Breaking News

Yearly Archives: 2022

ಒಂಬತ್ತು ತಿಂಗಳ ಹಿಂದೆ ಬಿದ್ದು ಹೋಗಿದೆ. ಆದರೆ ಇಲ್ಲಿಯ ತನಕ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಹಾಗಾಗಿಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

ಬೆಳಗಾವಿ: ಅತಿವೃಷ್ಟಿಯಿಂದ ಮನೆ ಬಿದ್ದು 9 ತಿಂಗಳು‌ ಕಳೆದರೂ, ಪರಿಹಾರ ನೀಡದ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸದ್ಯ ನೆರೆ ಸಂತ್ರಸ್ತ ವ್ಯಕ್ತಿಯ ಈ ವಿಡಿಯೋ ವೈರಲ್​ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬುವರು ಮೊಬೈಲ್ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಅಲ್ಲದೇ ಶಾಸಕಿ ಅಂಜಲಿ‌‌‌ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಣೆ

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಪೌರಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಿಳೆಯರ ಆಯೋಜಿಸಲಾಗಿತ್ತು. ವಾರ್ಡ್ ನಂ.25ರ ಸಫಾಯಿ ಕರ್ಮಚಾರಿ ಲಕ್ಷ್ಮೀ ಭಾಗಣ್ಣ ತಳವಾರ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಜೇತರಾದರು. ವಿಜೇತ ಲಕ್ಷ್ಮೀ ಅವರಿಗೆ ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಬಹುಮಾನ ವಿತರಿಸಿದರು. ಇದೇ ವೇಳೆ ಸಿಹಿತಿಂಡಿಗಳನ್ನು ಸಹ ವಿತರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಶ್ರವಣ್ ಕಾಂಬ್ಳೆ, ಸೂಪರ್‍ವೈಸರ್ ಸಂಜಯ್ ಮೋರೆ, ಸೂಪರ್‍ವೈಸರ್ ಲಕ್ಷ್ಮಣ ರಾಥೋಡ್, …

Read More »

ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟ

ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲಿಂಡರ್ ಸ್ಫೋಟವಾಗಿ ಬಿಸಿಯೂಟದ ಆಹಾರ ಧಾನ್ಯ ಮುಂತಾದ ಪರಿಕರಗಳು ಸುಟ್ಟು ಕರಕಲಾಗಿರುವ ಘಟನೆ ಗೋಕಾಕ್‍ನ ವಿವೇಕಾನಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದದಿಂದ ಗೋಕಾಕ್‍ನ ವಿವೇಕಾನಂದ ನಗರದಲ್ಲಿ ಸ್ಥಳಾಂತರಗೊಂಡಿರುವ ಡಾ..ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೌದು ಅಡುಗೆ ಮಾಡುತ್ತಿರುವಾಗ ಸಿಲಿಂಡರ್‍ನಿಂದ ಭಾರಿ ಶಬ್ದ ಕೇಳಿ ಬಂದಿದೆ. ತಕ್ಷಣವೇ ಅಡುಗೆ ಮಾಡುವವರು ಹೆದರಿ ಹೊರಗೆ ಓಡಿ …

Read More »

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …

Read More »

9 ದಿನ ಚಪ್ಪಲಿಗೆ ಗೂಡ್ ಬೈ ಹೇಳಿದ ಅಂಜಲಿ ನಿಂಬಾಳ್ಕರ್..!

ಖಾನಾಪೂರ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ನವರಾತ್ರಿ ನಿಮಿತ್ಯ ಆದಿಶಕ್ತಿಯನ್ನು ಜಪಿಸಲು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಂದಿನಿಂದ 9 ಉಪವಾಸ ವೃತ ಕೈಗೊಂಡು, ಕಾಲಿನಲ್ಲಿ ಚಪ್ಪಲಿ ಧರಿಸದೇ ತಮ್ಮ ವೃತವನ್ನು ಆರಂಭಿಸಿದ್ದಾರೆ. ನವರಾತ್ರಿಯ 9 ದಿನ ಆದಿಶಕ್ತಿ, ಜಗನ್ಮಾತೆಯನ್ನು ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದ್ರೆ ದೇವಿ ಬೇಡಿದ್ದನ್ನು ಕೊಡುತ್ತಾಳೆ ಎಂಬ ನಂಬಿಕೆಯಿದೆ. ಹೀಗಾಗಿ ಖಾನಾಪೂರ ತಾಲೂಕಿನ ಜನತೆಯ ಶಾಂತಿ ನೆಮ್ಮದಿ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು …

Read More »

ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಹಾಪೌರ ಈರೇಶ ಅಂಚಟಗೇರಿ ಅವರು ರಾಷ್ಟ್ರಪತಿ ಅವರಿಗೆ ರೇಷ್ಮೆ ಶಾಲು, ಸಿದ್ಧಾರೂಢ ಸ್ವಾಮೀಜಿಯವರ ಬೆಳ್ಳಿ ಮೂರ್ತಿ, ಸಿದ್ಧಾರೂಢರ ಕುರಿತ ಪುಸ್ತಕ, ಧಾರವಾಡ ಪೇಡ ನೀಡಿ ಗೌರವಿಸಲಾಯಿತು.   ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು, ಒರಿಸ್ಸಾದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹೆಣ್ಞುಮಗಳಿಗೆ …

Read More »

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. …

Read More »

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರಿಗಿಲ್ಲ ಆಸನ; ಹುಬ್ಬಳ್ಳಿಯಲ್ಲಿ ಆಗಿದ್ದೇನು?

ಹುಬ್ಬಳ್ಳಿ: ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲವೆಂದು ಪಾಲಿಕೆ ಕಾಂಗ್ರೆಸ್ ಸದಸ್ಯರು ಕೆಲ ಕಾಲ ನೆಲದ ಮೇಲೆ ಕುಳಿತ ಘಟನೆ ನಡೆಯಿತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಆಸನ ವ್ಯವಸ್ಥೆ ಮಾಡಿದರು.   ವೇದಿಕೆಯಲ್ಲಿ ಪಾಲಿಕೆ ವಿಪಕ್ಷ ನಾಯಕರಿಗೆ ಅವಕಾಶ ನೀಡಿಲ್ಲವೆಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದರು. ಸೋಮವಾರ ಬೆಳಿಗ್ಗೆ ಮನಸ್ಸು ಬದಲಿಸಿ ಕಾರ್ಯಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದರು. ಪಾಲಿಕೆ ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸಿದಾಗ ಪಾಲಿಕೆ ಸದಸ್ಯರಿಗೆಂದು ನಿಗದಿ …

Read More »

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯುಟ್ಟು ದಸರೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವ ಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. …

Read More »

ಮಾರ್ಕಂಡೇಯ ಡ್ಯಾಮ್‍ಗೆ ಹೋಯ್ತು ಭೂಮಿ: ಈಗ ಊರು ಇಲ್ಲದೇ ಅತಂತ್ರ ಸ್ಥಿತಿಯಲ್ಲಿ ಪಣಗುತ್ತಿ ಸಂತ್ರಸ್ತರು..!

ಇವರೆಲ್ಲಾ ಮಾರ್ಕಂಡೇಯ ಡ್ಯಾಮ್ ಕಟ್ಟಲು ತಮ್ಮ ಇದ್ದ ಭೂಮಿಯನ್ನೇ ಬಿಟ್ಟು ಕೊಟ್ಟವರು. ಆದರೆ ಇಂದು ಸರಿಯಾದ ಸೂರು ಇಲ್ಲದೇ, ಊರು ಇಲ್ಲದೇ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಸಂತ್ರಸ್ತರು ಪುನರ್ವಸತಿ ಕಲ್ಪಿಸಿ ತಮ್ಮ ಗ್ರಾಮವನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಹೋರಾಟದ ಹಾದಿ ಹಿಡಿದಿದ್ದಾರೆ. ಮಾರ್ಕಂಡೇಯ ನದಿಯ ಹಿನ್ನಿರಿನಲ್ಲಿ 2002ರಲ್ಲಿ ಮುಳುಗಡೆ ಆಗಿರುವ ಬೆಳಗಾವಿ ತಾಲೂಕಿನ ಪಣಗುತ್ತಿ ಗ್ರಾಮದ ಜನರು ಅಂದು ಭೂಮಿ ಕಳೆದುಕೊಂಡಿದ್ದರು. ಇದೀಗ ಇಲ್ಲಿನ ಸಂತ್ರಸ್ತರು ಹೆಚ್ಚಿನ ಪ್ರಮಾಣದಲ್ಲಿ …

Read More »