ಹಾವೇರಿ, ಸೆಪ್ಟೆಂಬರ್ 21: ರಾಣೇಬೆನ್ನೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆ 300ರಿಂದ 500 ಜನರ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಕಾಕಿ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದ್ದು, ದರ್ಗಾ ಸರ್ಕಲ್‌ಗೆ ಬಂದಾಗ ಅನ್ಯಕೋಮಿನ ಗುಂಪು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದರ್ಗಾ …
Read More »Yearly Archives: 2022
ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿದ ಕೆಪಿಸಿಸಿ ಜಾಲತಾಣ ಮುಖ್ಯಸ್ಥನ ಬಂಧನ! ಕಲಾಪ ಮುಂದೂಡಿಕೆ
ಬೆಂಗಳೂರು: ಕಾಂಗ್ರೆಸ್ನ ಸೋಷಿಯಲ್ ಮೀಡಿಯಾ ಚೀಫ್ ಬಿ.ಆರ್ ನಾಯ್ಡು ಹಾಗೂ ಅರುಣ್ ಎನ್ನುವವರನ್ನು ಬುಧವಾರ ತಡರಾತ್ರಿ ಪೊಲೀಸರು ಬಂಧಿಸಿರುವುದು ಮೇಲ್ಮನೆಯಲ್ಲಿ ಗುರುವಾರ ವಾಗ್ವಾದ, ಗದ್ದಲಕ್ಕೆ ಕಾರಣವಾಯಿತು. ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪದೇ ಪದೇ ವಿನಂತಿಸಿದರೂ ಕಾಂಗ್ರೆಸ್ನವರ ಧರಣಿ, ಎರಡೂ ಕಡೆಯವರ ಪರ-ವಿರೋಧ ಧಿಕ್ಕಾರದ ಮೊಳಗು, ಮಾತಿನ ಚಕಮಕಿ ನಿಲ್ಲಲಿಲ್ಲ. ಇದರಿಂದಾಗಿ ಕಲಾಪವನ್ನು 10 ನಿಮಿಷ ಮುಂದೂಡಿದರು. ಸದನ ಸೇರುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ಗೊಂದು ಬಿಜೆಪಿಗೊಂದು ಕಾನೂನೇ, …
Read More »ಕಾಂಗ್ರೆಸ್ ಮುಖಂಡರ ಬಂಧನ: ಬಿಜೆಪಿಯಿಂದ ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ- ಡಿಕೆಶಿ
ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ನಗರದ ಪೊಲೀಸರು ಐವರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದು, ಹೈಗ್ರೌಂಡ್ಸ್ ಠಾಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಚಾರಿಸಿದ್ದಾರೆ. ಡಿಕೆಶಿ ಕಿಡಿ: ಪಕ್ಷದ ಮುಖಂಡರ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಬಿಜೆಪಿ ವಿರುದ್ಧ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ಕ್ಯಾಂಪೇನ್ ಮಾಡಲಾಗಿದೆ. ಇದು ಸತ್ಯ, …
Read More »ಲಂಚದ ಹಣ ವಾಪಸ್ ನೀಡುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿಗಳು
ಬೆಂಗಳೂರು: ಸಾಮಾನ್ಯವಾಗಿ ಲಂಚ ಪಡೆಯುವಾಗ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಆದರೆ ಈ ಪ್ರಕರಣದಲ್ಲಿ ಲಂಚ ಪಡೆಯುವಾಗ ಸಿಕ್ಕಿಬೀಳದೆ, ಲಂಚದ ಹಣವನ್ನು ವಾಪಸ್ ಕೊಡುವಾಗ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಎ.ಬಿ. ವಿಜಯಕುಮಾರ್ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್ ಬಂಧಿತ ಆರೋಪಿಗಳಾಗಿದ್ದಾರೆ. ವ್ಯಕ್ತಿಯೊಬ್ಬರ ಜಮೀನು ಸ್ವಾಧೀನಪಡಿಸಿಕೊಂಡಿಲ್ಲ ಎಂದು ನಿರಾಕ್ಷೇಪಣಾ ಪತ್ರ (ಎನ್ಓಸಿ) ಪತ್ರ ನೀಡಲು 2.5 ಲಂಚ ಪಡೆದಿದ್ದರು ಎನ್ನಲಾಗ್ತಿದೆ. …
Read More »ಅಥಣಿಯಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ನವಜಾತ ಮಗು ಪತ್ತೆ.. ಸಿಕ್ಕಿ ಬಿದ್ದ ಕಳ್ಳಿ
ಅಥಣಿ: ಸಿನಿಮೀಯ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಆದರೆ, ಎರಡೂವರೆ ಗಂಟೆಯಲ್ಲಿ ಮಗುವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಜನಿಸಿದ್ದ ನವಜಾತ ಗಂಡು ಮಗು ಪತ್ತೆ ಹಚ್ಚಿ ತಾಯಿಗೆ ಹಸ್ತಾಂತರಿಸುವಲ್ಲಿ ಅಥಣಿ ಮತ್ತು ಕಾಗವಾಡ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗಿನ ಜಾವ 10.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ನರ್ಸ್ …
Read More »ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ್ದ ಪತ್ನಿ
ಮಳವಳ್ಳಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ, ಶಾಂತಂ ಪಾಪಂ ಸೀರಿಯಲ್ ನಲ್ಲಿ ಬರುವ ಸನ್ನಿವೇಶದ ರೀತಿ ಹತ್ಯೆ ಮಾಡಿದ್ದ ಪತ್ನಿ ಮತ್ತು ಪ್ರಿಯಕರನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಇನ್ ಇಎಸ್ ಬಡಾವಣೆಯ ಶಶಿಕುಮಾರ್(35) ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಪತ್ನಿ ನಾಗಮಣಿ(28) ಹಾಗೂ ಪ್ರಿಯಕರ ಕನಕಪುರದ ನಿವಾಸಿ ಹೇಮಂತ್(25) ಬಂಧಿತರು. ನಾಗಮಣಿ ಮತ್ತು ಹೇಮಂತ್ ಕನಕಪುರ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿ ಅನೈತಿಕ …
Read More »ಶಿಕ್ಷಕರ ಅಕ್ರಮ ನೇಮಕಾತಿ: ಮತ್ತೊಬ್ಬ ಶಿಕ್ಷಕನ ಬಂಧನ
ವಿಜಯಪುರ: ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ. ಇದೀಗ ಮತ್ತೂಬ್ಬ ಶಿಕ್ಷಕ ಅಶೋಕ ಚವ್ಹಾಣ ಎಂಬಾತನನ್ನು ಬಂಧಿ ಸಿ ವಿಚಾರಣೆ ನಡೆಸಿದ್ದಾರೆ. ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಶಿಕ್ಷಕರ ಸರಣಿ ಬಂಧನ ಇಂಬು ನೀಡುತ್ತಿದೆ. ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕನಾಗಿ ಸೇವೆ …
Read More »ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಪ್ರತಿಭಟಿಸಿ ಕೆಸರು ನೀರಲ್ಲೇ ಸ್ನಾನ ಮಾಡಿದ ಶಾಸಕಿ
ರಾಂಚಿ: ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ (National Highway) ತುಂಬಿದ ಕೆಸರಲ್ಲಿ (Mud) ಕುಳಿತು ಶಾಸಕಿಯೊಬ್ಬರು (MLA) ಸ್ನಾನ (Bath) ಮಾಡಿ ಪ್ರತಿಭಟಿಸಿರುವ ಘಟನೆ ಜಾರ್ಖಂಡ್‌ನ (Jharkhand) ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಶಾಸಕಿ ಕೊಳಚೆ ನೀರಿನಲ್ಲಿ ಮಿಂದು ತಕ್ಷಣವೇ ರಸ್ತೆಯ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಮಹಾಗಾಮಾದ ಕಾಂಗ್ರೆಸ್ ಶಾಸಕಿ ದೀಪಿಕಾ ಪಾಂಡೆ ಸಿಂಗ್ ಅವರು ತಮ್ಮ ಮೇಲೆ ಕೆಸರು ನೀರನ್ನು ಸುರಿದುಕೊಂಡು, ಈ ರಸ್ತೆಯ ದುರಸ್ತಿಯನ್ನು ಕೈಗೊಂಡು ದೊಡ್ಡ ಗುಂಡಿಗಳನ್ನು ಮುಚ್ಚಲು ಈಗಿಂದೀಗಲೇ ಮುಂದಾಗದಿದ್ದರೆ, …
Read More »PAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ
ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜ್ಯ ರಾಜಕೀಯ ಕಾವೇರಿದೆ. ಬಿಜೆಪಿ (BJP) ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡ್ತಿರುವ ಕಾಂಗ್ರೆಸ್ (Congress), ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಇಂದು ಯುಪಿಐ ಪೇಮೆಂಟ್ (UPI Payment) ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ (PayCM) Poster ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು …
Read More »ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ
ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಯೋಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ ಅ.2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದುಪಡಿಸಿ ವಿತರಿಸಲು ತೀರ್ಮಾನಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ …
Read More »