಿ ಸಿವಿಲ್ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. …
Read More »ಸನ್‍ಬರ್ನ್ ಫೆಸ್ಟಿವಲ್’ಗೆ ಕೊನೆಗೂ ಅನುಮತಿ ನೀಡಿದ ಗೋವಾ ಸರಕಾರ
ಪಣಜಿ: ಗೋವಾದಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ‘ಸನ್‍ಬರ್ನ್ ಫೆಸ್ಟಿವಲ್’ಗೆ ಗೋವಾದ ಪ್ರವಾಸೋದ್ಯಮ ಇಲಾಖೆ ಅಂತಿಮವಾಗಿ ಅನುಮತಿ ನೀಡಿದೆ. ಸಂಗೀತೋತ್ಸವವು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತೋರ್‍ನಲ್ಲಿ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಈ ಉತ್ಸವವನ್ನು ನಡೆಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಈ ಸಂಗೀತ ಮಹೋತ್ಸವದಲ್ಲಿ ದೇಶ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೊಳ್ಳುವ ಇರೀಕ್ಷೆಯಿದೆ ಎಂದೇ ಹೇಳಲಾಗಿದೆ. ಗೋವಾ ಪ್ರವಾಸೋದ್ಯಮ ಇಲಾಖೆಯು ಸನ್‍ಬರ್ನ್ ಉತ್ಸವಕ್ಕೆ …
Read More »ಗೋವಾದ ಬೆಸಿಲಿಕಾ, ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ಕೇಂದ್ರದಿಂದ 41 ಕೋಟಿ ರೂ.ಅನುದಾನ
ಪಣಜಿ: ಓಲ್ಡ್ ಗೋವಾದ ಬೆಸಿಲಿಕಾ ಆಫ್ ಜೀಸಸ್ ಕ್ರೈಸ್ಟ್ ಮತ್ತು ಇತರ ಕೆಲವು ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ತೀರ್ಥಯಾತ್ರೆ ಮತ್ತು ಆಧ್ಯಾತ್ಮಿಕ ಮಿಷನ್ ಯೋಜನೆಯಡಿ ಕೇಂದ್ರದಿಂದ 41.49 ಕೋಟಿ ರೂ.ಗಳ ನಿಧಿಯನ್ನು ಮಂಜೂರು ಮಾಡಲಾಗಿದೆ. ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿರುವ ಓಲ್ಡ್ ಗೋವಾ ಚರ್ಚ್‍ಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. 2024ರಲ್ಲಿ ಓಲ್ಡ್ ಗೋವಾದಲ್ಲಿ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಅವರ ದೇಹವನ್ನು ಪ್ರದರ್ಶಿಸಲಾಗುವುದು ಮತ್ತು ಅದಕ್ಕೂ ಮೊದಲು ಸಂಬಂಧಿತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು …
Read More »ಸಭಾಪತಿಗೆ ನನ್ನ ಹೆಸರು ಫೈನಲ್: ಬಸವರಾಜ ಹೊರಟ್ಟಿ
ಧಾರವಾಡ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಡಳಿತರೂಢ ಬಿಜೆಪಿ ಪಕ್ಷದಿಂದ ನನ್ನ ಹೆಸರು ಅಂತಿಮಗೊಂಡಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭಾಪತಿ ಸ್ಥಾನದ ಅಭ್ಯರ್ಥಿಯಾದ ಬಗ್ಗೆ ಬಿಜೆಪಿ ಮುಖಂಡರಾದ ರವಿಕುಮಾರ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಶೀಘ್ರ ಅಧಿಕೃತ ಅಭ್ಯರ್ಥಿಯಾಗಿಯೂ ಪ್ರಕಟಣೆ ಹೊರ ಬೀಳಲಿದೆ. ಈ ಸಿಹಿ ಸುದ್ದಿ ನೀಡಿದ ರವಿಕುಮಾರ ಅವರಿಗೆ ಧನ್ಯವಾದ ತಿಳಿಸಿದ್ದೇನೆ. ಉತ್ತರ ಕರ್ನಾಟಕದ ನಮ್ಮ ಸಮಸ್ಯೆಗಳಿಗೆ ಪ್ರತಿಫಲ ಬೇಕಷ್ಟೇ. ಹೀಗಾಗಿ …
Read More »ನಮ್ಮದೆಂಬ ಭಾವ ಮೂಡಿಸುತ್ತಿದೆ ಕ್ಲಿನಿಕ್; 12 ಬಗೆಯ ಆರೋಗ್ಯ ಸೇವೆ
ಬೆಳಗಾವಿ: ನಗರ ಪ್ರದೇಶದ ಬಡ ವರ್ಗದ ಜನರಿಗೆ ವಿಶೇಷವಾಗಿ ಕಾರ್ಮಿಕ ವರ್ಗಕ್ಕೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ಆರಂಭ ಮಾಡಿರುವ ನಮ್ಮ ಕ್ಲಿನಿಕ್‌ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರಲ್ಲಿ ಸಹ ಇದು ನಮ್ಮ ಕ್ಲಿನಿಕ್ ಎಂಬ ಭಾವನೆ ಬರುತ್ತಿದೆ. ಈ ನಮ್ಮ ಕ್ಲಿನಿಕ್‌ನಲ್ಲಿ 12 ಬಗೆಯ ಆರೋಗ್ಯ ಸೇವೆಗಳು ದೊರೆಯಲಿವೆ. ಗರ್ಭಿಣಿ-ಶಿಶು ಆರೈಕೆ, ಮಕ್ಕಳ ಚಿಕಿತ್ಸೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, …
Read More »